Terrorists Encounter: ಕಾಶ್ಮೀರದ ಶೋಪಿಯಾನ್​ನಲ್ಲಿ ಸರಣಿ ಎನ್​ಕೌಂಟರ್; ಭದ್ರತಾ ಪಡೆಯಿಂದ ನಾಲ್ವರು ಉಗ್ರರ ಹತ್ಯೆ

ಹತರಾದ ನಾಲ್ವರು ಭಯೋತ್ಪಾದಕರ ಪೈಕಿ ಮೂವರು ಜೈಶ್-ಎ-ಮೊಹಮ್ಮದ್‌ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದು, ನಾಲ್ಕನೆಯವನು ಲಷ್ಕರ್-ಎ-ತೊಯ್ಬಾದೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.

Terrorists Encounter: ಕಾಶ್ಮೀರದ ಶೋಪಿಯಾನ್​ನಲ್ಲಿ ಸರಣಿ ಎನ್​ಕೌಂಟರ್; ಭದ್ರತಾ ಪಡೆಯಿಂದ ನಾಲ್ವರು ಉಗ್ರರ ಹತ್ಯೆ
ಉಗ್ರರ ಎನ್​ಕೌಂಟರ್ ಕಾರ್ಯಾಚರಣೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 05, 2022 | 10:06 AM

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ (Shopian) ನಡೆದ ಸರಣಿ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಭದ್ರತಾ ಪಡೆಗಳ (Security Forces) ಸಿಬ್ಬಂದಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತರಾದ ನಾಲ್ವರು ಭಯೋತ್ಪಾದಕರ ಪೈಕಿ ಮೂವರು ಜೈಶ್-ಎ-ಮೊಹಮ್ಮದ್‌ (Jaish-e-Mohammed) ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದು, ನಾಲ್ಕನೆಯವನು ಲಷ್ಕರ್-ಎ-ತೊಯ್ಬಾದೊಂದಿಗೆ (Lashkar-e-Taiba) ಸಂಪರ್ಕ ಹೊಂದಿದ್ದ ಎನ್ನಲಾಗಿದೆ.

ಶೋಪಿಯಾನ್‌ನ ಡ್ರಾಚ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹತರಾದ ಮೂವರು ಜೈಶ್ ಭಯೋತ್ಪಾದಕರ ಪೈಕಿ ಇಬ್ಬರನ್ನು ಹನನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎಂದು ಗುರುತಿಸಲಾಗಿದ್ದು, ಅವರು ಇತ್ತೀಚೆಗೆ ಪುಲ್ವಾಮಾದಲ್ಲಿ ನಡೆದ ವಿಶೇಷ ಪೊಲೀಸ್ ಅಧಿಕಾರಿ ಮತ್ತು ಕಾರ್ಮಿಕನ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಶೋಪಿಯಾನ್‌ನ ಡ್ರಾಚ್ ಮತ್ತು ಮೂಲು ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದವು. ಮೂಲುವಿನಲ್ಲಿ ಎನ್‌ಕೌಂಟರ್ ಇನ್ನೂ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಶೋಪಿಯಾನ್‌ನ ಮೂಲು ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಲ್ಗಾಂನಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆ ಜೊತೆ ನಂಟು ಹೊಂದಿದ್ದ ಪಾಕಿಸ್ತಾನಿ ಉಗ್ರನ ಎನ್​ಕೌಂಟರ್

ಮಂಗಳವಾರ ಮುಂಜಾನೆ ಶೋಪಿಯಾನ್‌ನ ಡ್ರಾಚ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯಿತು ಎಂದು ಇಂದು ಕಾಶ್ಮೀರ ವಲಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 2ರಂದು ಜಮ್ಮು ಕಾಶ್ಮೀರದ ಶೋಪಿಯಾನ್‌ನ ಬಾಸ್ಕುಚಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಉಗ್ರನನ್ನು ಪೊಲೀಸರು ಹತ್ಯೆ ಮಾಡಿದ್ದರು.

ಕಾಶ್ಮೀರದ ಎಡಿಜಿಪಿ ಪ್ರಕಾರ, ಮೃತಪಟ್ಟ ಭಯೋತ್ಪಾದಕನನ್ನು ಶೋಪಿಯಾನ್‌ನ ನೌಪೋರಾ ಬಾಸ್ಕುಚಾನ್‌ನ ನಸೀರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ಜಂಟಿ ಶೋಧ ತಂಡವು ಶಂಕಿತ ಸ್ಥಳವನ್ನು ಸಮೀಪಿಸುತ್ತಿದ್ದಂತೆ, ಅಡಗಿಕೊಂಡಿದ್ದ ಉಗ್ರ ಜಂಟಿ ಶೋಧ ತಂಡದ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದು, ಇದರ ಪರಿಣಾಮವಾಗಿ ಎನ್‌ಕೌಂಟರ್‌ ನಡೆಸಲಾಯಿತು.

ಇದನ್ನೂ ಓದಿ: Terrorist Encounter: ಜಮ್ಮು ಕಾಶ್ಮೀರದಲ್ಲಿ ಜೈಷ್ ಸಂಘಟನೆಯ ಮೂವರು ಉಗ್ರರ ಎನ್​ಕೌಂಟರ್

ಎನ್‌ಕೌಂಟರ್ ನಡೆದ ಸ್ಥಳದಿಂದ ಪೊಲೀಸರು ಒಂದು ಎಕೆ 47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಪ್ರಕಾರ, ವಶಪಡಿಸಿಕೊಂಡ ಎಲ್ಲಾ ವಸ್ತುಗಳನ್ನು ಹೆಚ್ಚಿನ ತನಿಖೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕೇಸ್ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್