ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಭದ್ರತಾ ಸಂಸ್ಥೆಗಳಿಗೆ ಅಮಿತ್ ಶಾ ಸೂಚನೆ ಏನು?

ಜಮ್ಮು ವಿಭಾಗದಲ್ಲಿ ಪ್ರದೇಶಗಳ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವ ಹಾಗೂ ಭಯೋತ್ಪಾದನೆ ವಿಚಾರದಲ್ಲಿ ಶೂನ್ಯ ಸಹನೆಯ ಯೋಜನೆಗಳನ್ನು ಜಾರಿಗೆ ತರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭದ್ರತಾ ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಹೊಸ ವಿಧಾನಗಳ ಮೂಲಕ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬದ್ಧವಾಗಿದೆ. ಎಲ್ಲಾ ಭದ್ರತಾ ಸಂಸ್ಥೆಗಳು ಮಿಷನ್ ಮೋಡ್ನಲ್ಲಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಭದ್ರತಾ ಸಂಸ್ಥೆಗಳಿಗೆ ಅಮಿತ್ ಶಾ ಸೂಚನೆ ಏನು?
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಭದ್ರತಾ ಸಂಸ್ಥೆಗಳಿಗೆ ಅಮಿತ್ ಶಾ ಸೂಚನೆ ಏನು?
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 16, 2024 | 9:11 PM

ದೆಹಲಿ, ಜೂನ್​ 16: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಇತ್ತೀಚಿನ ಭಯೋತ್ಪಾದನಾ ದಾಳಿಯ ಹಿನ್ನೆಲೆಯಲ್ಲಿ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸುಲು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಭಾನುವಾರ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ಮಾಡಿದ್ದಾರೆ. ಗೃಹ ಸಚಿವಾಲಯದಲ್ಲಿ ನಡೆದ ಈ ಮಹತ್ವ ಸಭೆಯಲ್ಲಿ ಜಮ್ಮು ಪ್ರದೇಶದಲ್ಲಿ ಹೆಚ್ಚಿತ್ತಿರುವ ಭಯೋತ್ಪಾದಕ ಘಟನೆಗಳ ಮೇಲೆ ಕೇಂದ್ರಿಕರಿಸಲಾಗಿತ್ತು.

ಜಮ್ಮು ವಿಭಾಗದಲ್ಲಿ ಪ್ರದೇಶಗಳ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವ ಹಾಗೂ ಭಯೋತ್ಪಾದನೆ ವಿಚಾರದಲ್ಲಿ ಶೂನ್ಯ ಸಹನೆಯ ಯೋಜನೆಗಳನ್ನು ಜಾರಿಗೆ ತರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭದ್ರತಾ ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಹೊಸ ವಿಧಾನಗಳ ಮೂಲಕ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬದ್ಧವಾಗಿದೆ. ಎಲ್ಲಾ ಭದ್ರತಾ ಸಂಸ್ಥೆಗಳು ಮಿಷನ್ ಮೋಡ್ನಲ್ಲಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ; ಜಮ್ಮು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಪರಿಶೀಲನೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟವು ನಿರ್ಣಾಯಕ ಹಂತದಲ್ಲಿದೆ. ಭಯೋತ್ಪಾದನೆಯು ಅತ್ಯಂತ ಸಂಘಟಿತ ಭಯೋತ್ಪಾದಕ ಹಿಂಸಾಚಾರದಿಂದ ಕೇವಲ ಪರೋಕ್ಷ ಯುದ್ಧಕ್ಕೆ ಕುಗ್ಗಿದೆ ಎಂಬುದನ್ನು ಇತ್ತೀಚಿನ ಘಟನೆಗಳು ತೋರುತ್ತವೆ. ನಾವು ಅದನ್ನು ಬೇರು ಸಮೇತ ಕಿತ್ತುಹಾಕಲು ನಿರ್ಧರಿಸಿದ್ದೇವೆ ಎಂದು ಒತ್ತಿ ಹೇಳಿದ್ದಾರೆ.

ಅಮಿತ್ ಶಾ ಅವರು ಭದ್ರತಾ ಏಜೆನ್ಸಿಗಳ ನಡುವೆ ತಡೆರಹಿತ ಸಮನ್ವಯಕ್ಕೆ ಒತ್ತು ನೀಡಿದರು. ದುರ್ಬಲ ಪ್ರದೇಶಗಳನ್ನು ಗುರುತಿಸುವುದು ಮತ್ತು ಅಂತಹ ಪ್ರದೇಶಗಳ ಭದ್ರತಾ ಕಾಳಜಿಗಳನ್ನು ಪರಿಹರಿಸುವುದು. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಪುನರುಚ್ಚರಿಸಿದರು.

ಇದನ್ನೂ ಓದಿ: ಭಯೋತ್ಪಾದಕರ ಬೆಂಬಲಿಗರ ಆಸ್ತಿ ಮುಟ್ಟುಗೋಲು, ಅವರ ಕುಟುಂಬಕ್ಕಿಲ್ಲ ಸರ್ಕಾರಿ ಉದ್ಯೋಗ

ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜೆ&ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಕೇಂದ್ರ ಗೃಹ ಕಾರ್ಯದರ್ಶಿ, ಇಂಟೆಲಿಜೆನ್ಸ್ ಬ್ಯೂರೋ ನಿರ್ದೇಶಕ, ಸೇನಾ ಮುಖ್ಯಸ್ಥ (ನಿಯೋಜಿತ) ಲೆಫ್ಟಿನೆಂಟ್, ಜನರಲ್ ಉಪೇಂದ್ರ ದ್ವಿವೇದಿ, ಸಿಎಪಿಎಫ್‌ಗಳ ಮಹಾನಿರ್ದೇಶಕರು, ಮುಖ್ಯ ಕಾರ್ಯದರ್ಶಿ, ಜೆ&ಕೆ ಡಿಜಿಪಿ ಮತ್ತು ಇತರ ಹಿರಿಯ ಅಧಿಕಾರಿಗಳು ಸೇರಿದಂತೆ ಹಿರಿಯ ಸೇನಾ ಅಧಿಕಾರಿಗಳು ಉಪಸ್ಥಿತರಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ