AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಯೋಜಿಸಿದವರನ್ನು ಆಪರೇಷನ್ ಸಿಂಧೂರ್ ಮೂಲಕ ಭದ್ರತಾ ಪಡೆಗಳು ಶಿಕ್ಷಿಸಿದವು. ಆಪರೇಷನ್ ಮಹಾದೇವ್ ಮೂಲಕ ಅದನ್ನು ನಡೆಸಿದವರನ್ನು ತಟಸ್ಥಗೊಳಿಸಿದವು. ಇದು ಭಯೋತ್ಪಾದನೆಗೆ ಭಾರತ ನೀಡಿದ ನಿರ್ಣಾಯಕ ಪ್ರತಿಕ್ರಿಯೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ್ದಾರೆ.

ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ
Amit Shah
ಸುಷ್ಮಾ ಚಕ್ರೆ
|

Updated on: Dec 26, 2025 | 11:03 PM

Share

ನವದೆಹಲಿ, ಡಿಸೆಂಬರ್ 26: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಯಶಸ್ವಿ ತನಿಖೆ ನಡೆಸುವ ಮೂಲಕ ಪಾಕಿಸ್ತಾನದ ಭಯೋತ್ಪಾದಕ ಮಾಸ್ಟರ್​​ಮೈಂಡ್​​ಗಳಿಗೆ ಬಲವಾದ ಮತ್ತು ಸೂಕ್ತವಾದ ಉತ್ತರವನ್ನು ನೀಡಲಾಗಿದೆ. ಪಹಲ್ಗಾಮ್ ತನಿಖೆಯು ಪಾಕಿಸ್ತಾನದ ಅಸಲಿ ಮುಖವನ್ನು ಜಗತ್ತಿನೆದುರು ಮತ್ತೊಮ್ಮೆ ಬಯಲು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಏಪ್ರಿಲ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ದಾಳಿಕೋರರು 26 ಜನರನ್ನು ಕೊಲ್ಲಲಾಗಿತ್ತು. ಅವರಲ್ಲಿ ಹೆಚ್ಚಿನವರು ಪ್ರವಾಸಿಗರು. ಇದು ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಗಳ ಕಾಲ ನಡೆದ ಸಂಘರ್ಷಕ್ಕೆ ಕಾರಣವಾಯಿತು.

ರಾಷ್ಟ್ರೀಯ ತನಿಖಾ ಸಂಸ್ಥೆ ಆಯೋಜಿಸಿದ್ದ ಭಯೋತ್ಪಾದನಾ ವಿರೋಧಿ ಸಮ್ಮೇಳನ-2025 ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ ಈ ಹೇಳಿಕೆಗಳನ್ನು ನೀಡಿದ್ದಾರೆ. ಎರಡು ಡೇಟಾಬೇಸ್‌ಗಳ ಜೊತೆಗೆ NIAಯ ನವೀಕರಿಸಿದ ಅಪರಾಧ ಕೈಪಿಡಿಯನ್ನು ಸಹ ಅವರು ಅನಾವರಣಗೊಳಿಸಿದರು.

ಇದನ್ನೂ ಓದಿ: ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ

ಭಯೋತ್ಪಾದನಾ ಕೃತ್ಯವನ್ನು ಯೋಜಿಸಿದವರನ್ನು ಆಪರೇಷನ್ ಸಿಂಧೂರ್ ಮೂಲಕ ಶಿಕ್ಷಿಸಲಾಯಿತು. ಅವರಿಗೆ ಒದಗಿಸಲಾದ ಶಸ್ತ್ರಾಸ್ತ್ರಗಳಿಂದ ಅದನ್ನು ಕಾರ್ಯಗತಗೊಳಿಸಿದವರನ್ನು ಆಪರೇಷನ್ ಮಹಾದೇವ್ ಮೂಲಕ ತಟಸ್ಥಗೊಳಿಸಲಾಯಿತು ಎಂದು ಹೇಳಿದ್ದಾರೆ.

ಬೈಸರನ್ ಕಣಿವೆಯಲ್ಲಿ ನಡೆದ ದಾಳಿಯನ್ನು ಉಲ್ಲೇಖಿಸಿದ ಅಮಿತ್ ಶಾ, ಈ ಘಟನೆಯು ದೇಶವನ್ನು ಬೆಚ್ಚಿಬೀಳಿಸಿದೆ. ಕೋಮು ಸಾಮರಸ್ಯವನ್ನು ಅಡ್ಡಿಪಡಿಸುವ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ಮತ್ತು ಪ್ರವಾಸೋದ್ಯಮದ ಮೇಲಿನ ನವೀಕೃತ ಗಮನವನ್ನು ಹಳಿತಪ್ಪಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!