AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ, 5 ಸಾವು, 60 ಮಂದಿಗೆ ಗಾಯ

ಇಂದು (ನ.11) ಮುಂಜಾನೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿಬಸ್ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹತ್ತು ಆಂಬ್ಯುಲೆನ್ಸ್‌ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ ಬಸ್ ಡಿಕ್ಕಿ ಹೊಡೆದಿದೆ.

ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ, 5 ಸಾವು, 60 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 11, 2023 | 12:43 PM

Share

ತಮಿಳುನಾಡು, ನ.11: ಇಂದು (ನ.11) ಮುಂಜಾನೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Chennai-Bangalore National Highway) ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿಬಸ್ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹತ್ತು ಆಂಬ್ಯುಲೆನ್ಸ್‌ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ ಬಸ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಓರ್ವ ಮಹಿಳೆ ಸೇರಿ ನಾಲ್ಕು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವವರನ್ನು ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್‌ಇಟಿಸಿ ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25) ಹಾಗೂ ಓಮ್ನಿಬಸ್ ಚಾಲಕ ಎನ್ ಸೈಯದ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಗುರುಗ್ರಾಮ್​ದ ಬಳಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ಮುಂಜಾನೆ ಸುಮಾರು 4.00 ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಸಾವನ್ನಪ್ಪಿರುವವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More