ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಶೇರಾ-ಸುಂದರ್‌ಬಾನಿ ವಲಯದ ಗಡಿ ನಿಯಂತ್ರಣ ರೇಖೆ ಬಳಿ ನಡೆದ ಗಣಿ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.
ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನಡೆದ ಗಣಿ ಸ್ಫೋಟದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಓರ್ವ ಅಧಿಕಾರಿ ಮತ್ತು ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗಾಯಗೊಂಡವರನ್ನು ಸೇನಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
“ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂವರು ಗಾಯಗೊಂಡಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಫೋಟ ಸಂಭವಿಸಿದ ಪ್ರದೇಶವು ಒಳನುಸುಳುವಿಕೆ ನಿಗ್ರಹ ವ್ಯವಸ್ಥೆಯ ಭಾಗವಾಗಿ ಸೇನೆಯು ಹುದುಗಿಸಿದ ನೆಲಬಾಂಬ್‌ಗಳಿಂದ ಕೂಡಿದೆ ಎಂದು ಪಿಟಿಐ ವರದಿ ಮಾಡಿದೆ. ನೌಶೇರಾ ಸೆಕ್ಟರ್ ಜಮ್ಮುವಿನ ಪಿರ್ಪಾಂಜಲ್ ಪ್ರದೇಶದ ಭಾಗವಾಗಿರುವ ರಜೌರಿ ಜಿಲ್ಲೆಯ ಅಡಿಯಲ್ಲಿ ಬರುತ್ತದೆ, ಅಲ್ಲಿ ಕಳೆದ ಮೂರು ವಾರಗಳಿಂದ ಸೇನಾ ಕಾರ್ಯಾಚರಣೆ ನಡೆಯುತ್ತಿದೆ.
ಪೂಂಚ್‌ನ ಅರಣ್ಯದಲ್ಲಿ ಅಡಗಿರುವ ಉಗ್ರರ ವಿರುದ್ಧ ಯಾವುದೇ ಯಶಸ್ಸು ಕಾಣದೆ ಇಬ್ಬರು ಅಧಿಕಾರಿಗಳು ಸೇರಿದಂತೆ 9 ಯೋಧರು ಹುತಾತ್ಮರಾಗಿದ್ದಾರೆ.
ಇದನ್ನೂ ಓದಿ: ಅಫ್ಘಾನಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗದಿರಲಿ; ತಾಲಿಬಾನ್ಗೆ ಭಾರತ, ಅಮೆರಿಕ ಒತ್ತಾಯ
Terrorists Attack: ಜಮ್ಮು ಕಾಶ್ಮೀರದ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡ; ವಿಡಿಯೋದಿಂದ ಬಯಲು