
ಶ್ರೀನಗರ: ಜಮ್ಮು ಕಾಶ್ಮೀರದ ಆವಂತಿಪುರ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ (Tral Encounter) ಇಂದು ನಡೆದ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಜೈಷ್-ಇ-ಮೊಹಮ್ಮದ್ (JeM) ಸಂಘಟನೆಯ ಮುಖ್ಯ ಕಮಾಂಡರ್ನನ್ನು ಹತ್ಯೆ ಮಾಡಲಾಗಿದೆ. ಉಗ್ರರು ಮತ್ತು ಭದ್ರತಾ ಪಡೆಯ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಷ್ ಕಮಾಂಡರ್ನನ್ನು ಹೊಡೆದುರುಳಿಸಲಾಗಿದೆ.
ಈ ಬಗ್ಗೆ ಕಾಶ್ಮೀರದ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಜೈಷ್-ಇ-ಮೊಹಮ್ಮದ್ ಸಂಘಟನೆಯ ಕಮಾಂಡರ್ ಶ್ಯಾಮ್ ಸೋಫಿಯನ್ನು ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ತ್ರಾಲ್ ಸುತ್ತಮುತ್ತಲೂ ಇನ್ನೂ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಜಮ್ಮು ಕಾಶ್ಮೀರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎನ್ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಎಲ್ಇಟಿ ಸಂಘಟನೆಯ ಐವರು ಉಗ್ರರನ್ನು ಶೋಪಿಯಾನ್ನಲ್ಲಿ ನಡೆದ ಎನ್ಕೌಂಟರ್ ವೇಳೆ ಹತ್ಯೆ ಮಾಡಲಾಗಿತ್ತು. ಭಾರತೀಯ ಸೇನಾಪಡೆ ಉಗ್ರರ ಸದ್ದಡಗಿಸಲು ಪಣ ತೊಟ್ಟಿದ್ದು, ಕಾಶ್ಮೀರದ ಸುತ್ತಮುತ್ತ ಉಗ್ರರನ್ನು ಬೇಟೆಯಾಡುತ್ತಿದ್ದಾರೆ.
ಇದನ್ನೂ ಓದಿ: Terrorist Encounter: ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಂದ ಎಲ್ಇಟಿ ಉಗ್ರನ ಎನ್ಕೌಂಟರ್
ಕಾಶ್ಮೀರದಲ್ಲಿ ಮುಂಜಾನೆ ನಡೆದ ಎನ್ಕೌಂಟರ್; ಇಬ್ಬರು ಉಗ್ರರ ಹತ್ಯೆ, ಮೂವರು ಯೋಧರಿಗೆ ಗಾಯ
Published On - 4:07 pm, Wed, 13 October 21