ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿಯನ್ನು ಅಪಹರಿಸಿ ಉಗ್ರರಿಂದ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಗ್ರರು ಇಬ್ಬರು ವಿಲೇಜ್ ಡಿಫೆನ್ಸ್ ಗ್ರೂಪ್ (ವಿಡಿಜಿ) ಸದಸ್ಯರನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ. ಜೈಶ್-ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಮೃತರನ್ನು ಓಹ್ಲಿ ಕುಂಟ್ವಾರ ಗ್ರಾಮದ ನಿವಾಸಿಗಳಾದ ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ.

ಮೃತದೇಹಗಳ ಪತ್ತೆಗೆ ಪೊಲೀಸರು ಭಾರೀ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ನಜೀರ್ ಮತ್ತು ಕುಲದೀಪ್ ಇಬ್ಬರೂ ತಮ್ಮ ಜಾನುವಾರುಗಳನ್ನು ಮೇಯಿಸಲು ಕಾಡಿನಲ್ಲಿ ಹೋದಾಗ ಭಯೋತ್ಪಾದಕರು ಅಪಹರಿಸಿದ್ದಾರೆ. ನನ್ನ ಸಹೋದರ ಮತ್ತು ಅಹ್ಮದ್ ಅವರನ್ನು ಭಯೋತ್ಪಾದಕರು ಅಪಹರಿಸಿ ಕೊಂದಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ ಎಂದರು.
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಹತ್ಯೆಗಳನ್ನು ಖಂಡಿಸಿದ್ದಾರೆ. ಇಂತಹ ಬರ್ಬರ ಹಿಂಸಾಚಾರದ ಕೃತ್ಯಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ದೀರ್ಘಕಾಲೀನ ಶಾಂತಿಯನ್ನು ಸಾಧಿಸುವಲ್ಲಿ ಗಮನಾರ್ಹ ಅಡಚಣೆಯಾಗಿವೆ ಎಂದು ಬರೆದಿದ್ದಾರೆ.
ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುರುವಾರ ಬಾರಾಮುಲ್ಲಾ ಮತ್ತು ಸೋಪೋರ್ ಜಿಲ್ಲೆಗಳಲ್ಲಿ ಎನ್‌ಕೌಂಟರ್ ಕೂಡ ಸಂಭವಿಸಿದೆ.
ಮತ್ತಷ್ಟು ಓದಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಇಬ್ಬರು ಯೋಧರ ಅಪಹರಣ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಿಂದ ಎಕೆ ರೈಫಲ್, ಎರಡು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ನಾಲ್ಕು ಎಕೆ ರೈಫಲ್ ಮ್ಯಾಗಜೀನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉತ್ತರ ಕಾಶ್ಮೀರ ಜಿಲ್ಲೆಯ ಲೋಲಾಬ್‌ನ ಮಾರ್ಗಿ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬುಧವಾರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ನಂತರ ಶೋಧ ಕಾರ್ಯಾಚರಣೆ ಎನ್‌ಕೌಂಟರ್ ಗೆ ತಿರುಗಿತು ಎಂದು ಅವರು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ