Breaking News ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರ ದಾಳಿ; ಓರ್ವ ಪೊಲೀಸ್ ಹುತಾತ್ಮ, ಯೋಧನಿಗೆ ಗಾಯ

| Updated By: ರಶ್ಮಿ ಕಲ್ಲಕಟ್ಟ

Updated on: Oct 02, 2022 | 4:34 PM

Pulwama ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಮತ್ತು ಪೊಲೀಸರ  ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ಒಬ್ಬ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು ಒಬ್ಬ ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ

Breaking News ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರ ದಾಳಿ; ಓರ್ವ ಪೊಲೀಸ್ ಹುತಾತ್ಮ, ಯೋಧನಿಗೆ ಗಾಯ
ಪ್ರಾತಿನಿಧಿಕ ಚಿತ್ರ
Follow us on

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪುಲ್ವಾಮಾದಲ್ಲಿ ಉಗ್ರರು ದಾಳಿ ನಡೆಸಿದ್ದು ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ. ಈ ದಾಳಿಯಲ್ಲಿಅರೆಸೈನಿಕ ಸಿಆರ್‌ಪಿಎಫ್ (CRPF) ಯೋಧ ಗಾಯಗೊಂಡಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ  ಟ್ವೀಟ್ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಮತ್ತು ಪೊಲೀಸರ  ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ಒಬ್ಬ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು  ಒಬ್ಬ ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.

ಪುಲ್ವಾಮಾದ ಪಿಂಗ್ಲಾನಾದಲ್ಲಿ ಸಿಆರ್‌ಪಿಎಫ್ ಮತ್ತು ಪೊಲೀಸರ ಜಂಟಿ ನಾಕಾ ಪಾರ್ಟಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ಭಯೋತ್ಪಾದಕ ದಾಳಿಯಲ್ಲಿ ಒಬ್ಬ  ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು ಓರ್ವ ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ ಮಾಡಿದ್ದಾರೆ.  ಇಲ್ಲಿ ಹೆಚ್ಚಿನ ತಂಡವನ್ನು ಕಳುಹಿಸಲಾಗಿದ್ದು  ಪ್ರದೇಶವನ್ನು ಸುತ್ತುವರಿಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂರು ಗಂಟೆಗಳ ಕಾರ್ಯಾಚರಣೆಯ ನಂತರ ಲಷ್ಕರ್ ಭಯೋತ್ಪಾದಕನನ್ನು ಹತ್ಯೆ ಮಾಡಿದ ಕೆಲವೇ ಗಂಟೆಗಳ ನಂತರ ಈ ದಾಳಿ ನಡೆದಿದೆ. ಭಯೋತ್ಪಾದಕನನ್ನು ನಸೀರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಈತ ಇತ್ತೀಚೆಗೆ ಎನ್‌ಕೌಂಟರ್‌ನಿಂದ ತಪ್ಪಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಈತ ಹಲವಾರು ಭಯೋತ್ಪಾದಕ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಎಂದು ಕಾಶ್ಮೀರದ ಎಡಿಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.

ಶೋಧ ಕಾರ್ಯಾಚರಣೆಯ ಸಮಯದಲ್ಲಿ ಎಕೆ ರೈಫಲ್ ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಜೊತೆ ನಂಟು ಹೊಂದಿದ್ದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಇದು ಬಾರಾಮುಲ್ಲಾ ಜಿಲ್ಲೆಯ ಪಟ್ಟನ್ ಪ್ರದೇಶದಲ್ಲಿ ನಡೆಯುತ್ತಿದ್ದ ಅಗ್ನಿಪಥ್ ನೇಮಕಾತಿ ರ್ಯಾಲಿಗೆ ಅಡ್ಡಿಪಡಿಸುವ ಪ್ರಯತ್ನ ಎಂದು ಪೊಲೀಸರು ಹೇಳಿದ್ದರು.

ಗೃಹ ಸಚಿವ ಅಮಿತ್ ಶಾ ಅವರು ಮೂರು ದಿನಗಳ ಭೇಟಿಗಾಗಿ ನಾಳೆ ಜಮ್ಮು ಮತ್ತು ಕಾಶ್ಮೀರಕ್ಕೆ ಆಗಮಿಸಲಿದ್ದಾರೆ. ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುವುದರ ಜೊತೆಗೆ  ಶಾ ರಜೌರಿ ಮತ್ತು ಬಾರಾಮುಲ್ಲಾ ಜಿಲ್ಲೆಯಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

 

Published On - 4:02 pm, Sun, 2 October 22