ಕಾಶ್ಮೀರದಲ್ಲಿ ವಾಯುಪಡೆಯ ವಾಹನದ ಮೇಲೆ ಉಗ್ರರ ದಾಳಿ; ಸೇನಾ ಅಧಿಕಾರಿಗಳಿಗೆ ಗಾಯ

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಉಗ್ರರು ಇಂದು ದಾಳಿ ನಡೆಸಿದ್ದಾರೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಶಾಸಿತಾರ್ ಬಳಿಯ ಜನರಲ್ ಏರಿಯಾದಲ್ಲಿರುವ ವಾಯುನೆಲೆಯೊಳಗೆ ವಾಹನಗಳನ್ನು ಭದ್ರಪಡಿಸಲಾಗಿದೆ.

ಕಾಶ್ಮೀರದಲ್ಲಿ ವಾಯುಪಡೆಯ ವಾಹನದ ಮೇಲೆ ಉಗ್ರರ ದಾಳಿ; ಸೇನಾ ಅಧಿಕಾರಿಗಳಿಗೆ ಗಾಯ
ಉಗ್ರರ ದಾಳಿ
Follow us
ಸುಷ್ಮಾ ಚಕ್ರೆ
|

Updated on: May 04, 2024 | 8:24 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ (Poonch) ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆಯ (IAF) ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ (Terrorists Attack) ನಡೆಸಿದ್ದಾರೆ. ಈ ದಾಳಿಯಲ್ಲಿ ಕೆಲವು ಸೇನಾ ಸಿಬ್ಬಂದಿ ಹಾಗೂ ಐವರು ಭಾರತೀಯ ವಾಯುಪಡೆಯ ಸೇನಾ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಮೂಲಗಳ ಪ್ರಕಾರ, ಉಗ್ರರು ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಸುಮಾರು 30 ಸುತ್ತು ಗುಂಡು ಹಾರಿಸಿದ್ದಾರೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯವಾದ ಬಗ್ಗೆ ವರದಿಯಾಗಿಲ್ಲ. ಆದರೆ, ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ನೆಲೆಸಿದ್ದ ಬಂಧಿತ ಉಗ್ರರ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ

ಇಂದು ಸಂಜೆ ಜಿಲ್ಲೆಯ ಸೂರನಕೋಟೆ ಪ್ರದೇಶದ ಸನಾಯಿ ಟಾಪ್ ಕಡೆಗೆ ವಾಹನಗಳು ತೆರಳುತ್ತಿದ್ದಾಗ ಶಶಿಧರ್ ಬಳಿ ಉಗ್ರರ ದಾಳಿ ನಡೆದಿದೆ ಎಂದು ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ. ಐವರು ಯೋಧರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Manipur attack: ಮಣಿಪುರದಲ್ಲಿ ಉಗ್ರರ ಬಾಂಬ್​​ ದಾಳಿ, ಇಬ್ಬರು ಯೋಧರು ಹುತಾತ್ಮ

ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಶಾಸಿತಾರ್ ಬಳಿಯ ಸಾಮಾನ್ಯ ಪ್ರದೇಶದಲ್ಲಿ ವಾಹನಗಳನ್ನು ವಾಯು ನೆಲೆಯೊಳಗೆ ಭದ್ರಪಡಿಸಲಾಗಿದೆ. ಈಗಾಗಲೇ ಹೆಚ್ಚುವರಿ ಸೇನಾ ಪತ್ತು ಪೊಲೀಸ್ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಭಯೋತ್ಪಾದಕರನ್ನು ಪತ್ತೆಹಚ್ಚಲು ಬೃಹತ್ ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ