ತ್ರಿಪುರಾ,ಮೇಘಾಲಯಕ್ಕೆ ಇಂದು ನರೇಂದ್ರ ಮೋದಿ ಭೇಟಿ; ₹6,800 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ

ನರೇಂದ್ರ ಮೋದಿ ಭಾನುವಾರ ಈಶಾನ್ಯ ಭಾರತದ ತ್ರಿಪುರಾ ಮತ್ತು ಮೇಘಾಲಯಕ್ಕೆ ಭೇಟಿ ನೀಡಲಿದ್ದು, 6,800 ಕೋಟಿ ರೂ. ವೆಚ್ಚದ ಯೋಜನೆಗೆ ಚಾಲನೆ ನೀಡಲಿದ್ದಾರೆ. ವಸತಿ, ರಸ್ತೆ, ಕೃಷಿ, ಟೆಲಿಕಾಂ, ಐಟಿ, ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರಗಳಲ್ಲಿನ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ಮಾಡಲಿದ್ದಾರೆ.

ತ್ರಿಪುರಾ,ಮೇಘಾಲಯಕ್ಕೆ ಇಂದು ನರೇಂದ್ರ ಮೋದಿ ಭೇಟಿ; ₹6,800 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 18, 2022 | 11:57 AM

ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು(ಭಾನುವಾರ) ಮೇಘಾಲಯ (Meghalaya)ಮತ್ತು ತ್ರಿಪುರಾ (Tripura) ಭೇಟಿ ನೀಡಲಿದ್ದು ಈಶಾನ್ಯ ಕೌನ್ಸಿಲ್ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಮೋದಿಯವರ ಈ ಭೇಟಿ ಬಂದಿದೆ. ತ್ರಿಪುರಾ ಮತ್ತು ಮೇಘಾಲಯ ಎರಡೂ ಮುಂದಿನ ವರ್ಷದ ಆರಂಭದಲ್ಲಿ ಮತದಾನಕ್ಕೆ ಸಿದ್ಧವಾಗಿವೆ. ಮೇಘಾಲಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ)-ಬಿಜೆಪಿ ಸರ್ಕಾರದ ಸಮ್ಮಿಶ್ರ ಅಧಿಕಾರದಲ್ಲಿದ್ದರೆ, ತ್ರಿಪುರಾದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ನರೇಂದ್ರ ಮೋದಿ ಭಾನುವಾರ ಈಶಾನ್ಯ ಭಾರತದ ತ್ರಿಪುರಾ ಮತ್ತು ಮೇಘಾಲಯಕ್ಕೆ ಭೇಟಿ ನೀಡಲಿದ್ದು, 6,800 ಕೋಟಿ ರೂ. ವೆಚ್ಚದ ಯೋಜನೆಗೆ ಚಾಲನೆ ನೀಡಲಿದ್ದಾರೆ. ವಸತಿ, ರಸ್ತೆ, ಕೃಷಿ, ಟೆಲಿಕಾಂ, ಐಟಿ, ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರಗಳಲ್ಲಿನ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ಮಾಡಲಿದ್ದಾರೆ. ಅವರು ಈಶಾನ್ಯ ಕೌನ್ಸಿಲ್ (ಎನ್‌ಇಸಿ) ಯ ಸುವರ್ಣ ಮಹೋತ್ಸವ ಆಚರಣೆ ಮತ್ತು ಶಿಲ್ಲಾಂಗ್‌ನಲ್ಲಿ ಅದರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ. ತ್ರಿಪುರಾದ ರಾಜಧಾನಿ ಅಗರ್ತಲಾದಲ್ಲಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ – ನಗರ ಮತ್ತು ಗ್ರಾಮೀಣ – ಯೋಜನೆಗಳ ಅಡಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ “ಗೃಹ ಪ್ರವೇಶ” ಕಾರ್ಯಕ್ರಮವನ್ನು ಮೋದಿ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: Acid attack: ಆಸಿಡ್ ದಾಳಿಯಿಂದ ಬದುಕುಳಿದವರಿಗೆ 35 ಲಕ್ಷ ರೂ. ಪರಿಹಾರ, ಉತ್ತರಾಖಂಡ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಪ್ರಧಾನಿ ಮೋದಿಯವರ ಮೇಘಾಲಯ ಮತ್ತು ತ್ರಿಪುರಾ ಭೇಟಿ ಕುರಿತು 10 ಸಂಗತಿಗಳು

  1. ಪ್ರಧಾನಿ ಮೋದಿ ಅವರು ಶನಿವಾರ ತಮ್ಮ ರಾಜ್ಯಗಳ ಭೇಟಿಯ ಕುರಿತು ಟ್ವೀಟ್ ಮಾಡಿದ್ದು, ಅವರು “ಈ ರಾಜ್ಯಗಳು ಮತ್ತು ಇಡೀ ಈಶಾನ್ಯ ಪ್ರದೇಶದ ಬೆಳವಣಿಗೆಯ ಪಥವನ್ನು ಮತ್ತಷ್ಟು ಹೆಚ್ಚಿಸುವ ಗುರಿಯನ್ನು ಹೊಂದಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
  2. ಈಶಾನ್ಯ ಕೌನ್ಸಿಲ್ – ಈಶಾನ್ಯ ಪ್ರದೇಶದ ಸಾಮಾಜಿಕ ಅಭಿವೃದ್ಧಿಯ ನೋಡಲ್ ಏಜೆನ್ಸಿ ಆಗಿದ್ದು ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರಾ ಎಂಟು ರಾಜ್ಯಗಳನ್ನು ಒಳಗೊಂಡಿದೆ. 1971 ರಲ್ಲಿ ಅದರ ಸಂವಿಧಾನವು “ಸಂಯೋಜಿತ ಮತ್ತು ಯೋಜಿತ ಪ್ರಯತ್ನದ ಹೊಸ ಅಧ್ಯಾಯದ ಆರಂಭವನ್ನು ಗುರುತಿಸಿದೆ” ಎಂದು ಅದರ ಅಧಿಕೃತ ವೆಬ್‌ಸೈಟ್ ಹೇಳುತ್ತದೆ. ಇದು ಕಳೆದ 50 ವರ್ಷಗಳಲ್ಲಿ “ಹೊಸ ಆರ್ಥಿಕ ಪ್ರಯತ್ನವನ್ನು ರೂಪಿಸುವಲ್ಲಿ” ಪ್ರಮುಖವಾಗಿದೆ ಎಂದು ಹೇಳಿದೆ.
  3.  ಪ್ರಧಾನಿ ಮೋದಿಯವರ ಭೇಟಿಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಶಿಲ್ಲಾಂಗ್‌ಗೆ ಆಗಮಿಸಿದರು.
  4. ಭಾನುವಾರ ಬೆಳಗ್ಗೆ ಈಶಾನ್ಯ ಕೌನ್ಸಿಲ್‌ನ ಪ್ರಮುಖ ಸಭೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.
  5. ಒಟ್ಟಾರೆಯಾಗಿ, ₹ 6,800 ಕೋಟಿ ಮೌಲ್ಯದ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.
  6. ಇವುಗಳಲ್ಲಿ ₹2,450 ಕೋಟಿ ಮೌಲ್ಯದ ಯೋಜನೆಗಳು ಮೇಘಾಲಯಕ್ಕೆ ಮೀಸಲಾಗಿವೆ.
  7. ಪ್ರಧಾನಿ ಮೋದಿ ಐಐಎಂ ಶಿಲ್ಲಾಂಗ್‌ನ ಹೊಸ ಕ್ಯಾಂಪಸ್ ಅನ್ನು ಉಮ್ಸಾವ್ಲಿಯಲ್ಲಿ ಉದ್ಘಾಟಿಸಲಿದ್ದಾರೆ. ಶಿಲ್ಲಾಂಗ್ – ಡೀಂಗ್‌ಪಾಸೋಹ್ ರಸ್ತೆಯನ್ನು ಮೋದಿ ಉದ್ಘಾಟಿಸಲಿದ್ದು ಇದು ಹೊಸ ಶಿಲ್ಲಾಂಗ್ ಸ್ಯಾಟಲೈಟ್ ಟೌನ್‌ಶಿಪ್‌ಗೆ ಉತ್ತಮ ಸಂಪರ್ಕವನ್ನು ಒದಗಿಸುತ್ತದೆ. ಅವರು ಮೇಘಾಲಯ, ಮಣಿಪುರ ಮತ್ತು ಅರುಣಾಚಲ ಪ್ರದೇಶ ಮೂರು ರಾಜ್ಯಗಳಾದ್ಯಂತ ನಾಲ್ಕು ಇತರ ರಸ್ತೆ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
  8. ಆರು ರಸ್ತೆ ಯೋಜನೆಗಳು ಅಸ್ಸಾಂ, ಮಿಜೋರಾಂ, ಮೇಘಾಲಯ, ಮಣಿಪುರ ಮತ್ತು ತ್ರಿಪುರಾ ರಾಜ್ಯಗಳಿಗೆ ಸಂಪರ್ಕಗೊಂಡಿವೆ.
  9. ₹ 4,350 ಕೋಟಿ ಮೌಲ್ಯದ ಯೋಜನೆಗಳಲ್ಲಿ, ತ್ರಿಪುರಾ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಆವಾಸ್ ಯೋಜನೆ – ನಗರ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ ಕೂಡಾ ಸೇರಿದೆ. ₹ 3400 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಈ ಮನೆಗಳು 2 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳನ್ನು ಒಳಗೊಳ್ಳಲಿವೆ ಎಂದು ಪಿಎಂ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
  10. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ವಾಸ್ತವಿಕ ನಿಯಂತ್ರಣ ರೇಱೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಇತ್ತೀಚಿನ ಘರ್ಷಣೆಯ ಬಗ್ಗೆ ಪ್ರತಿಪಕ್ಷಗಳು ಸರ್ಕಾರವನ್ನು ಗುರಿಯಾಗಿಸಿಕೊಂಡಿರುವ ಸಮಯದಲ್ಲಿ ಮೋದಿಯವರ ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Sun, 18 December 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್