AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ; ಇಸ್ರೇಲ್ ಪಿಎಂ ನೆತನ್ಯಾಹು ಜೊತೆ ಪ್ರಧಾನಿ ಮೋದಿ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಬೆಝಮಿನ್ ನೆತನ್ಯಾಹು ಅವರೊಂದಿಗೆ ಫೋನ್​ನಲ್ಲಿ ಮಾತುಕತೆ ನಡೆಸಿದ್ದಾರೆ. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮೋದಿ ಈ ವೇಳೆ ಚರ್ಚಿಸಿದ್ದಾರೆ.

ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ; ಇಸ್ರೇಲ್ ಪಿಎಂ ನೆತನ್ಯಾಹು ಜೊತೆ ಪ್ರಧಾನಿ ಮೋದಿ ಚರ್ಚೆ
ನರೇಂದ್ರ ಮೋದಿ- ಬೆಂಜಮಿನ್ ನೆತನ್ಯಾಹು
ಸುಷ್ಮಾ ಚಕ್ರೆ
|

Updated on: Sep 30, 2024 | 9:27 PM

Share

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ಈ ವೇಳೆ ತಮ್ಮ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ, “ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ” ಎಂದು ಒತ್ತಿ ಹೇಳಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆಗಾಗಿ ಪ್ರಯತ್ನಗಳನ್ನು ಮಾಡುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಪಿಎಂ ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗಿನ ಸಂಭಾಷಣೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿರುವ ಅವರು, ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 100 ಜನ ಸಾವು, 400 ಮಂದಿಗೆ ಗಾಯ

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ಪ್ರಯತ್ನಗಳನ್ನು ಬೆಂಬಲಿಸುವ ಭಾರತದ ಬದ್ಧತೆಯ ಬಗ್ಗೆ ಮೋದಿ ಮಾತನಾಡಿದ್ದಾರೆ. “ಪ್ರಾದೇಶಿಕ ಉಲ್ಬಣವನ್ನು ತಡೆಗಟ್ಟಲು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ಇದು ನಿರ್ಣಾಯಕವಾಗಿದೆ. ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ಪ್ರಯತ್ನಗಳನ್ನು ಬೆಂಬಲಿಸಲು ಭಾರತವು ಬದ್ಧವಾಗಿದೆ” ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ: ಹಮಾಸ್ ನಾಯಕ ಮತ್ತು ಮೂವರು ಪ್ಯಾಲೆಸ್ತೀನ್ ಉಗ್ರರ ಹತ್ಯೆ

ಹಿಜ್ಬುಲ್ಲಾ ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಸಂಘರ್ಷವು ಮಧ್ಯಪ್ರಾಚ್ಯದಲ್ಲಿ ಶಾಂತಿಯನ್ನು ಅಡ್ಡಿಪಡಿಸುತ್ತದೆ. ಹಮಾಸ್ ಬಂದೂಕುಧಾರಿಗಳು ಗಾಜಾದಲ್ಲಿ ಯುದ್ಧವನ್ನು ಪ್ರಾರಂಭಿಸಿದ ನಂತರ ಈ ಹೋರಾಟವು ತೀವ್ರಗೊಂಡಿತು. ಉತ್ತರ ಇಸ್ರೇಲ್ ಮತ್ತು ಇಸ್ರೇಲಿ ಆಕ್ರಮಿತ ಗೋಲನ್ ಹೈಟ್ಸ್‌ಗೆ ಹಿಜ್ಬುಲ್ಲಾ 8,000 ರಾಕೆಟ್‌ಗಳನ್ನು ಉಡಾವಣೆ ಮಾಡಿದೆ. ಈ ಗುಂಪು ಶಸ್ತ್ರಸಜ್ಜಿತ ವಾಹನಗಳ ಮೇಲೆ ಟ್ಯಾಂಕ್ ವಿರೋಧಿ ಕ್ಷಿಪಣಿಗಳನ್ನು ಹಾರಿಸಿದೆ ಮತ್ತು ಸ್ಫೋಟಕ ಡ್ರೋನ್‌ಗಳೊಂದಿಗೆ ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದೆ. ಇಸ್ರೇಲ್ ರಕ್ಷಣಾ ಪಡೆಗಳು (IDF) ಲೆಬನಾನ್‌ನಲ್ಲಿನ ಹಿಜ್ಬುಲ್ಲಾ ಸ್ಥಾನಗಳ ವಿರುದ್ಧ ನಿರಂತರ ವಾಯುದಾಳಿಗಳು, ಟ್ಯಾಂಕ್‌ಗಳು ಮತ್ತು ಫಿರಂಗಿ ಗುಂಡಿನ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ