
ಶ್ರೀನಗರ, ಸೆಪ್ಟೆಂಬರ್ 4: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಇಂದು ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೋಲೀಸ್ ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ನಡೆಸಿದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಪುಲ್ವಾಮಾದ ಪಖರ್‌ಪೋರಾದಿಂದ ಬಡ್ಗಾಮ್‌ನ ಯೂಸ್‌ಮಾರ್ಗ್ ಕಡೆಗೆ ಶಂಕಿತ ಭಯೋತ್ಪಾದಕರ ಗುಂಪೊಂದು ಚಲಿಸುತ್ತಿರುವ ಬಗ್ಗೆ ನಿಖರ ಗುಪ್ತಚರ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಬದ್ಗಾಮ್‌ನ ಅಶ್‌ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು.
ಅರಣ್ಯ ಭಾಗದಲ್ಲಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ಜಂಟಿ ಪಡೆಗಳು ಎಚ್ಚರಿಕೆ ನೀಡಿದಾಗ, ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ. ಎನ್‌ಕೌಂಟರ್ ನಡೆದ ಸ್ಥಳದಿಂದ 1 ರೈಫಲ್ ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
OP ASHDAR, Budgam
Based on specific intelligence input, a Joint Search Operation was launched by #IndianArmy, @JmuKmrPolice and @crpf_srinagar in general area Ashdar Gali, Budgam.
Vigilant troops observed suspicious activity and upon being challenged, terrorists opened fire,…
— Chinar Corps🍁 – Indian Army (@ChinarcorpsIA) September 4, 2026
ಇದನ್ನೂ ಓದಿ: ಚಾಮರಾಜನಗರ: ಎನ್‌ಕೌಂಟರ್ ಪ್ರತಿಕಾರಕ್ಕೆ ಅರಣ್ಯವೇ ಬಲಿ: ಮಲೆ ಮಹದೇಶ್ವರ ಬೆಟ್ಟದ 10 ಎಕರೆ ಕಾಡಿಗೆ ಬೆಂಕಿ
ಶೋಧ ಕಾರ್ಯಾಚರಣೆ ಮುಂದುವರಿಕೆ:
ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಅದೇ ಪ್ರದೇಶದಲ್ಲಿ ಇನ್ನೋರ್ವ ಶಂಕಿತ ಉಗ್ರ ಅಡಗಿರುವ ಶಂಕೆ ವ್ಯಕ್ತವಾಗಿರುವುದರಿಂದ ಶೋಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಮೃತಪಟ್ಟ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ