AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ರಾಜಭವನವನ್ನು ಲೋಕ ಭವನ ಎಂದು ಮರುನಾಮಕರಣ

ತೆಲಂಗಾಣದ ರಾಜಭವನವನ್ನು ಲೋಕ ಭವನ ಎಂದು ಮರುನಾಮಕರಣ ಮಾಡಲಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಗುಜರಾತ್, ಅಸ್ಸಾಂ, ಕೇರಳ, ತ್ರಿಪುರ ಮತ್ತು ಒಡಿಶಾದ ರಾಜಭವನಗಳನ್ನು ಲೋಕಭವನಗಳೆಂದು ಮರುನಾಮಕರಣ ಮಾಡಿದ ತೆಲಂಗಾಣ ಇದೀಗ ಈ ನಿರ್ಧಾರ ತೆಗೆದುಕೊಂಡಿದೆ. 2022ರಲ್ಲಿ ರಾಜ್‌ಪಥ್ ಹೆಸರನ್ನು ಕರ್ತವ್ಯ ಪಥವೆಂದು ಬದಲಾಯಿಸುವ ಮೂಲಕ ಈ ಮರುನಾಮಕರಣಕ್ಕೆ ಚಾಲ್ತಿ ಸಿಕ್ಕಿತು.

ತೆಲಂಗಾಣದ ರಾಜಭವನವನ್ನು ಲೋಕ ಭವನ ಎಂದು ಮರುನಾಮಕರಣ
Raj Bhavan
ಸುಷ್ಮಾ ಚಕ್ರೆ
|

Updated on: Dec 02, 2025 | 5:56 PM

Share

ಹೈದರಾಬಾದ್, ಡಿಸೆಂಬರ್ 2: ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗ ತಮ್ಮ ರಾಜ್ಯಪಾಲರ ಅಥವಾ ಲೆಫ್ಟಿನೆಂಟ್ ಗವರ್ನರ್‌ಗಳ ನಿವಾಸಗಳನ್ನು ರಾಜಭವನ ಅಥವಾ ರಾಜ ನಿವಾಸದಿಂದ ಲೋಕಭವನ ಅಥವಾ ಲೋಕ ನಿವಾಸ ಎಂದು ಮರುನಾಮಕರಣ ಮಾಡಿವೆ. ತೆಲಂಗಾಣದ ರಾಜಭವನವನ್ನು ಲೋಕ ಭವನ ಎಂದು ಬದಲಾಯಿಸಲಾಗಿದೆ. ರಾಜ್ ನಿವಾಸವನ್ನು ಲೋಕ ನಿವಾಸ ಎಂದು ಮರುನಾಮಕರಣ ಮಾಡಲಾಗಿದೆ.

ನವೆಂಬರ್ 25ರಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ನಿರ್ದೇಶನಗಳ ಪ್ರಕಾರ, 8 ರಾಜ್ಯಗಳು ಈಗಾಗಲೇ ಈ ಹೆಸರುಗಳನ್ನು ಬದಲಾಯಿಸಿವೆ. ರಾಜಪ್ರಭುತ್ವವನ್ನು ಸೂಚಿಸುವ ‘ರಾಜ್’ ಎಂಬ ಪದವನ್ನು ಕೈಬಿಡಲಾಗಿದೆ. ಈಗಾಗಲೇ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಉತ್ತರಾಖಂಡ, ತ್ರಿಪುರ, ಗುಜರಾತ್ ಮತ್ತು ಒಡಿಶಾ ಈ ಬದಲಾವಣೆಗಳನ್ನು ಜಾರಿಗೆ ತಂದಿವೆ. ರಾಜಭವನ ಮತ್ತು ರಾಜ್ ನಿವಾಸಗಳ ಮರುನಾಮಕರಣದ ಬಗ್ಗೆ ತೆಲಂಗಾಣ ರಾಜ್ಯಪಾಲರ ಕಚೇರಿ ಇಂದು ಸಂಜೆ ಅಧಿಕೃತ ಘೋಷಣೆ ಮಾಡಿದೆ.

ಇದನ್ನೂ ಓದಿ: Vedamurti Devavrat Mahesh: ಅಸಾಮಾನ್ಯ ಸಾಧನೆಗೈದ 19 ವರ್ಷದ ಯುವಕನನ್ನು ಹಾಡಿಹೊಗಳಿದ ಪ್ರಧಾನಿ ಮೋದಿ; ಈತನ ಟ್ಯಾಲೆಂಟ್​​ಗೆ ನೀವು ಶಾಕ್​ ಆಗ್ತೀರಾ!

ವಿಕಸಿತ ಭಾರತದತ್ತ ನಾವು ವಿಶ್ವಾಸದಿಂದ ಸಾಗುತ್ತಿರುವಾಗ ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳ ಶಕ್ತಿ ಮತ್ತು ಚೈತನ್ಯವನ್ನು ಪುನರುಚ್ಚರಿಸಲು ಈ ಮರುನಾಮಕರಣ ಮಾಡಲಾಗಿದೆ. ವಸಾಹತುಶಾಹಿ ಯುಗಕ್ಕೆ ಸಂಬಂಧಿಸಿದ ನಾಮಕರಣವನ್ನು ತೆಗೆದುಹಾಕಲು ಗೃಹ ಸಚಿವಾಲಯದ ನಿರ್ದೇಶನವನ್ನು ಅನುಸರಿಸಿ ಹೆಸರಿನ ಬದಲಾವಣೆ ಮಾಡಲಾಗಿದೆ.

ಇದನ್ನೂ ಓದಿ: ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಹಿನ್ನೆಲೆ ದೆಹಲಿಯಲ್ಲಿ ಕಟ್ಟೆಚ್ಚರ

ಎಲ್ಲಾ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳು, ರಾಜ್ಯಪಾಲರ ಕಾರ್ಯದರ್ಶಿಗಳನ್ನು ಉದ್ದೇಶಿಸಿ ಹೊರಡಿಸಲಾದ ನಿರ್ದೇಶನದಲ್ಲಿ “ರಾಜ್ ಭವನ್ ಎಂಬ ಪದವು ವಸಾಹತುಶಾಹಿಯನ್ನು ನೆನಪಿಸುತ್ತದೆ. ಆದ್ದರಿಂದ 2024 ರ ರಾಜ್ಯಪಾಲರ ಸಮ್ಮೇಳನದಲ್ಲಿ ‘ರಾಜ ಭವನ್’ ಅನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡಲು ಸೂಚಿಸಲಾಗಿದೆ. ಅಧಿಕೃತ ಉದ್ದೇಶಗಳಿಗಾಗಿ ರಾಜ್ಯಪಾಲರ ಕಚೇರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ಕಚೇರಿಗಳನ್ನು ‘ಲೋಕಭವನ’ ಅಥವಾ ‘ಲೋಕ ನಿವಾಸ್’ ಎಂದು ಹೆಸರಿಸಲು ಎಂದು ವಿನಂತಿಸಲಾಗಿದೆ” ಎಂದು ತಿಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ