ಬಲಿಕೊಡಲು ಹಸುಗಳನ್ನು ಖರೀದಿ ಮಾಡಿದ ಆರೋಪ, ಮದರಸಾ ಮೇಲೆ ಗುಂಪಿನಿಂದ ದಾಳಿ

ಬಕ್ರೀದ್​ ದಿನ ಬಲಿಕೊಡಲು ಹಸುಗಳನ್ನು ಖರೀದಿ ಮಾಡಿದ್ದಾರೆ ಎನ್ನುವ ಆರೋಪದ ಮೇರೆಗೆ ಗುಂಪೊಂದು ತೆಲಂಗಾಣದ ಮದರಸಾ ಮೇಲೆ ದಾಳಿ ನಡೆಸಿದೆ.

ಬಲಿಕೊಡಲು ಹಸುಗಳನ್ನು ಖರೀದಿ ಮಾಡಿದ ಆರೋಪ, ಮದರಸಾ ಮೇಲೆ ಗುಂಪಿನಿಂದ ದಾಳಿ
Image Credit source: India Today
Follow us
ನಯನಾ ರಾಜೀವ್
|

Updated on: Jun 16, 2024 | 9:24 AM

ಬಲಿಕೊಡಲು ಹಸುಗಳನ್ನು ಖರೀದಿ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಗುಂಪೊಂದು ಮದರಸಾ(Madrasa) ಮೇಲೆ ದಾಳಿ ನಡೆಸಿರುವ ಘಟನೆ ತೆಲಂಗಾಣದ ಮೇದಕ್​ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ, ಮಿರಾಜ್ ಉಲ್ ಉಲೂಮ್ ಮದರಸಾದ ಆಡಳಿತ ಮಂಡಳಿಯು ಬಕ್ರೀದ್​ ನಿಮಿತ್ತ ಹಸುಗಳನ್ನು ಬಲಿಗಾಗಿ ಖರೀದಿಸಿತ್ತು. ಅವರು ದನಗಳನ್ನು ಕರೆತಂದ ಕೂಡಲೇ ಮದರಸಾದ ಸುತ್ತಲೂ ಗುಂಪು ಜಮಾಯಿಸಿ ಬಲಿಯನ್ನು ವಿರೋಧಿಸಿತ್ತು, ಆದರೆ ಪೊಲೀಸರು ಸ್ಥಳಕ್ಕಾಗಮಿಸಿ ಗುಂಪನ್ನು ಚದರಿಸಿದರು.

ಆರ್​ಎಸ್​ಎಸ್​ನ ಸಾವಿರಾರು ಮಂದಿ ಹಾಗೂ ಹಿಂದೂಪರ ಸಂಘಟನೆಗಳು ಮದರಸಾ ಮೇಲೆ ದಾಳಿ ಮಾಡಿ ಆಡಳಿತ ಮಂಡಳಿಯ ಸದಸ್ಯರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಎಐಎಂಐಎಂ ಶಾಸಕ  ಎಂ ಕೌಸರ್ ಮೊಹಿಯುದ್ದೀನ್ ಆರೋಪಿಸಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ, ಗುಂಪು ಆಸ್ಪತ್ರೆಯನ್ನು ಧ್ವಂಸ ಮಾಡಿದೆ ಎಂದು ಅವರು ಹೇಳಿದರು. ಮೇಡಕ್ ಪಟ್ಟಣದಲ್ಲಿ ಶಾಂತಿ ನೆಲೆಸುವಂತೆ ಪೊಲೀಸ್ ಇಲಾಖೆಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ ಎಂದು ಕೌಸರ್ ಹೇಳಿದ್ದಾರೆ.

ಮತ್ತಷ್ಟು ಓದಿ: ಈ ಪ್ರದೇಶದಲ್ಲಿ ನಮಾಜ್ ಮಾಡುವಂತಿಲ್ಲ, ಬಕ್ರೀದ್​ಗೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ ಸರ್ಕಾರ

ಹನುಮ ಜಯಂತಿ ವೇಳೆ ಇದೇ ರೀತಿಯ ಘಟನೆ ನಡೆದಿದ್ದು, ಹಲವು ಮುಸ್ಲಿಮರ ಮೇಲೆ ದಾಳಿ ನಡೆಸಿ ಅವರ ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಶಾಸಕ ಕೌಸರ್ ತಿಳಿಸಿದ್ದಾರೆ. ಬಿಜೆಪಿ, ಆರ್‌ಎಸ್‌ಎಸ್ ಮತ್ತು ಹಿಂದೂ ವಾಹಿನಿ ರಾಜ್ಯದಲ್ಲಿ ಹಿಂಸಾಚಾರವನ್ನು ಪ್ರಚೋದಿಸುತ್ತದೆ ಮತ್ತು ಶಾಂತಿ ಕದಡುತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ