ಶೋಪಿಯಾನ್​ ಎನ್​ಕೌಂಟರ್​, ಓರ್ವ ಭಯೋತ್ಪಾದಕನ ಹತ್ಯೆ, ಬಿಎಸ್​ಎಫ್ ಯೋಧರೊಬ್ಬರಿಗೆ ಗಾಯ

ಶೋಪಿಯಾನ್ ಎನ್‌ಕೌಂಟರ್‌ನಲ್ಲಿ ಟಿಆರ್‌ಎಫ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಯೋತ್ಪಾದಕನಿಂದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಪಿಯಾನ್‌ನ ಕಟೋಹ್ಲಾನ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಪೊಲೀಸರು ಮತ್ತು ಸೇನಾ ಸಿಬ್ಬಂದಿ ತೀವ್ರ ಕಟ್ಟೆಚ್ಚರವಹಿಸಿದ್ದಾರೆ.

ಶೋಪಿಯಾನ್​ ಎನ್​ಕೌಂಟರ್​, ಓರ್ವ ಭಯೋತ್ಪಾದಕನ ಹತ್ಯೆ, ಬಿಎಸ್​ಎಫ್ ಯೋಧರೊಬ್ಬರಿಗೆ ಗಾಯ
ಉಗ್ರ ಸಾವುImage Credit source: India Today
Follow us
ನಯನಾ ರಾಜೀವ್
|

Updated on: Nov 09, 2023 | 9:42 AM

ಶೋಪಿಯಾನ್ ಎನ್‌ಕೌಂಟರ್‌ನಲ್ಲಿ ಟಿಆರ್‌ಎಫ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಭಯೋತ್ಪಾದಕನಿಂದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಪಿಯಾನ್‌ನ ಕಟೋಹ್ಲಾನ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಪೊಲೀಸರು ಮತ್ತು ಸೇನಾ ಸಿಬ್ಬಂದಿ ತೀವ್ರ ಕಟ್ಟೆಚ್ಚರವಹಿಸಿದ್ದಾರೆ.

ಹತ್ಯೆಗೀಡಾದ ಭಯೋತ್ಪಾದಕನನ್ನು ಮೈಸರ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ನೊಂದಿಗೆ ಸಂಬಂಧ ಹೊಂದಿದ್ದನು ಎಂದು ಕಾಶ್ಮೀರ ವಲಯ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಕಥೋಹಲನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು.

ಮೊದಲು ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು, ಬಳಿಕ ನಡೆದ ಪ್ರತಿದಾಳಿಯಲ್ಲಿ ಓರ್ವ ಉಗ್ರನನ್ನು ಸದೆಬಡಿಯಲಾಗಿದೆ. ಪ್ರತ್ಯೇಕ ಘಟನೆಯಲ್ಲಿ, ಗುರುವಾರ ಮುಂಜಾನೆ ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್‌ನಲ್ಲಿ ಅಂತಾರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಪಾಕಿಸ್ತಾನಿ ರೇಂಜರ್‌ಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: Khalistan Terrorist: ಲಾಹೋರ್​ನಲ್ಲಿ ಖಲಿಸ್ತಾನಿ ಉಗ್ರ ಪರಮ್​ಜಿತ್ ಸಿಂಗ್​ನನ್ನು ಗುಂಡಿಕ್ಕಿ ಹತ್ಯೆ

ಅಕ್ಟೋಬರ್ 30 ರಿಂದ ಸತತ ಮೂರು ದಿನಗಳಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ