ರಜೌರಿ/ಜಮ್ಮು ಆಗಸ್ಟ್ 05: ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಜೌರಿ (Rajouri) ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ (Encounter) ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಮುಖೇಶ್ ಸಿಂಗ್ ತಿಳಿಸಿದ್ದಾರೆ. ಬುಧಾಲ್ ಪ್ರದೇಶದ ಗುಂಧಾ-ಖಾವಾಸ್ ಗ್ರಾಮದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ನಂತರ ಪೊಲೀಸರು ಮತ್ತು ಸೇನೆ ಶೋಧ ಕಾರ್ಯಾಚರಣೆ ನಡೆಸಿದ್ದು ಈ ಸಮಯದಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮದಿಂದ ಕೆಲವು ಗುಂಡಿನ ಶಬ್ದಗಳು ಕೇಳಿಬಂದವು. ಹೆಚ್ಚಿನ ಪಡೆ ಸ್ಥಳಕ್ಕೆ ಧಾವಿಸಿದೆ ಎಂದು ಅವರು ಹೇಳಿದರು. ಅಲ್ಲ್ ಎನ್‌ಕೌಂಟರ್ ನಡೆಯುತ್ತಿದೆ ಎಂದು ಎಡಿಜಿಪಿ ತಿಳಿಸಿದ್ದಾರೆ.
J&K : One terrorist has been eliminated in an ongoing encounter in #Rajouri, ops still on.#IADN pic.twitter.com/20g10xjLDg
— Indian Aerospace Defence News – IADN (@NewsIADN) August 5, 2023
ಇದುವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಸೇನಾ ಸಿಬ್ಬಂದಿ ಹತರಾಗಿದ್ದಾರೆ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಇದೇ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು ಎಂದು ಅವರು ಹೇಳಿದರು.
ಕುಲ್ಗಾಮ್‌ನ ಹಲಾನ್ ಅರಣ್ಯ ಪ್ರದೇಶಗಳಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಸಿಬ್ಬಂದಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಶೋಧ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಆಫ್ ಆರ್ಮಿ ಟ್ವೀಟ್ನಲ್ಲಿ ತಿಳಿಸಿದೆ.
ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು
ಇದಕ್ಕೂ ಮುನ್ನ ಪೂಂಛ್ನ ಸಿಂಧ್ರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆಗೈದಿವೆ. ಜಂಟಿ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಉಗ್ರರನ್ನು ಹತ್ಯೆ ಮಾಡಿದೆ. ಈ ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಿಶೇಷ ಪಡೆ, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು. ಎನ್‌ಕೌಂಟರ್‌ನಲ್ಲಿ ಹತರಾದ ಉಗ್ರರು ವಿದೇಶಿ ಭಯೋತ್ಪಾದಕರು ಎನ್ನಲಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:22 pm, Sat, 5 August 23