Delhi Airport Roof Collapse: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮೇಲ್ಛಾವಣಿ ಕುಸಿದು ಓರ್ವ ಸಾವು, ಹಲವರಿಗೆ ಗಾಯ!

ದೆಹಲಿ ವಿಮಾನ ನಿಲ್ದಾಣದಲ್ಲಿ ಭಾರೀ ಅವಘಡ ನಡೆದಿದೆ. ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 1 ಮೇಲ್ಛಾವಣಿ ಕುಸಿದು ಓರ್ವ ಸಾವು, ಹಲವರಿಗೆ ಗಾಯಗಳಾಗಿವೆ. ಈ ಬಗ್ಗೆ ಪ್ರಯಾಣಿಕರಲ್ಲಿ ವಿಮಾನ ನಿಲ್ದಾಣ ಸಿಬ್ಬಂದಿ ಕ್ಷಮೆ ಕೇಳಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ವಿಮಾನಯಾನವನ್ನು ಸ್ಥಗಿತಗೊಳಿಸಲಾಗಿದೆ. ಹಾಗೂ ರಾಷ್ಟ್ರೀಯ ವಿಮಾನ ಹಾರಟವನ್ನು ಮಾತ್ರ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ.

Delhi Airport Roof Collapse: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮೇಲ್ಛಾವಣಿ ಕುಸಿದು ಓರ್ವ ಸಾವು, ಹಲವರಿಗೆ ಗಾಯ!
ದೆಹಲಿ ವಿಮಾನ ನಿಲ್ದಾಣ
Follow us
|

Updated on: Jun 28, 2024 | 10:29 AM

ದೆಹಲಿ, ಜೂ.28: ದೆಹಲಿಯಲ್ಲಿ ಭಾರೀ ಮಳೆ ಉಂಟಾಗಿದ್ದು, ಸಂಪೂರ್ಣ ದೆಹಲಿ ಮುಗುವ ಸ್ಥಿತಿಗೆ ಬಂದಿದೆ. ಇಂದು ಬೆಳಿಗ್ಗೆ ಭಾರೀ ಮಳೆಯಿಂದ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗವು ಕೆಳಗೆ ನಿಂತಿರುವ ಕಾರುಗಳ ಮೇಲೆ ಬಿದ್ದಿದೆ. ಇದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹಾಗೂ ಆರು ಮಂದಿ ಗಾಯಗೊಂಡಿದ್ದಾರೆ . ಟರ್ಮಿನಲ್ 1 ರಿಂದ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಚೆಕ್-ಇನ್ ಕೌಂಟರ್​​ಗಳನ್ನು ಸುರಕ್ಷತಾ ಕ್ರಮಕ್ಕಾಗಿ ಮುಚ್ಚಲಾಗಿದೆ ಎಂದು ಎಂದು ದೆಹಲಿ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಟರ್ಮಿನಲ್-1 ದೇಶೀಯ ವಿಮಾನ ಕಾರ್ಯಾಚರಣೆ ಮಾತ್ರ ಎಂದು ಹೇಳಿದ್ದಾರೆ. ಇಂಡಿಗೋ ಮತ್ತು ಸ್ಪೈಸ್‌ಜೆಟ್‌ನ T1 ನಿಂದ ಹೊರಡುವ ಎಲ್ಲಾ ವಿಮಾನಗಳು ಇಂದು ಮಧ್ಯಾಹ್ನ 2 ಗಂಟೆಯವರೆಗೆ ರದ್ದುಗೊಳಿಸಲಾಗಿದೆ. ಈಗಾಗಲೇ ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ಸ್ಥಳಕ್ಕೆ ಧಾವಿಸಿದ್ದು, ಇನ್ನು ಮಳೆಯಿಂದ ಕ್ಯಾಬ್‌ಗಳು ಸೇರಿದಂತೆ ಹಲವು ವಾಹನಗಳು ಹಾನಿಗೊಳಗಾಗಿವೆ. ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ನ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರುಗಳ ಮೇಲೆ ಮೇಲ್ಛಾವಣಿಯ ಶೀಟ್ ಕುಸಿದು ಬಿದ್ದಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೆಹಲಿ ವಿಮಾನ ನಿಲ್ದಾಣದ ಅಧಿಕೃತ ಹೇಳಿಕೆ ಪ್ರಕಾರ, ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಹಳೆಯ ನಿರ್ಗಮನದ ಮುಂಭಾಗದಲ್ಲಿರುವ ಮೇಲಾವರಣದ ಒಂದು ಭಾಗವು ಇಂದು ಬೆಳಿಗ್ಗೆ ಭಾರೀ ಮಳೆಯಿಂದಾಗಿ ಕುಸಿದಿದೆ ಎಂದು ಹೇಳಿದ್ದಾರೆ. ಇದರಿಂದ ಕೆಲವರಿಗೆ ಗಾಯಗಳು ಆಗಿದೆ. ಈಗಾಗಲೇ ಎಲ್ಲಾ ನೆರವು ಮತ್ತು ವೈದ್ಯಕೀಯ ನೆರವು ಒದಗಿಸಲು ತುರ್ತು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಟರ್ಮಿನಲ್ 1 ರಿಂದ ಎಲ್ಲಾ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಚೆಕ್-ಇನ್ ಕೌಂಟರ್‌ಗಳನ್ನು ಮುಚ್ಚಲಾಗಿದೆ ಎಂದು ದೆಹಲಿ ವಿಮಾನ ನಿಲ್ದಾಣ ಸಿಬ್ಬಂದಿ ಹೇಳಿದ್ದಾರೆ.

ಇದನ್ನೂ ಓದಿ: ಸಿಕ್ಕಿಂನಲ್ಲಿ ಭೂಕುಸಿತ: 70 ಅಡಿ ಬೈಲಿ ಸೇತುವೆಯನ್ನು 72 ಗಂಟೆಗಳೊಳಗೆ ನಿರ್ಮಿಸಿದ ಭಾರತೀಯ ಸೇನೆ

ಇನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರಲ್ಲಿ ಕ್ಷಮೆಯಾಚನೆ ಮಾಡಿದೆ. ಈ ಅಡಚಣೆಗೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಹಾಗೂ ಇಲ್ಲಿ ಉಂಟಾದ ಗೊಂದಲ ಹಾಗೂ ಪ್ರಯಾಣಿಕರಿಗೆ ಆಗಿರುವ ಹಾನಿಗೆ ಕ್ಷಮೆಯಾಚಿಸುತ್ತೇವೆ ಎಂದು ಹೇಳಿದೆ. ಈ ಬಗ್ಗೆ ಎಕ್ಸ್​​ ಮೂಲಕ ಪತ್ರಕ್ರಿಯಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತದ ಘಟನೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ ಮತ್ತು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ