AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರಗಾಮಿಗಳ ಗುಂಡಿಗೆ ಶ್ರೀನಗರದ ಪೊಲೀಸ್ ಸಿಬ್ಬಂದಿ ಹುತಾತ್ಮ

ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಕಾನ್​ಸ್ಟೆಬಲ್ ಮೇಲೆ ಅವರ ಮನೆಯ ಹತ್ತಿರವೇ ರಾತ್ರಿ 8 ಗಂಟೆಗೆ ಉಗ್ರರು ಗುಂಡು ಹಾರಿಸಿದ್ದಾರೆ

ಉಗ್ರಗಾಮಿಗಳ ಗುಂಡಿಗೆ ಶ್ರೀನಗರದ ಪೊಲೀಸ್ ಸಿಬ್ಬಂದಿ ಹುತಾತ್ಮ
ಶ್ರೀನಗರದಲ್ಲಿ ಭದ್ರತಾ ಸಿಬ್ಬಂದಿ ಗಸ್ತು (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 07, 2021 | 10:21 PM

Share

ದೆಹಲಿ: ಉಗ್ರಗಾಮಿಗಳ ಗುಂಡಿಗೆ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯೊಬ್ಬರು ಭಾನುವಾರ ಹುತಾತ್ಮರಾಗಿದ್ದಾರೆ. ಶ್ರೀನಗರದ ಬಾಟ್​ಮಲೂ ಪ್ರದೇಶದಲ್ಲಿ ಪೊಲೀಸ್​ ಸಿಬ್ಬಂದಿಯನ್ನು ಭಯೋತ್ಪಾದಕರು ಬೆನ್ನಟ್ಟಿ ಕೊಂದಿದ್ದಾರೆ. ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಕಾನ್​ಸ್ಟೆಬಲ್ ತೌಸೀಫ್ ಅಹಮದ್ ಅವರ ಮೇಲೆ ಅವರ ಮನೆಯ ಹತ್ತಿರವೇ ರಾತ್ರಿ 8 ಗಂಟೆಗೆ ಉಗ್ರರು ಗುಂಡು ಹಾರಿಸಿದ್ದಾರೆ ಎಂದು ಪಿಟಿಐ ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿ ಮಾಡಿದೆ.

ತೀವ್ರವಾಗಿ ಗಾಯಗೊಂಡ ಕಾನ್​ಸ್ಟೆಬಲ್​ ತೌಸೀಫ್ ಅವರನ್ನು ತಕ್ಷಣವೇ ಎಸ್​ಎಂಎಚ್​ಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು. ಈ ಪ್ರದೇಶದಲ್ಲಿ ಸಂಪೂರ್ಣವಾಗಿ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಭಯೋತ್ಪಾದಕನ್ನು ಪತ್ತೆಹಚ್ಚಲು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಭದ್ರತಾ ಪಡೆ- ಉಗ್ರರ ನಡುವೆ ಗುಂಡಿನ ಚಕಮಕಿ ಜಮ್ಮು ಕಾಶ್ಮೀರದ ಶ್ರೀನಗರದ ಆಸ್ಪತ್ರೆಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಕೆಲ ಕಾಲ ಗುಂಡಿನ ಚಕಮಕಿ ನಡೆಯಿತು. ನಂತರ ಭದ್ರತಾ ಸಿಬ್ಬಂದಿ ಆಸ್ಪತ್ರೆಯನ್ನು ಸುತ್ತುವರೆದಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಈ ಪ್ರದೇಶದಲ್ಲಿದ್ದ ನಾಗರಿಕರ ನಡುವೆ ನುಸುಳಿಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿರುವ ಆಸ್ಪತ್ರೆಯಲ್ಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿವೆ. ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ನಗರದ ಬೆಮಿನಾ ಪ್ರದೇಶದ ಎಸ್​ಕೆಐಎಂಎಸ್ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಮಿನಾದ SKIMS ಆಸ್ಪತ್ರೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ಆ ಆಸ್ಪತ್ರೆಯ ಸುತ್ತ ಸೇರಿದ್ದ ಜನಸಂದಣಿಯ ಲಾಭವನ್ನು ಪಡೆದುಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ರೀನಗರ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕರಾವಳಿ, ಮಲೆನಾಡಿನಲ್ಲಿ ಮತ್ತೆ ರಿಂಗಣಿಸಿದ ಸ್ಯಾಟಲೈಟ್ ಫೋನ್, ಕರುನಾಡಿಗೆ ಎದುರಾಗಿದ್ಯಾ ಉಗ್ರಗಾಮಿಗಳ ಆತಂಕ? ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ: ವಿದೇಶಾಂಗ ವ್ಯವಹಾರಗಳ ಇಲಾಖೆ ಆತಂಕ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?