Terrorists Encounter: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಇಬ್ಬರು ಎಲ್ಇಟಿ ಉಗ್ರರ ಎನ್‌ಕೌಂಟರ್
ಉಗ್ರರು ಮಸೀದಿಯ ಕಟ್ಟಡದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದರಿಂದ ಭದ್ರತಾ ಪಡೆಯ ಸಿಬ್ಬಂದಿ ಹಾಗೂ ಪೊಲೀಸರು ಆ ಸ್ಥಳಕ್ಕೆ ತೆರಳಿದ್ದರು.
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ (Pulwama) ಜಿಲ್ಲೆಯ ನೈನಾ ಬಟ್ಪೋರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಇಬ್ಬರೂ ಭಯೋತ್ಪಾದಕ ಸಂಘಟನೆ ಎಲ್ಇಟಿ (ಲಷ್ಕರ್-ಎ-ತೊಯ್ಬಾ)ಯವರಾಗಿದ್ದರು ಎಂದು ತಿಳಿಸಲಾಗಿದೆ. ಇನ್ನೂ ಉಳಿದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಸೇನಾಪಡೆಯವರು ಮೃತ ಉಗ್ರರಿ ಬಳಿಯಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ಮಸೀದಿಯ ಕಟ್ಟಡದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದರಿಂದ ಭದ್ರತಾ ಪಡೆಯ ಸಿಬ್ಬಂದಿ ಹಾಗೂ ಪೊಲೀಸರು ಆ ಸ್ಥಳಕ್ಕೆ ತೆರಳಿದ್ದರು. ಮಸೀದಿಗೆ ಯಾವುದೇ ಹಾನಿಯಾಗದಂತೆ ನಾವು ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಇಂದು ಬೆಳಗ್ಗೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಉಗ್ರರಿದ್ದ ಪ್ರದೇಶವನ್ನು ಸುತ್ತುವರೆದಿತ್ತು. ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಭಯೋತ್ಪಾದಕರು ಅಡಗಿರುವ ಸ್ಥಳದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಇದರಿಂದ ಉಗ್ರರ ಮೇಲೆ ಎನ್‌ಕೌಂಟರ್ ನಡೆಸಲಾಯಿತು.
ಇದನ್ನೂ ಓದಿ: Terrorists Encounter: ಜಮ್ಮು ಕಾಶ್ಮೀರದ ಶೋಪಿಯಾನ್ನಲ್ಲಿ ಎನ್‌ಕೌಂಟರ್; ಇಬ್ಬರು ಎಲ್ಇಟಿ ಉಗ್ರರ ಹತ್ಯೆ
ಶ್ರೀನಗರದಲ್ಲಿ ಪೊಲೀಸರಿಂದ ಎನ್‌ಕೌಂಟರ್: ಕಾನ್ಸ್‌ಟೇಬಲ್ ಹತ್ಯೆ ಮಾಡಿದ್ದ ಉಗ್ರ ಸಾವು