ಹೈದರಾಬಾದ್ ಸೆಪ್ಟೆಂಬರ್ 02: ತೆಲಂಗಾಣದಲ್ಲಿ (Telangana) ಭಾರೀ ಮಳೆಗೆ ಇದುವರೆಗೆ ಕನಿಷ್ಠ 16 ಮಂದಿ ಸಾವಿಗೀಡಾಗಿದ್ದಾರೆ . ತೆಲಂಗಾಣ ಸರ್ಕಾರವು ಮೃತಪಟ್ಟವರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರವನ್ನು ಘೋಷಿಸಿದ್ದು ತಕ್ಷಣದ ಸಹಾಯಕ್ಕಾಗಿ ಕೇಂದ್ರವನ್ನು ಒತ್ತಾಯಿಸಿದೆ. ರೇವಂತ್ ರೆಡ್ಡಿ (Revanth Reddy) ನೇತೃತ್ವದ ತೆಲಂಗಾಣ ಸರ್ಕಾರವು ಪ್ರಾಥಮಿಕ ಅಂದಾಜಿನ ಪ್ರಕಾರ ₹ 5,000 ಕೋಟಿ ಹಾನಿಯಾಗಿದೆ ಎಂದು ಹೇಳಿದ್ದು ಕೇಂದ್ರದಿಂದ ₹ 2,000 ಕೋಟಿ ತಕ್ಷಣದ ನೆರವು ಕೋರಿದೆ. ಇದೇ ವೇಳೆ ತೆಲಂಗಾಣ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಘೋಷಿಸಬೇಕು ಎಂದು ರೆಡ್ಡಿ ಒತ್ತಾಯಿಸಿದರು.
ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕೃಷಿ ಬೆಳೆಗಳಿಗೆ ಹಾನಿಯಾಗಿದ್ದ, ಮಳೆಯಿಂದಾಗಿ ನೆರೆಯ ಆಂಧ್ರಪ್ರದೇಶದೊಂದಿಗೆ ರಾಜ್ಯದ ರೈಲು ಮತ್ತು ರಸ್ತೆ ಸಂಪರ್ಕವನ್ನು ಅಸ್ತವ್ಯಸ್ತಗೊಂಡಿದೆ.
ಇದನ್ನೂ ಓದಿ: ಜಮ್ಮು ಕಾಶ್ಮೀರ ಚುನಾವಣೆಗೆ ಬಿಜೆಪಿ 4ನೇ ಪಟ್ಟಿ ಬಿಡುಗಡೆ; ನೌಶೇರಾದಿಂದ ರವೀಂದರ್ ರೈನಾ ಸ್ಪರ್ಧೆ
ಅದಿಲಾಬಾದ್, ಕೊಮಾರಂ ಭೀಮ್ ಆಸಿಫಾಬಾದ್, ನಿರ್ಮಲ್, ನಿಜಾಮಾಬಾದ್, ಜಗ್ತಿಯಾಲ್, ಸಂಗಾರೆಡ್ಡಿ, ಮೇದಕ್, ಕಾಮರೆಡ್ಡಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸೆಪ್ಟೆಂಬರ್ 3 ರಂದು ಬೆಳಿಗ್ಗೆ 8.30 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತೆಲಂಗಾಣದ ಹವಾಮಾನ ಕೇಂದ್ರ ತಿಳಿಸಿದೆ. ಈ ಅವಧಿಯಲ್ಲಿ ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ (30-40 kmph) ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಈ ಮುನ್ಸೂಚನೆಗಾಗಿ ಯೆಲ್ಲೋ ಎಚ್ಚರಿಕೆಯನ್ನು ನೀಡಿದೆ.
ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೇವಂತ್ ರೆಡ್ಡಿ ಅವರೊಂದಿಗೆ ಮಾತನಾಡಿ ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ