AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorists Encounter: ಜಮ್ಮು ಕಾಶ್ಮೀರದಲ್ಲಿ ಮಾಜಿ ಪತ್ರಕರ್ತ ಸೇರಿ ಇಬ್ಬರು ಉಗ್ರರ ಎನ್​ಕೌಂಟರ್

ಎನ್​ಕೌಂಟರ್​​ನಲ್ಲಿ ಹತ್ಯೆಗೀಡಾದ ಭಯೋತ್ಪಾದಕ ರಯೀಸ್ ಅಹ್ ಭಟ್ ಅನಂತನಾಗ್ ಜಿಲ್ಲೆಯಲ್ಲಿ ಆನ್‌ಲೈನ್ ನ್ಯೂಸ್ ಪೋರ್ಟಲ್ 'ವ್ಯಾಲಿ ನ್ಯೂಸ್ ಸರ್ವೀಸ್' ಅನ್ನು ನಡೆಸುತ್ತಿದ್ದ.

Terrorists Encounter: ಜಮ್ಮು ಕಾಶ್ಮೀರದಲ್ಲಿ ಮಾಜಿ ಪತ್ರಕರ್ತ ಸೇರಿ ಇಬ್ಬರು ಉಗ್ರರ ಎನ್​ಕೌಂಟರ್
ಎನ್​ಕೌಂಟರ್ ಆದ ಪತ್ರಕರ್ತ
TV9 Web
| Edited By: |

Updated on:Mar 30, 2022 | 2:26 PM

Share

ನವದೆಹಲಿ: ಜಮ್ಮು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ (Encounter) ಮಾಜಿ ಪತ್ರಕರ್ತ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಎನ್​ಕೌಂಟರ್​​ನಲ್ಲಿ ಹತ್ಯೆಗೀಡಾದ ಭಯೋತ್ಪಾದಕ ರಯೀಸ್ ಅಹ್ ಭಟ್ ಅನಂತನಾಗ್ ಜಿಲ್ಲೆಯಲ್ಲಿ ಆನ್‌ಲೈನ್ ನ್ಯೂಸ್ ಪೋರ್ಟಲ್ ‘ವ್ಯಾಲಿ ನ್ಯೂಸ್ ಸರ್ವೀಸ್’ ಅನ್ನು ನಡೆಸುತ್ತಿದ್ದ. ರಯೀಸ್ ಅಹ್ ಭಟ್ ಕಳೆದ ವರ್ಷ ಆಗಸ್ಟ್‌ನಲ್ಲಿ ಭಯೋತ್ಪಾದಕ ಶ್ರೇಣಿಗೆ ಸೇರಿದ್ದ. ಆತನನ್ನು ಜಮ್ಮು ಕಾಶ್ಮೀರದ (Jammu Kashmir) ಪೊಲೀಸರ ಪಟ್ಟಿಯಲ್ಲಿ ‘ಸಿ’ ಎಂದು ವರ್ಗೀಕರಿಸಲಾಯಿತು. ಉಗ್ರವಾದಿ ಕೃತ್ಯಗಳಿಗೆ ಸಂಬಂಧಿಸಿದ ಅಪರಾಧಗಳಿಗಾಗಿ ಆತನ ವಿರುದ್ಧ ಈಗಾಗಲೇ ಎರಡು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದ ಎರಡನೇ ಭಯೋತ್ಪಾದಕನನ್ನು ಅನಂತನಾಗ್ ಜಿಲ್ಲೆಯ ಬಿಜ್ಬೆಹರಾ ನಿವಾಸಿ ಹಿಲಾಲ್ ಅಹ್ ರಾಹ್ ಎಂದು ಗುರುತಿಸಲಾಗಿದೆ. ಈತ ಸಿ ಕೆಟಗರಿ ಭಯೋತ್ಪಾದಕ ಎಂದು ಪೊಲೀಸರು ತಿಳಿಸಿದ್ದಾರೆ. ರಯೀಸ್ 2021ರ ಆಗಸ್ಟ್ 8ರಂದು ನಾಪತ್ತೆಯಾಗಿದ್ದ ಎಂದು ಹೇಳಲಾಗುತ್ತಿದ್ದರೆ, ಹಿಲಾಲ್ ಅಹ್ ರಾಹ್ ಅದಾಗಿ 2 ತಿಂಗಳ ನಂತರ ಅಂದರೆ ಅಕ್ಟೋಬರ್ 18ರಂದು ಕಾಣೆಯಾಗಿದ್ದರು.

ಆ ಇಬ್ಬರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ವರ್ಷ ಪೊಲೀಸರು ನೀಡಿದ ಅಂಕಿ-ಅಂಶಗಳ ಪ್ರಕಾರ, ಭಾರತೀಯ ಭದ್ರತಾ ಪಡೆಗಳು ಇದುವರೆಗೆ 30 ವಿವಿಧ ಎನ್‌ಕೌಂಟರ್‌ಗಳಲ್ಲಿ 40ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದಿವೆ ಎಂಬುದು ಗಮನಾರ್ಹ. ಹಾಗೇ, 26 ಸಕ್ರಿಯ ಭಯೋತ್ಪಾದಕರು ಮತ್ತು 150 ಭಯೋತ್ಪಾದಕರ ಸಹಚರರನ್ನು ಸಹ ಬಂಧಿಸಲಾಗಿದೆ.

ಇದನ್ನೂ ಓದಿ: 60 ಪ್ರಕರಣಗಳ ಆರೋಪಿಯನ್ನು ಎನ್​ಕೌಂಟರ್​​ನಲ್ಲಿ ಕೊಂದ ತಮಿಳುನಾಡು ಪೊಲೀಸರು; ತನಿಖೆ ಪ್ರಾರಂಭ

ವಿಶೇಷ ಸ್ಥಾನಮಾನ ರದ್ದಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ ಮಾಡಿದವರು ಎಷ್ಟು ಮಂದಿ?-ಇಲ್ಲಿದೆ ನೋಡಿ ಕೇಂದ್ರ ನೀಡಿದ ಮಾಹಿತಿ

Published On - 1:58 pm, Wed, 30 March 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ