Accident: ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, 5 ಸಾವು, 10 ಮಂದಿಗೆ ಗಾಯ

ಟ್ರಕ್‌ವೊಂದು ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ 5 ಜನ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದಿದೆ ಎಂದು ಪೊಲೀಸರು ಇಂದು (ಮೇ 5) ತಿಳಿಸಿದ್ದಾರೆ.

Accident: ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, 5 ಸಾವು, 10 ಮಂದಿಗೆ ಗಾಯ
ಪ್ರಾತಿನಿಧಿಕ ಚಿತ್ರ

Updated on: May 05, 2023 | 12:19 PM

ಬಹ್ರೈಚ್: ಟ್ರಕ್‌ವೊಂದು ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ 5 ಜನ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದಿದೆ ಎಂದು ಪೊಲೀಸರು ಇಂದು (ಮೇ 5) ತಿಳಿಸಿದ್ದಾರೆ. ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅಹಿರಾನ್‌ಪುರಕ್ಕೆ ಟೆಂಪೋದಲ್ಲಿ ಹಿಂತಿರುಗುತ್ತಿದ್ದಾಗ ರಾಂಗ್‌ ಸೈಡ್‌ನಿಂದ ಬಂದ ಟ್ರಕ್‌ ಡಿಕ್ಕಿ ಹೊಡೆದಿದೆ.

ಗಾಯಗೊಂಡವರನ್ನು ಭಗವಾನ್ ಪ್ರಸಾದ್ (40), ಅನಿಲ್ (15), ಖುಷ್ಭು (35), ಹರೀಶ್ (45) ಮತ್ತು ಜೈ ಕರಣ್ (40) ಎಂದು ಗುರುತಿಸಲಾಗಿದೆ. ಅವರನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:Chhattisgarh Accident: ಬೊಲೆರೊಗೆ ಲಾರಿ ಡಿಕ್ಕಿ, ಛತ್ತೀಸ್​ಗಢದಲ್ಲೊಂದು ಭೀಕರ ಅಪಘಾತ: ಒಂದೇ ಕುಟುಂಬದ 10 ಮಂದಿ ಸಾವು

ಲಾರಿ ಚಾಲಕ ನಾಪತ್ತೆಯಾಗಿದ್ದಾನೆ. ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:19 pm, Fri, 5 May 23