Suryapet: ಲಾರಿ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ: ಐವರು ಸಾವು, 20 ಮಂದಿಗೆ ಗಾಯ

ಲಾರಿ ಹಾಗೂ ಟ್ರ್ಯಾಕ್ಟರ್ ಡಿಕ್ಕಿಯಾಗಿ, ಐವರು ಸ್ಥಳದಲ್ಲೇ ಮೃತಪಟ್ಟು 20 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟ್‌ನ ಮುನಗಾಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.

Suryapet: ಲಾರಿ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ: ಐವರು ಸಾವು, 20 ಮಂದಿಗೆ ಗಾಯ
accident
Image Credit source: India Today
Updated By: ನಯನಾ ರಾಜೀವ್

Updated on: Nov 13, 2022 | 2:31 PM

ಲಾರಿ ಹಾಗೂ ಟ್ರ್ಯಾಕ್ಟರ್ ಡಿಕ್ಕಿಯಾಗಿ, ಐವರು ಸ್ಥಳದಲ್ಲೇ ಮೃತಪಟ್ಟು 20 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟ್‌ನ ಮುನಗಾಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.

ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಮೃತರು ಮುನಗಲ್ ಹೊರವಲಯದಲ್ಲಿರುವ ಅಯ್ಯಪ್ಪ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ರಸ್ತೆ ಅಪಘಾತದಲ್ಲಿ ತೆನ್ನೇರು ಪ್ರಮೀಳಾ (35), ಚಿಂತಕಾಯಲ ಪ್ರಮೀಳಾ (33), ಉದಯ ಲೋಕೇಶ್ (8), ನರಗೋಣಿ ಕೋಟಯ್ಯ (55) ಮತ್ತು ಗುಂಡು ಜ್ಯೋತಿ (38) ಮೃತಪಟ್ಟಿದ್ದಾರೆ.

ಟ್ರ್ಯಾಕ್ಟರ್‌ನಲ್ಲಿ ಕನಿಷ್ಠ 30 ಜನರು ಪ್ರಯಾಣಿಸುತ್ತಿದ್ದಾಗ ವಾಹನವು ತಪ್ಪು ಮಾರ್ಗದಲ್ಲಿ ಚಲಿಸಿ ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿತು. ಅದೇ ವೇಳೆ ವೇಗವಾಗಿ ವಿಜಯವಾಡ ಕಡೆಗೆ ಹೋಗುತ್ತಿದ್ದ ಲಾರಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ 30 ಮಂದಿ ವಾಹನದಿಂದ ರಸ್ತೆಗೆ ಬಿದ್ದಿದ್ದಾರೆ. ವೇಗವಾಗಿ ಬಂದ ಲಾರಿ ಟ್ರಾಕ್ಟರ್ ಸಾಕಷ್ಟು ದೂರ ಎಳೆದುಕೊಂಡು ಹೋಗಿದೆ.

ಮಾಹಿತಿ ಪಡೆದ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಟ್ರ್ಯಾಕ್ಟರ್‌ನಲ್ಲಿ 30 ಮಂದಿ ಪ್ರಯಾಣಿಸುತ್ತಿದ್ದರು ಎಂದು ಮುನಗಲ್ ವೃತ್ತ ನಿರೀಕ್ಷಕ ಆಂಜನೇಯುಲು ತಿಳಿಸಿದ್ದಾರೆ. ಪರಿಣಾಮ, ಒಂದು ಮಗು ಸೇರಿದಂತೆ ಐವರು ಬಲಿಯಾದರು ಮತ್ತು 25 ಇತರರಿಗೆ ಗಂಭೀರವಾದ ಗಾಯಗಳಾಗಿವೆ.

ನಾವು ವಿಷಯವನ್ನು ತನಿಖೆ ಮಾಡುತ್ತಿದ್ದೇವೆ, ಅಪಘಾತ ಹೇಗೆ ಸಂಭವಿಸಿತು ಎಂದು ನೋಡುತ್ತಿದ್ದೇವೆ. ಗಾಯಾಳುಗಳನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ