Telangana Rain: ತೆಲಂಗಾಣದಲ್ಲಿ ಪ್ರವಾಹ ಭೀತಿ; ರೆಡ್ ಅಲರ್ಟ್ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ
Rain Updates: ಇಂದು ತೆಲಂಗಾಣಕ್ಕೆ ರೆಡ್ ಅಲರ್ಟ್ ನೀಡಲಾಗಿದೆ. ಹೈದರಾಬಾದ್ನಲ್ಲಿ ಬುಧವಾರ ಹಳದಿ ಅಲರ್ಟ್ ಘೋಷಿಸಲಾಗಿದೆ.
ಹೈದರಾಬಾದ್: ತೆಲಂಗಾಣದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಇಂದು ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಹೈದರಾಬಾದ್ ಮತ್ತು ತೆಲಂಗಾಣದ ಇತರ ಭಾಗಗಳಲ್ಲಿ ಇಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 4ರಿಂದ 5 ದಿನಗಳವರೆಗೆ ಭಾರೀ ಮಳೆಯಿಂದ ಉಳಿದ ಪ್ರದೇಶಗಳು ಮುಳುಗಡೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಇಂದು ತೆಲಂಗಾಣಕ್ಕೆ ರೆಡ್ ಅಲರ್ಟ್ ನೀಡಲಾಗಿದೆ.
ಹೈದರಾಬಾದ್ನಲ್ಲಿ ಬುಧವಾರದವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ಕುಮುರಂ ಭೀಮ್ ಆಸಿಫಾಬಾದ್, ನಿರ್ಮಲ್, ನಿಜಾಮಾಬಾದ್, ಪೆದ್ದಪಲ್ಲಿ, ರಾಜಣ್ಣ ಸಿರ್ಸಿಲ್ಲಾ, ಜಯಶಂಕರ್ ಭೂಪಾಲಪಲ್ಲಿ ಮತ್ತು ಮುಲುಗು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಹೆಚ್ಚಿದೆ.
#WATCH | Telangana: With rain lashing several parts of Mulugu, severe waterlogging causes distress to the people of the district.
As per South-Central Railways, 34 MMTS train services have been cancelled from 11 July to 13th July, due to heavy rain predictions. pic.twitter.com/qK6A3Y0SxN
— ANI (@ANI) July 11, 2022
ತೆಲಂಗಾಣದಲ್ಲಿ ಭಾರೀ ಮಳೆ ಮತ್ತು ಮುಂದಿನ ಮೂರು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಸೋಮವಾರ ಸಚಿವರು, ಶಾಸಕರು ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಇಂದು ನಲ್ಗೊಂಡ, ಸೂರ್ಯಪೇಟ್, ಮಹಬೂಬಾಬಾದ್, ಜನಾಂವ್, ಯಾದಾದ್ರಿ ಭುವನಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ಮುನ್ಸೂಚನೆ ನೀಡಿದೆ.
Lower Dir, Khyber Pakhtunkhwa as of today.
No headlines, no marathon transmissions and no “tweets” either. pic.twitter.com/jj9hajOIG8
— Maleeha Manzoor (@MaleehaManzoor) July 11, 2022
ಗುಜರಾತ್ ಜಿಲ್ಲೆಗಳ ಹಲವಾರು ಭಾಗಗಳಲ್ಲಿ ಭಾರೀ ಮಳೆಯು ಅನೇಕ ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿಯನ್ನು ಉಂಟುಮಾಡಿದೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳಲ್ಲಿ ಡ್ಯಾಂಗ್, ನವಸಾರಿ, ವಲ್ಸಾದ್, ತಾಪಿ ಮತ್ತು ಸೂರತ್‌ನಲ್ಲಿ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
Published On - 10:01 am, Tue, 12 July 22