Srinagar terror attack ಶ್ರೀನಗರದ ಹೊರವಲಯದಲ್ಲಿ ಪೊಲೀಸ್ ಬಸ್ ಮೇಲೆ ಉಗ್ರರ ಗುಂಡಿನ ದಾಳಿ; 2 ಪೊಲೀಸರು ಸಾವು, 12 ಮಂದಿಗೆ ಗಾಯ

ಶ್ರೀನಗರದ ಹೊರವಲಯದಲ್ಲಿರುವ ಪಂಥಾ ಚೌಕ್ ಪ್ರದೇಶದ ಜೆವಾನ್ ಬಳಿ ಅವರು ಪ್ರಯಾಣಿಸುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಮೃತಪಟ್ಟವರಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ಸೆಲೆಕ್ಷನ್ ಗ್ರೇಡ್ ಕಾನ್‌ಸ್ಟೆಬಲ್ ಸೇರಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

Srinagar terror attack ಶ್ರೀನಗರದ ಹೊರವಲಯದಲ್ಲಿ ಪೊಲೀಸ್ ಬಸ್ ಮೇಲೆ ಉಗ್ರರ ಗುಂಡಿನ ದಾಳಿ; 2 ಪೊಲೀಸರು ಸಾವು, 12 ಮಂದಿಗೆ ಗಾಯ
ಶ್ರೀನಗರದಲ್ಲಿ ಉಗ್ರರ ದಾಳಿ
Edited By:

Updated on: Dec 13, 2021 | 8:21 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಜಧಾನಿ  ಶ್ರೀನಗರ ಬಳಿ ಸೋಮವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದು 12 ಮಂದಿ ಗಾಯಗೊಂಡಿದ್ದಾರೆ. ನಗರದ ಹೊರವಲಯದಲ್ಲಿರುವ ಪಂಥಾ ಚೌಕ್(Pantha Chowk) ಪ್ರದೇಶದ ಜೆವಾನ್ (Zewan)ಬಳಿ ಅವರು ಪ್ರಯಾಣಿಸುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಮೃತಪಟ್ಟವರಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ಸೆಲೆಕ್ಷನ್ ಗ್ರೇಡ್ ಕಾನ್‌ಸ್ಟೆಬಲ್ ಸೇರಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಗಾಯಗೊಂಡಿರುವ ಇತರ ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರದೇಶವನ್ನು ಸುತ್ತುವರಿಯಲಾಗಿದೆ ಮತ್ತು ದಾಳಿಕೋರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾನೆ, ಶ್ರೀನಗರದ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಶ್ರೀನಗರದ ರಂಗ್ರೆತ್​​ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು (Terrorists) ಭದ್ರತಾ ಪಡೆ ಸಿಬ್ಬಂದಿ ಹತ್ಯೆ ಮಾಡಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಆದರೆ ಅವರು ಯಾರೆಂಬುದು ಇನ್ನೂ ಗುರುತು ಪತ್ತೆಯಾಗಿಲ್ಲ ಎಂದು ಕಾಶ್ಮೀರಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ನಿನ್ನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಜೈಷ್ ಇ ಮೊಹಮ್ಮದ್ ಸಂಘಟನೆಯ ಸ್ಥಳೀಯ ಉಗ್ರನೊಬ್ಬನನ್ನು ಕೊಂದಿದ್ದರು. ಭಾರತೀಯ ಸೇನೆಯ 42ನೇ ರಾಷ್ಟ್ರೀಯ ರೈಫಲ್​ ಮತ್ತು ಕೇಂದ್ರೀಯ ಮೀಸಲು ಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದರು. ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಿ, ಜೈಷ್​ ಇ ಮೊಹಮ್ಮದ್​ ಸಂಘಟನೆಯ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಮೊದಲು ಉಗ್ರನನ್ನು ವಶಕ್ಕೆ ಪಡೆಯಲಾಯಿತು. ಆದರೆ ಆತ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಯತ್ನಿಸಿದಾಗ ಅವನನ್ನು ಕೊಲ್ಲಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಇಂದು ಶ್ರೀನಗರದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ; ಮುಂದುವರಿದ ಕಾರ್ಯಾಚರಣೆ

Published On - 8:17 pm, Mon, 13 December 21