Poonch Terror Attack: ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ಉಗ್ರರ ಗುಂಡೇಟಿಗೆ ಸೇನಾಧಿಕಾರಿ, ಯೋಧ ಸಾವು
Jammu Kashmir Encounter: ಪೂಂಚ್-ರಾಜೌರಿ ಅರಣ್ಯದಲ್ಲಿ ಸೇನೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಅಧಿಕಾರಿ, ಸೈನಿಕ ಹುತಾತ್ಮರಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಐವರು ಸೇನಾ ಸಿಬ್ಬಂದಿಗಳನ್ನು ಉಗ್ರರು ಹತ್ಯೆ ಮಾಡಿದ್ದರು.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಸೇನಾಧಿಕಾರಿ ಮತ್ತು ಓರ್ವ ಯೋಧ ಹುತಾತ್ಮರಾಗಿದ್ದಾರೆ. ಪೂಂಚ್-ರಾಜೌರಿ ಅರಣ್ಯದಲ್ಲಿ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆಯಿತು. ನಾಲ್ಕು ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಐವರು ಸೇನಾ ಸಿಬ್ಬಂದಿಗಳನ್ನು ಉಗ್ರರು ಹತ್ಯೆ ಮಾಡಿದ್ದರು.
ಉಗ್ರರ ಗುಂಡೇಟಿನಿಂದ ಸೇನಾಧಿಕಾರಿ ಮತ್ತು ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರಿಬ್ಬರೂ ಸಾವನ್ನಪ್ಪಿದ್ದಾರೆ. ಪೂಂಚ್-ರಾಜೌರಿ ಕಾಡಿನಲ್ಲಿ ಉಗ್ರರು ಮತ್ತು ಸೇನಾ ಪಡೆಯ ನಡುವೆ ನಡೆದ ಕಾರ್ಯಾಚರಣೆ ವೇಳೆ ಸೇನಾ ಅಧಿಕಾರಿ ಮತ್ತು ನಾಲ್ವರು ಸೈನಿಕರು ಸಾವನ್ನಪ್ಪಿದ್ದರು. ಅದಾದ ಬಳಿ ಆ ಪ್ರದೇಶದಲ್ಲಿ ಹೆಚ್ಚಿನ ಸೇನಾಪಡೆಯನ್ನು ನಿಯೋಜನೆ ಮಾಡಲಾಗಿತ್ತು. ನಿನ್ನೆ ಗುಂಡೇಟಿನಿಂದ ಸೇನಾ ಅಧಿಕಾರಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಜಮ್ಮು-ಪೂಂಚ್-ರಾಜೌರಿ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ.
ಅಕ್ಟೋಬರ್ 10ರಂದು ತಡರಾತ್ರಿ ಭದ್ರತಾ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದ ಭಯೋತ್ಪಾದಕರ ಗುಂಪಿನೊಂದಿಗೆ ಮತ್ತೆ ನಿನ್ನೆ ಎನ್ಕೌಂಟರ್ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಸೇನಾಧಿಕಾರಿ ಹಾಗೂ ಯೋಧನೋರ್ವ ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ಸೇನಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇನ್ನೂ ಕಾರ್ಯಾಚರಣೆ ಮುಂದುವರೆದಿದೆ.
ಇದನ್ನೂ ಓದಿ: Tral Encounter: ಕಾಶ್ಮೀರದ ತ್ರಾಲ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಜೈಷ್ ಉಗ್ರ ಸಂಘಟನೆಯ ಕಮಾಂಡರ್ ಹತ್ಯೆ
Poonch Encounter: ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ಉಗ್ರರ ಗುಂಡೇಟಿನಿಂದ ಸೇನಾ ಅಧಿಕಾರಿ, ನಾಲ್ವರು ಯೋಧರು ಸಾವು