AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದ ಬದ್ಗಾಮ್ ಅರಣ್ಯದಲ್ಲಿ ಸೇನಾ ಕಾರ್ಯಾಚರಣೆ; ಓರ್ವ ಉಗ್ರನ ಎನ್​ಕೌಂಟರ್

ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ಮತ್ತು ಶ್ರೀನಗರ ಸೆಕ್ಟರ್‌ನ ಸಿಆರ್‌ಪಿಎಫ್ ಜಂಟಿ ಪಡೆಗಳು ಓರ್ವ ಭಯೋತ್ಪಾದಕನ ಹತ್ಯೆ ಮಾಡಿವೆ. ಪುಲ್ವಾಮಾ ಜಿಲ್ಲೆಯ ಪಖರ್‌ಪೋರಾದಿಂದ ಬದ್ಗಾಮ್‌ನ ಯೂಸ್‌ಮಾರ್ಗ್‌ ಕಡೆಗೆ ಶಂಕಿತ ಉಗ್ರರ ಗುಂಪೊಂದು ಚಲಿಸುತ್ತಿರುವ ಮಾಹಿತಿಯ ಆಧಾರದ ಮೇಲೆ ಈ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು.

ಜಮ್ಮು ಕಾಶ್ಮೀರದ ಬದ್ಗಾಮ್ ಅರಣ್ಯದಲ್ಲಿ ಸೇನಾ ಕಾರ್ಯಾಚರಣೆ; ಓರ್ವ ಉಗ್ರನ ಎನ್​ಕೌಂಟರ್
ಸೇನಾ ಕಾರ್ಯಾಚರಣೆImage Credit source: x
ಸುಷ್ಮಾ ಚಕ್ರೆ
|

Updated on: Sep 04, 2026 | 5:52 PM

Share

ಶ್ರೀನಗರ, ಸೆಪ್ಟೆಂಬರ್ 4: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಇಂದು ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೋಲೀಸ್ ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ನಡೆಸಿದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಪುಲ್ವಾಮಾದ ಪಖರ್‌ಪೋರಾದಿಂದ ಬಡ್ಗಾಮ್‌ನ ಯೂಸ್‌ಮಾರ್ಗ್‌ ಕಡೆಗೆ ಶಂಕಿತ ಭಯೋತ್ಪಾದಕರ ಗುಂಪೊಂದು ಚಲಿಸುತ್ತಿರುವ ಬಗ್ಗೆ ನಿಖರ ಗುಪ್ತಚರ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಬದ್ಗಾಮ್‌ನ ಅಶ್‌ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು.

ಅರಣ್ಯ ಭಾಗದಲ್ಲಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ಜಂಟಿ ಪಡೆಗಳು ಎಚ್ಚರಿಕೆ ನೀಡಿದಾಗ, ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ. ಎನ್‌ಕೌಂಟರ್ ನಡೆದ ಸ್ಥಳದಿಂದ 1 ರೈಫಲ್ ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಎನ್‌ಕೌಂಟರ್ ಪ್ರತಿಕಾರಕ್ಕೆ ಅರಣ್ಯವೇ ಬಲಿ: ಮಲೆ ಮಹದೇಶ್ವರ ಬೆಟ್ಟದ 10 ಎಕರೆ ಕಾಡಿಗೆ ಬೆಂಕಿ

ಶೋಧ ಕಾರ್ಯಾಚರಣೆ ಮುಂದುವರಿಕೆ:

ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಅದೇ ಪ್ರದೇಶದಲ್ಲಿ ಇನ್ನೋರ್ವ ಶಂಕಿತ ಉಗ್ರ ಅಡಗಿರುವ ಶಂಕೆ ವ್ಯಕ್ತವಾಗಿರುವುದರಿಂದ ಶೋಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಮೃತಪಟ್ಟ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ