ಮಣಿಪುರದಲ್ಲಿ ಉಗ್ರರ ದಾಳಿ; ಐವರು ಯೋಧರ ಮರಣ, ಕಮಾಂಡಿಂಗ್ ಅಧಿಕಾರಿಯ ಪತ್ನಿ, ಪುತ್ರನೂ ಸಾವು

ಉಗ್ರ ದಾಳಿಯನ್ನು ಮಣಿಪುರ ಮುಖ್ಯಮಂತ್ರಿ ಎನ್​.ಬಿರನ್​ ಸಿಂಗ್​ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, 46 ಅಸ್ಸಾಂ ರೈಫಲ್ಸ್​ ಮೇಲೆ ಉಗ್ರರು ಹೇಡಿತನದಿಂದ, ಹೊಂಚು ಹಾಕಿ ದಾಳಿ ಮಾಡಿದ್ದು ಖಂಡನೀಯ ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ಉಗ್ರರ ದಾಳಿ; ಐವರು ಯೋಧರ ಮರಣ, ಕಮಾಂಡಿಂಗ್ ಅಧಿಕಾರಿಯ ಪತ್ನಿ, ಪುತ್ರನೂ ಸಾವು
ಸಾಂಕೇತಿಕ ಚಿತ್ರ
Follow us
| Updated By: Lakshmi Hegde

Updated on:Nov 13, 2021 | 3:52 PM

ಉಗ್ರರು ಹೊಂಚು ಹಾಕಿ ನಡೆಸಿದ ದಾಳಿಯಲ್ಲಿ ಭಾರತೀಯ ಸೇನೆಯ ನಾಲ್ವರು ಯೋಧರು, ಅಸ್ಸಾಂ 46 ರೈಫಲ್​​ನ ಕಮಾಂಡಿಂಗ್​ ಅಧಿಕಾರಿ, ಅವರ ಮಗ, ಪತ್ನಿ ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ. ಮಣಿಪುರ ಸಿಂಘಾತ್​​ನಲ್ಲಿ ಇಂದು ಘಟನೆ ನಡೆದಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಇವರನ್ನೆಲ್ಲ ಬೆಹಿರಂಗ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪುರ ಮೂಲದ ಬಂಡುಕೋರರ ಗುಂಪು ಪೀಪಲ್ಸ್​ ಲಿಬರೇಶನ್​ ಆರ್ಮಿ ಈ ದಾಳಿ ನಡೆಸಿದ್ದಾಗಿ ಮಾಹಿತಿ ಸಿಕ್ಕಿದೆ. ಹುತಾತ್ಮರಾದ ಕಮಾಂಡಿಂಗ್​ ಆಫೀಸರ್​​ನ್ನು ಕರ್ನಲ್​ ವಿಪ್ಲವ್​ ತ್ರಿಪಾಠಿ ಎಂದು ಗುರುತಿಸಲಾಗಿದೆ.  ಇವರು ಮಯನ್ಮಾರ್ ಗಡಿಯಲ್ಲಿ ಇದ್ದವರು, ದಾಳಿ ನಡೆಯುವ ಸಂದರ್ಭದಲ್ಲಿ ಅಲ್ಲಿಂದ ಕುಟುಂಬದೊಂದಿಗೆ ಹಿಂತಿರುಗುತ್ತಿದ್ದರು. 

ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರು ಯೋಧರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಉಗ್ರರ ಈ ಹೇಡಿತನದ ದಾಳಿ ನಿಜಕ್ಕೂ ನೋವು ತಂದಿದೆ ಮತ್ತು ಖಂಡನೀಯವಾಗಿದೆ. ಐವರು ವೀರ ಯೋಧರನ್ನು ಈ ದೇಶ ಇಂದು ಕಳೆದುಕೊಂಡಿದೆ. ಅದರಲ್ಲೂ ಕಮಾಂಡಿಂಗ್ ಅಧಿಕಾರಿಯ ಕುಟುಂಬವನ್ನು ಟಾರ್ಗೆಟ್​ ಮಾಡಿದ್ದು ನಿಜಕ್ಕೂ ದುರಂತ.  ಈ ಸಾವಿಗೆ ನ್ಯಾಯ ಒದಗಿಸದೆ ಸುಮ್ಮನಾಗುವುದಿಲ್ಲ ಎಂದಿದ್ದಾರೆ.

ಮುಖ್ಯಮಂತ್ರಿ ಖಂಡನೆ ಈ ಉಗ್ರ ದಾಳಿಯನ್ನು ಮಣಿಪುರ ಮುಖ್ಯಮಂತ್ರಿ ಎನ್​.ಬಿರನ್​ ಸಿಂಗ್​ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, 46 ಅಸ್ಸಾಂ ರೈಫಲ್ಸ್​ ಮೇಲೆ ಉಗ್ರರು ಹೇಡಿತನದಿಂದ, ಹೊಂಚು ಹಾಕಿ ದಾಳಿ ಮಾಡಿದ್ದು ಖಂಡನೀಯ. ಸಿಸಿಪುರ ಎಂಬಲ್ಲಿ ನಡೆದ ಈ ದಾಳಿಯಲ್ಲಿ ಕಮಾಂಡಿಂಗ್​ ಅಧಿಕಾರಿ ಮತ್ತವರ ಕುಟುಂಬವೂ ಹತ್ಯೆಗೀಡಾಗಿದೆ. ಯೋಧರು ಹುತಾತ್ಮರಾಗಿದ್ದಾರೆ. ಉಗ್ರರನ್ನು ಸೆರೆಹಿಡಿಯಲು ರಾಜ್ಯದ ಭದ್ರತಾ ಪಡೆಗಳು ಮತ್ತು ಪ್ಯಾರಾಮಿಲಿಟರಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ ಆಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ’: ಶಾಂಪೇನ್​ ಅಚಾತುರ್ಯಕ್ಕೆ ರಕ್ಷಿತಾ ಪ್ರೇಮ್​ ಕ್ಷಮೆ

Published On - 3:03 pm, Sat, 13 November 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್