AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorist Encounter: ಜಮ್ಮು ಕಾಶ್ಮೀರದ ಅನಂತ್​ನಾಗ್​ನಲ್ಲಿ ಎನ್​ಕೌಂಟರ್; ಹಿಜ್ಬ್ ಕಮಾಂಡರ್ ಹತ್ಯೆ

ನಿಷೇಧಿತ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಹೆಚ್.ಎಂ. ನಿಸಾರ್ ಖಾಂಡೆಯನ್ನು ಹತ್ಯೆ ಮಾಡಲಾಗಿದೆ. ಈ ವೇಳೆ 1 ಎಕೆ 47 ರೈಫಲ್ ಸೇರಿದಂತೆ ಆಯುಧಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

Terrorist Encounter: ಜಮ್ಮು ಕಾಶ್ಮೀರದ ಅನಂತ್​ನಾಗ್​ನಲ್ಲಿ ಎನ್​ಕೌಂಟರ್; ಹಿಜ್ಬ್ ಕಮಾಂಡರ್ ಹತ್ಯೆ
ಸಾಂದರ್ಭಿಕ ಚಿತ್ರImage Credit source: Zee News
TV9 Web
| Updated By: ಸುಷ್ಮಾ ಚಕ್ರೆ|

Updated on: Jun 04, 2022 | 8:59 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir Encounter) ಅನಂತನಾಗ್ ಜಿಲ್ಲೆಯಲ್ಲಿ ಇಂದು (ಜೂನ್ 4) ಬೆಳಗಿನ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬ್-ಉಲ್-ಮುಜಾಹಿದ್ದೀನ್ (Hizb-ul-Mujahideen) ಸಂಘಟನೆಯ ನಿಸಾರ್ ಖಾಂಡೆಯನ್ನು ಹತ್ಯೆ ಮಾಡಲಾಗಿದೆ. ಈ ಎನ್​ಕೌಂಟರ್ ಕಾರ್ಯಾಚರಣೆ ವೇಳೆ ಮೂವರು ಸೈನಿಕರು ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ.

ಭಯೋತ್ಪಾದಕನಿಂದ ಒಂದು ಎಕೆ 47 ರೈಫಲ್ ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. “ನಿಷೇಧಿತ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಹೆಚ್.ಎಂ. ನಿಸಾರ್ ಖಾಂಡೆಯನ್ನು ಹತ್ಯೆ ಮಾಡಲಾಗಿದೆ. ಈ ವೇಳೆ 1 ಎಕೆ 47 ರೈಫಲ್ ಸೇರಿದಂತೆ ಆಯುಧಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಎನ್​ಕೌಂಟರ್ ಕಾರ್ಯಾಚರಣೆ ಪ್ರಗತಿಯಲ್ಲಿದೆ” ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ರಿಷಿಪೋರಾ ಗ್ರಾಮ ಕಪ್ರಾನ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ರಿಷಿಪೋರಾ ಗ್ರಾಮದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್‌ನ ಜಂಟಿ ತಂಡವು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.

ಇದನ್ನೂ ಓದಿ: Terrorist Encounter: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಹತ್ಯೆ ಬೆನ್ನಲ್ಲೇ ಆವಂತಿಪೊರಾದಲ್ಲೂ ಎನ್​ಕೌಂಟರ್

ಜಂಟಿ ಶೋಧ ತಂಡವು ಶಂಕಿತ ಸ್ಥಳವನ್ನು ಸುತ್ತುವರೆದಿದ್ದರಿಂದ, ಭಯೋತ್ಪಾದಕರು ಮತ್ತು ಶೋಧನಾ ತಂಡದ ನಡುವೆ ಗುಂಡಿನ ಚಕಮಕಿ ಪ್ರಾರಂಭವಾಯಿತು. ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಗುಂಡಿನ ಚಕಮಕಿಯನ್ನು ದೃಢಪಡಿಸಿದ್ದಾರೆ. ಅನಂತನಾಗ್‌ನ ರಿಷಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಪ್ರವೃತ್ತವಾಗಿವೆ. ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದಿದ್ದಾರೆ. ಇಬ್ಬರು ಭಯೋತ್ಪಾದಕರು ಕಾರ್ಡನ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ. ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ