Terrorists Encounter: ಜಮ್ಮು ಕಾಶ್ಮೀರದ ಅನಂತ್​ನಾಗ್​​ನಲ್ಲಿ ಎನ್​ಕೌಂಟರ್ ಕಾರ್ಯಾಚರಣೆ; ಓರ್ವ ಉಗ್ರನ ಹತ್ಯೆ

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಡೆಸಿದ 2 ಎನ್‌ಕೌಂಟರ್‌ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿತ್ತು.

Terrorists Encounter: ಜಮ್ಮು ಕಾಶ್ಮೀರದ ಅನಂತ್​ನಾಗ್​​ನಲ್ಲಿ ಎನ್​ಕೌಂಟರ್ ಕಾರ್ಯಾಚರಣೆ; ಓರ್ವ ಉಗ್ರನ ಹತ್ಯೆ
ಎನ್‌ಕೌಂಟರ್‌
Updated By: ಸುಷ್ಮಾ ಚಕ್ರೆ

Updated on: Oct 10, 2022 | 8:59 AM

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನ (Anantnag Encounter) ತಂಗ್‌ಪಾವಾ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಎನ್​ಕೌಂಟರ್ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡಲಾಗುವುದು ಎಂದು ಕಾಶ್ಮೀರ ವಲಯ ಪೊಲೀಸರು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಉಗ್ರರು ಅಡಗಿರುವ ಪ್ರದೇಶವನ್ನು ಸುತ್ತುವರಿದಿದ್ದರು. ಆಗ ಗುಂಡಿನ ಚಕಮಕಿ ನಡೆಯಿತು. ಈ ಕಾರ್ಯಾಚರಣೆಯಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಇನ್ನೋರ್ವ ಸೈನಿಕ ಗಾಯಗೊಂಡಿದ್ದಾನೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಡೆಸಿದ 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿತ್ತು.

ಇದನ್ನೂ ಓದಿ: Terrorists Encounter: ಕಾಶ್ಮೀರದ ಶೋಪಿಯಾನ್​ನಲ್ಲಿ ಸರಣಿ ಎನ್​ಕೌಂಟರ್; ಭದ್ರತಾ ಪಡೆಯಿಂದ ನಾಲ್ವರು ಉಗ್ರರ ಹತ್ಯೆ

ಶೋಪಿಯಾನ್ ಜಿಲ್ಲೆಯ ದ್ರಾಚ್ ಪ್ರದೇಶದಲ್ಲಿ ಕಳೆದ ಮಂಗಳವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಶೋಪಿಯಾನ್‌ನ ಮೂಲು ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಸ್ಥಳೀಯ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು.

ಶೋಪಿಯಾನ್‌ನ ದ್ರಾಚ್ ಪ್ರದೇಶದಲ್ಲಿ ಕಳೆದ ವಾರ ನಡೆದ ಮೊದಲ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಜೊತೆ ನಂಟು ಹೊಂದಿದ್ದ ಮೂವರು ಸ್ಥಳೀಯ ಭಯೋತ್ಪಾದಕರು ಹತರಾಗಿದ್ದರು. ಬಳಿಕ ಶೋಪಿಯಾನ್‌ನ ಮುಲು ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಎರಡನೇ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಜೊತೆ ನಂಟು ಹೊಂದಿದ್ದ ಒಬ್ಬ ಸ್ಥಳೀಯ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: Terrorists Encounter: ಅಗ್ನಿವೀರ್ ರ್ಯಾಲಿ ಮೇಲೆ ದಾಳಿಗೆ ಸಂಚು; ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಉಗ್ರರ ಎನ್​ಕೌಂಟರ್

ದ್ರಾಚ್ ಎನ್‌ಕೌಂಟರ್‌ನಲ್ಲಿ ಹತರಾದ ಇಬ್ಬರು ಭಯೋತ್ಪಾದಕರನ್ನು ಹನನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಪುಲ್ವಾಮಾದಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಜಾವೇದ್ ದಾರ್ ಅವರ ಹತ್ಯೆಯಲ್ಲಿ ಅವರು ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ