Telangana: ಕಾರು-ಟ್ರಕ್​ ನಡುವೆ ಅಪಘಾತ, 6 ಮಂದಿ ಸಾವು, ನಾಲ್ವರಿಗೆ ಗಾಯ

|

Updated on: Apr 25, 2024 | 9:57 AM

ಕಾರು ಹಾಗೂ ಟ್ರಕ್​ ನಡುವೆ ಡಿಕ್ಕಿಯುಂಟಾಗಿ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದಿಂದ ಸುಮಾರು 180 ಕಿಮೀ ದೂರದಲ್ಲಿರುವ ಕೊಡದ ಪಟ್ಟಣದ ಬಳಿ ಈ ಘಟನೆ ಸಂಭವಿಸಿದ್ದು, ಹತ್ತು ವ್ಯಕ್ತಿಗಳೊಂದಿಗೆ ಹತ್ತಿದ ಕಾರು ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ದುರಸ್ತಿಗಾಗಿ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Telangana: ಕಾರು-ಟ್ರಕ್​ ನಡುವೆ ಅಪಘಾತ, 6 ಮಂದಿ ಸಾವು, ನಾಲ್ವರಿಗೆ ಗಾಯ
ಅಪಘಾತ
Follow us on

ಕಾರು ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದಿಂದ ಸುಮಾರು 180 ಕಿಮೀ ದೂರದಲ್ಲಿರುವ ಕೊಡದ ಪಟ್ಟಣದ ಬಳಿ ಈ ಘಟನೆ ಸಂಭವಿಸಿದ್ದು, ಹತ್ತು ವ್ಯಕ್ತಿಗಳೊಂದಿಗೆ ಹತ್ತಿದ ಕಾರು ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರು ಅತಿವೇಗದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಎಲ್ಲಾ ಆರು ಪ್ರಯಾಣಿಕರು (ನಾಲ್ಕು ಪುರುಷರು, ಒಬ್ಬ ಮಹಿಳೆ ಮತ್ತು ಹೆಣ್ಣು ಮಗು) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಮತ್ತೊಂದು ಘಟನೆ

ರಸ್ತೆ ಅಪಘಾತದ ಪ್ರತ್ಯೇಕ ಪ್ರಕರಣದಲ್ಲಿ, ಇಲ್ಲಾಂಡು ಗ್ರಾಮದ ಬಳಿ ವಾರಂಗಲ್-ಖಮ್ಮಂ ಹೆದ್ದಾರಿಯಲ್ಲಿ ನಿನ್ನೆ ತಡರಾತ್ರಿ ಖಾಸಗಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನ: ಮದುವೆ ಮುಗಿಸಿ ಬರುವಾಗ ಕಾರು, ಟ್ರಕ್ ಮಧ್ಯೆ ಭೀಕರ ಅಪಘಾತ, 9 ಮಂದಿ ಸಾವು

ತೆಲಂಗಾಣದ ಇಬ್ಬರು ವಿದ್ಯಾರ್ಥಿಗಳು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಈ ಹಿಂದೆ ಅರಿಜೋನಾದ ಲೇಕ್ ಪ್ಲೆಸೆಂಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪುದ್ದರು. ಪೊಲೀಸರ ಪ್ರಕಾರ, ವಿದ್ಯಾರ್ಥಿಗಳನ್ನು ನಿವೇಶ್ ಮುಕ್ಕಾ, 19 ಮತ್ತು ಗೌತಮ್ ಪಾರ್ಸಿ, 19 ಎಂದು ಗುರುತಿಸಲಾಗಿದೆ, ಇಬ್ಬರೂ ಅರಿಜೋನಾ ಸ್ಟೇಟ್ ಯೂನಿವರ್ಸಿಟಿಯಲ್ಲಿ ಓದುತ್ತಿದ್ದರು.

ರಾಜಸ್ಥಾನದಲ್ಲಿ ಅಪಘಾತ
ಕಾರು ಹಾಗೂ ಡಂಪರ್​ ನಡುವೆ ಡಿಕ್ಕಿ, ಒಂದೇ ಕುಟುಂಬದ ಐವರು ಸಾವು
ಕಾರು ಹಾಗೂ ಡಂಪರ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಭನ್ವಾರಿ ದೇವಿ (60), ದಿವ್ಯಾಂಶಿ (5), ಖೇರಾಜರಾಮ್ (25), ವಿನಿತಾ (3) ಮತ್ತು ಡಿಂಪಲ್ (3) – ಕಾರಿನಲ್ಲಿ ಇತರ ಐವರೊಂದಿಗೆ ಹರ್ಸೌರ್‌ನ ರಾಣಿಬಾಯಿ ದೇವಸ್ಥಾನಕ್ಕೆ ಹೋಗುತ್ತಿದ್ದರು ಎಂದು ಡಿಎಸ್‌ಪಿ ರಾಮೇಶ್ವರ್ ಹೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ