ಪಹಲ್ಗಾಮ್​ ದಾಳಿಕೋರ ಸಮೀರ್​ ಅಹ್ಮದ್ ಕುಟುಂಬದಿಂದ ಹೊರಬಿತ್ತು ಆಘಾತಕಾರಿ ಹೇಳಿಕೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್(Pahalgam)​ನಲ್ಲಿ ಏಪ್ರಿಲ್​ 22ರಂದು ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ದಾಳಿಯ ಹಿಂದಿರುವ ಉಗ್ರನ ಕುಟುಂಬದವರು ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಈ ಪಹಲ್ಗಾಮ್ ಗುಂಡಿನ ದಾಳಿ ಘಟನೆಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನ ಕುಟುಂಬವು ನೀಡಿದ ಇತ್ತೀಚಿನ ಹೇಳಿಕೆಯು ಈಗ ಚರ್ಚೆಯ ವಿಷಯವಾಗುತ್ತಿದೆ.

ಪಹಲ್ಗಾಮ್​ ದಾಳಿಕೋರ ಸಮೀರ್​ ಅಹ್ಮದ್ ಕುಟುಂಬದಿಂದ ಹೊರಬಿತ್ತು ಆಘಾತಕಾರಿ ಹೇಳಿಕೆ
Image Credit source: PTI

Updated on: Apr 27, 2025 | 10:42 AM

ಶ್ರೀನಗರ, ಏಪ್ರಿಲ್ 27: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್(Pahalgam)​ನಲ್ಲಿ ಏಪ್ರಿಲ್​ 22ರಂದು ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ದಾಳಿಯ ಹಿಂದಿರುವ ಉಗ್ರನ ಕುಟುಂಬದವರು ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಈ ಪಹಲ್ಗಾಮ್ ಗುಂಡಿನ ದಾಳಿ ಘಟನೆಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನ ಕುಟುಂಬವು ನೀಡಿದ ಇತ್ತೀಚಿನ ಹೇಳಿಕೆಯು ಈಗ ಚರ್ಚೆಯ ವಿಷಯವಾಗುತ್ತಿದೆ.

ಮೃತ ಉಗ್ರರಲ್ಲಿ ಒಬ್ಬನನ್ನು ಸ್ಥಳೀಯ ಯುವಕ ಸಮೀರ್ ಅಹ್ಮದ್ ಎಂದು ಗುರುತಿಸಲಾಗಿದೆ. ಅವನ ಕುಟುಂಬವು ಅವನನ್ನು ಸಮರ್ಥಿಸಿಕೊಂಡಿತು. ಆತ ಭಯೋತ್ಪಾದಕ ಅಲ್ಲ ಆತ ಒಬ್ಬ ಮುಜಾಹಿದ್ದೀನ್ ಅಷ್ಟೇ, ಅವನ ಹೋರಾಟಕ್ಕೂ ಕಾರಣಗಳಿವೆ ಎಂದು ಹೇಳಿದೆ.

ಸಮೀರ್​ನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿ, ಅವನು ತಿಳಿದೇ ಆ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದ, ಅವನ ನಂಬಿಕೆಗೆ ಆತ ಬದ್ಧನಾಗಿದ್ದ ಎಂದಿದ್ದಾಳೆ. ಸರ್ಕಾರವನ್ನು ಟೀಕಿಸಿದ ಆಕೆ, ನಿರಂತರ ಕಿರುಕುಳ, ಅನ್ಯಾಯಗಳು ಅವರನ್ನು ಉಗ್ರಗಾಮಿಗಳಾಗುವಂತೆ ಮಾಡುತ್ತಿದೆ ಎಂದು ಹೇಳಿದ್ದಾಳೆ.

ಇದನ್ನೂ ಓದಿ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಸಮೀರ್ ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂಬುದನ್ನು ಅಧಿಕಾರಿಗಳು ದೃಢಪಡಿಸಿದರು. ಈ ಪ್ರದೇಶದ ಎಲ್ಲಾ ಉಗ್ರಗಾಮಿ ಗುಂಪುಗಳ ವಿರುದ್ಧ ಕಠಿಣ ಕ್ರಮ ಮುಂದುವರೆಯುತ್ತದೆ ಎಂದಿದ್ದಾರೆ. ಈ ಘಟನೆಯು ಕಾಶ್ಮೀರದಲ್ಲಿ ಆಳವಾಗಿ ಬೇರೂರಿರುವ ಉದ್ವಿಗ್ನತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಮತ್ತಷ್ಟು ಓದಿ: ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಈ ಘಟನೆಯೊಂದಿಗೆ ಸಂಬಂಧ ಹೊಂದಿರುವ ಪ್ರತಿಯೊಬ್ಬರೂ ಇನ್ನು ಮುಂದೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಭಾರತ ಸರ್ಕಾರ ಮತ್ತು ಭಾರತೀಯ ಸೇನೆ ಸ್ಪಷ್ಟಪಡಿಸಿದೆ. ಕೊಲ್ಲಲ್ಪಟ್ಟವರಲ್ಲಿ ಇಬ್ಬರು ವಿದೇಶಿಯರು (ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ನೇಪಾಳದವರು) ಮತ್ತು ಇಬ್ಬರು ಸ್ಥಳೀಯ ನಿವಾಸಿಗಳು ಸೇರಿದ್ದಾರೆ. 26 ಜನರಲ್ಲಿ 22 ಜನರನ್ನು ಗುರುತಿಸಲಾಗಿದ್ದು, ಉಳಿದವರನ್ನು ಗುರುತಿಸಲಾಗುತ್ತಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಸೈಫುಲ್ಲಾ.

ಸೈಫುಲ್ಲಾ ಖಾಲಿದ್​ನನ್ನು ಸೈಫುಲ್ಲಾ ಕಸೂರಿ ಎಂದೂ ಕರೆಯುತ್ತಾರೆ. ಆತ ಲಷ್ಕರ್ ಎ ತೊಯ್ಬಾ ಉಪ ಮುಖ್ಯಸ್ಥನಾಗಿದ್ದಾನೆ, ಅಂತಾರಾಷ್ಟ್ರೀಯ ಭಯೋತ್ಪಾದಕ ಹಫೀಜ್ ಸಯೀದ್​ಗೆ ಆಪ್ತ ಎಂದು ಪರಿಗಣಿಸಲಾಗಿದೆ. ಸೈಫುಲ್ಲಾಗೆ ಐಷಾರಾಮಿ ಕಾರುಗಳೆಂದರೆ ಇಷ್ಟ, ಆತನಿಗೆ ಭಾರತದ ಪ್ರಧಾನಿಗಿಂತ ಹೆಚ್ಚಿನ ಭದ್ರತೆ ಇದೆಯಂತೆ.

ಸೈಫುಲ್ಲಾ ಖಾಲಿದ್ ಪಾಕಿಸ್ತಾನದಲ್ಲಿ ಎಷ್ಟು ಪ್ರಭಾವ ಹೊಂದಿದ್ದಾನೆಂದರೆ ಪಾಕಿಸ್ತಾನಿ ಸೇನಾ ಅಧಿಕಾರಿಗಳು ಆತನ ಮೇಲೆ ಹೂಮಳೆ ಸುರಿಸಿ ಬರಮಾಡಿಕೊಳ್ಳುತ್ತಾರೆ. ಆತ ಪಾಕಿಸ್ತಾನದಲ್ಲಿ ವಿಐಪಿಯಂತೆ ಓಡಾಡುತ್ತಾನೆ. ಸೈಫುಲ್ಲಾ ಎರಡು ತಿಂಗಳ ಹಿಂದೆ ಪಾಕಿಸ್ತಾನ ಆಕ್ರಮಿತ ಪಂಜಾಬ್​ನ ಕಂಗನ್​ಪುರ ಪ್ರದೇಶಕ್ಕೆ ಬಂದಿದ್ದ, ಅಲ್ಲಿ ಒಂದು ಕಾರ್ಯಕ್ರಮವನ್ನು ಪಾಕಿಸ್ತಾನಿ ಸೇನೆಯ ಕರ್ನಲ್ ಜಾಹಿದ್ ಜರೀನ್ ಖಟ್ಟಕ್ ಆಯೋಜಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ