Terrorist Encounter: ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಂದ ಎಲ್​ಇಟಿ ಉಗ್ರನ ಎನ್​ಕೌಂಟರ್

| Updated By: ಸುಷ್ಮಾ ಚಕ್ರೆ

Updated on: Oct 11, 2021 | 8:06 AM

Jammu Kashmir Encounter: ಎಲ್​ಇಟಿ ಸಂಘಟನೆಯ ಇಮ್ತಿಯಾಜ್ ಅಹಮದ್ ದಾರ್ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಈತ ಇತ್ತೀಚೆಗೆ ಬಂಡೀಪೊರದ ಶಹಗುಂದ್​ನಲ್ಲಿ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ.

Terrorist Encounter: ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಂದ ಎಲ್​ಇಟಿ ಉಗ್ರನ ಎನ್​ಕೌಂಟರ್
ಭಾರತೀಯ ಯೋಧರು
Follow us on

ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೊರದಲ್ಲಿ (Bandipora Encounter)) ಕಾಶ್ಮೀರದ ಪೊಲೀಸರು ಉಗ್ರನನ್ನು ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ ಉಗ್ರರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್ (Encounter) ಮೂಲಕ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ ಉಗ್ರ ಲಷ್ಕರ್-ಇ-ತೊಯ್ಬಾ (ಎಲ್​​ಇಟಿ) ಸಂಘಟನೆಗೆ ಸೇರಿದವನು ಎಂದು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲ್​ಇಟಿ ಸಂಘಟನೆಯ ಇಮ್ತಿಯಾಜ್ ಅಹಮದ್ ದಾರ್ ಪೊಲೀಸ್ ಎನ್​ಕೌಂಟರ್​ನಲ್ಲಿ ಸಾವನ್ನಪ್ಪಿದ್ದಾನೆ. ಈತ ಇತ್ತೀಚೆಗೆ ಬಂಡೀಪೊರದ ಶಹಗುಂದ್​ನಲ್ಲಿ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ. ಇಂದು ಬೆಳಗ್ಗೆ ಬಂಡಿಪೊರದಲ್ಲಿ ಎನ್​ಕೌಂಟರ್ ಕಾರ್ಯಾಚರಣೆ ಶುರುವಾಗಿತ್ತು ಪೊಲೀಸರು ಮತ್ತು ಭದ್ರತಾ ಪಡೆಯ ಸಿಬ್ಬಂದಿ ಸೇರಿ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪೊಲೀಸ್​ಗೆ ಕೂಡ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಹೈದರಾಬಾದ್ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್​ಕೌಂಟರ್ ಮಾಡುವುದಾಗಿ ಭರವಸೆ ನೀಡಿದ ತೆಲಂಗಾಣ ಸಚಿವ

ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ: ಉಗ್ರರ ನಿಗ್ರಹಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ ಅಮಿತ್ ಶಾ