ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯಿಂದ ಉಂಟಾಗುವ ಸಾವು ಶೇ. 70 ಕಡಿಮೆಯಾಗಿದೆ; ರಾಜ್ಯಸಭೆಯಲ್ಲಿ ಅಮಿತ್ ಶಾ

|

Updated on: Mar 21, 2025 | 5:29 PM

ನಾವು ಕಾಶ್ಮೀರವನ್ನು ಪರಿವರ್ತಿಸಿದ್ದೇವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯಲ್ಲಿ ಶೇ. 70ರಷ್ಟು ಇಳಿಕೆಯಾಗಿದೆ. ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಭಯೋತ್ಪಾದಕ ಘಟನೆಗಳು ಮೋದಿ ಸರ್ಕಾರದಡಿ ಗಮನಾರ್ಹವಾಗಿ ಕಡಿಮೆಯಾಗಿದೆ. 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಮೋದಿ ಸರ್ಕಾರವು ಸಂವಿಧಾನ ರಚನಾಕಾರ ಅಂಬೇಡ್ಕರ್ ಅವರ 'ಒಂದು ಸಂವಿಧಾನ, ಒಂದು ಧ್ವಜ'ದ ಕನಸನ್ನು ನನಸಾಗಿಸಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯಿಂದ ಉಂಟಾಗುವ ಸಾವು ಶೇ. 70 ಕಡಿಮೆಯಾಗಿದೆ; ರಾಜ್ಯಸಭೆಯಲ್ಲಿ ಅಮಿತ್ ಶಾ
Minister Amit Shah
Follow us on

ನವದೆಹಲಿ, ಮಾರ್ಚ್ 21: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಸಭೆಯಲ್ಲಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದನೆ ಮತ್ತು ಅಪರಾಧಗಳ ಬಗ್ಗೆ ಶೂನ್ಯ ಸಹಿಷ್ಣುತೆ ನೀತಿಯನ್ನು ತಂದಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಭಯೋತ್ಪಾದಕ ಘಟನೆಗಳು ಗಮನಾರ್ಹ ಇಳಿಕೆ ದರವನ್ನು ಕಂಡಿವೆ ಎಂದು ಹೇಳಿದರು. ಇಂದು ರಾಜ್ಯಸಭೆಯಲ್ಲಿ ಗೃಹ ಸಚಿವಾಲಯದ ಕಾರ್ಯವೈಖರಿಯ ಕುರಿತ ಚರ್ಚೆಗೆ ಉತ್ತರಿಸಿದ ಗೃಹ ಸಚಿವ ಅಮಿತ್ ಶಾ, “ಸಂವಿಧಾನವು ಕಾನೂನು ಮತ್ತು ಸುವ್ಯವಸ್ಥೆಯ ಜವಾಬ್ದಾರಿಯನ್ನು ರಾಜ್ಯಗಳಿಗೆ ನೀಡಿದೆ. ಗಡಿ ಭದ್ರತೆ ಮತ್ತು ಆಂತರಿಕ ಭದ್ರತೆ ಗೃಹ ಸಚಿವಾಲಯದ ಅಡಿಯಲ್ಲಿ ಬರುತ್ತವೆ. ಇದು ಸರಿಯಾದ ನಿರ್ಧಾರ. ಇದರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುವ ಅಗತ್ಯವಿಲ್ಲ. ಆದರೆ ಕಾನೂನು ಮತ್ತು ಸುವ್ಯವಸ್ಥೆಯನ್ನು ರಾಜ್ಯಗಳು ನೋಡಿಕೊಳ್ಳುವಾಗ, 76 ವರ್ಷಗಳ ನಂತರ ಹಲವಾರು ರೀತಿಯ ಅಪರಾಧಗಳು ರಾಜ್ಯ ಗಡಿಗಳಿಗೆ ಸೀಮಿತವಾಗಿರದೆ, ದೇಶದ ಹೊರಗಿನಿಂದಲೂ ಹಲವಾರು ಅಪರಾಧಗಳು ನಡೆಯುತ್ತವೆ. ಆದ್ದರಿಂದ, ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಗೃಹ ಸಚಿವಾಲಯದಲ್ಲಿ ಬದಲಾವಣೆಗಳನ್ನು ಮಾಡುವುದು ಅತ್ಯಗತ್ಯವಾಗುತ್ತದೆ. 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಗೃಹ ಸಚಿವಾಲಯಕ್ಕೆ ದೀರ್ಘಕಾಲದಿಂದ ಬಾಕಿ ಉಳಿದಿರುವ ಬದಲಾವಣೆಗಳನ್ನು ಮಾಡಿದ್ದಾರೆ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ” ಎಂದು ಹೇಳಿದ್ದಾರೆ.

370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಮೋದಿ ಸರ್ಕಾರವು ಸಂವಿಧಾನ ರಚನಾಕಾರ ಅಂಬೇಡ್ಕರ್ ಅವರ ‘ಒಂದು ಸಂವಿಧಾನ, ಒಂದು ಧ್ವಜ’ದ ಕನಸನ್ನು ನನಸಾಗಿಸಿದೆ ಎಂದು ಅಮಿತ್ ಶಾ ಹೇಳಿದರು. “ಕಾಶ್ಮೀರದಲ್ಲಿ ಈಗ ಸಂಜೆಯ ಸಮಯದಲ್ಲಿ ಸಿನಿಮಾ ಮಂದಿರಗಳು ತೆರೆದಿರುತ್ತವೆ, ಜಿ 20 ಸಭೆ ನಡೆಯಿತು, ಮೊಹರಂ ಮೆರವಣಿಗೆ ನಡೆಯಿತು. ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯದಲ್ಲಿ ಭಯೋತ್ಪಾದನೆ, ಎಡಪಂಥೀಯ ಉಗ್ರವಾದವು ದೇಶದ ಬೆಳವಣಿಗೆಗೆ ಅಡ್ಡಿಯಾಗುತ್ತಿತ್ತು. 92,000 ಜನರು ಜೀವ ಕಳೆದುಕೊಂಡರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
ಮನೆಗೆ ಬೆಂಕಿ ಬಿದ್ದಿದ್ದರಿಂದ ಬಯಲಾಯ್ತು ದೆಹಲಿ ಹೈಕೋರ್ಟ್ ಜಡ್ಜ್ ಅಕ್ರಮ
ನೇಮಕಾತಿ ಆಯೋಗದ ಬಗ್ಗೆ ರಾಜ್ಯಸಭೆಯಲ್ಲಿ ಜಗದೀಪ್ ಧಂಖರ್ ಪ್ರಸ್ತಾಪ
ಹಸುವಿನ ಹಾಲು ಕುಡಿದು, ವಾಂತಿ ಮಾಡಿಕೊಂಡು ಮಹಿಳೆ ಸಾವು!
ಲಕ್ನೋದಲ್ಲಿ ಇಳಿದ ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಶವ ಪತ್ತೆ


ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯಿಂದಾಗಿ ಸಾವುನೋವುಗಳ ಪ್ರಮಾಣ ಶೇ. 70ರಷ್ಟು ಇಳಿಕೆಯಾಗಿದೆ. ಭಯೋತ್ಪಾದಕ ಘಟನೆಗಳು ಗಮನಾರ್ಹವಾಗಿ ಕಡಿಮೆಯಾಗಿವೆ ಎಂದು ಅಮಿತ್ ಶಾ ಹೇಳಿದರು. “ದೇಶದ ಆಂತರಿಕ ಭದ್ರತೆ ಮತ್ತು ಗಡಿಗಳನ್ನು ಬಲಪಡಿಸಲು ಸರ್ವೋಚ್ಚ ತ್ಯಾಗ ಮಾಡಿದ ಸಾವಿರಾರು ರಾಜ್ಯ ಪೊಲೀಸರು ಮತ್ತು ಕೇಂದ್ರ ಅರೆಸೈನಿಕ ಪಡೆ ಯೋಧರಿಗೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ” ಎಂದು ಅಮಿತ್ ಶಾ ಹೇಳಿದರು.

ಇದನ್ನೂ ಓದಿ: ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ, 7 ಬಾರಿ ಚುನಾವಣೆ ಗೆದ್ದಿದ್ದೇನೆ; ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ

“ಜಮ್ಮು ಮತ್ತು ಕಾಶ್ಮೀರದಲ್ಲಿ 2019-24ರ ಅವಧಿಯಲ್ಲಿ 40,000 ಸರ್ಕಾರಿ ಉದ್ಯೋಗಗಳನ್ನು ಒದಗಿಸಲಾಗಿದೆ, 1.51 ಲಕ್ಷ ಸ್ವಯಂ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ, ಕೌಶಲ್ಯ ಕ್ಲಬ್‌ಗಳು ಕಾರ್ಯನಿರ್ವಹಿಸುತ್ತಿವೆ. ಆಕರ್ಷಕ ಕೈಗಾರಿಕಾ ನೀತಿಯಿಂದಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿ 12,000 ಕೋಟಿ ರೂ. ಹೂಡಿಕೆ, 1.1 ಲಕ್ಷ ಕೋಟಿ ರೂ. ಮೌಲ್ಯದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ” ಎಂದು ಅಮಿತ್ ಶಾ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Fri, 21 March 25