ಅನ್​ಲಾಕ್ ಬಳಿಕ ಜನರಲ್ಲಿ ಬೇಜವಾಬ್ದಾರಿತನ ಹೆಚ್ಚಾಗಿದೆ; ಸಿಎಂಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆತಂಕ

PM Modi Meeting with Chief Ministers: ಕೋವಿಡ್ ಪರೀಕ್ಷೆ, ಪತ್ತೆ ಹಚ್ಚುವುದು, ಚಿಕಿತ್ಸೆ, ಲಸಿಕೆಯನ್ನು ನೀಡುವ ಮೂಲಕ ಕೋವಿಡ್ ಹರಡುವಿಕೆಯ ಪ್ರಮಾಣವನ್ನು ನಿಯಂತ್ರಣ ಮಾಡಲು ಸಾಧ್ಯವಿದೆ ಎಂದು ಮೋದಿ ಹೇಳಿದ್ದಾರೆ.

ಅನ್​ಲಾಕ್ ಬಳಿಕ ಜನರಲ್ಲಿ ಬೇಜವಾಬ್ದಾರಿತನ ಹೆಚ್ಚಾಗಿದೆ; ಸಿಎಂಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆತಂಕ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಆಯಾ ರಾಜ್ಯಗಳ ಕೊರೋನಾ ಪರಿಸ್ಥಿತಿ, ಕೋವಿಡ್ ಲಸಿಕೆ ಹಂಚಿಕೆ ಹಾಗೂ ಕೊರೋನಾ ರೂಪಾಂತರಿ ವೈರಸ್​ಗಳ ನಿಯಂತ್ರಣದ ಕುರಿತಂತೆ ಇಂದು ಕರ್ನಾಟಕದ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಸೇರಿದಂತೆ ಒಟ್ಟು ಆರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆದಿದ್ದು, ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಒಡಿಶಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮೋದಿ (Prime Minister Narendra Modi) ಸಭೆಯಲ್ಲಿ ಭಾಗಿಯಾಗಿದ್ದು, ತಮ್ಮ ರಾಜ್ಯದಲ್ಲಿನ ಕೋವಿಡ್​ ಪರಿಸ್ಥಿತಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

6 ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಮುಕ್ತಾಯವಾಗಿದ್ದು, ಕೊರೊನಾ ಲಸಿಕೆ, ಮೂರನೇ ಅಲೆ ಮುನ್ನೆಚ್ಚರಿಕೆ ಬಗ್ಗೆ ಚರ್ಚೆ ನಡೆಸಲಾಗಿದೆ. ಈಗಲೇ ಪರಿಸ್ಥಿತಿ ನಿಭಾಯಿಸದಿದ್ದರೆ ಮುಂದೆ ಕಷ್ಟವಾಗುತ್ತದೆ. ಮಕ್ಕಳನ್ನು ಕೊವಿಡ್‌ನಿಂದ ರಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳಿ. ಅನ್‌ಲಾಕ್‌ ಬಳಿಕದ ಪರಿಸ್ಥಿತಿ ಆತಂಕ ಮೂಡಿಸುತ್ತಿದೆ. ಅನ್‌ಲಾಕ್‌ ಬಳಿಕ ಬೇಜವಾಬ್ದಾರಿತನ ಹೆಚ್ಚುತ್ತಿದೆ. ಅಮೆರಿಕ, ಯುರೋಪ್, ಪಾಶ್ಚಿಮಾತ್ಯ ದೇಶಗಳಲ್ಲಿ ಕೊರೋನಾ ಮತ್ತೆ ಹೆಚ್ಚುತ್ತಿದೆ. ಆ ದೇಶಗಳಲ್ಲಿ ಕೊರೊನಾ ಪ್ರಕರಣ ವೇಗವಾಗಿ ಹರಡುತ್ತಿದೆ. ಕೊರೊನಾ ಸೋಂಕು ನಮ್ಮಿಂದ ದೂರ ಹೋಗಿಲ್ಲ. ಹೀಗಾಗಿ, ಇನ್ನೂ ಹೆಚ್ಚಿನ ಎಚ್ಚರ ಅಗತ್ಯ ಎಂದು 6 ರಾಜ್ಯಗಳ ಸಿಎಂಗಳ ಜತೆ ಸಭೆಯಲ್ಲಿ ಪ್ರಧಾನಿ ಸೂಚನೆ ನೀಡಿದ್ದಾರೆ.

ಕೋವಿಡ್ ಹೆಚ್ಚುತ್ತಿರುವ ಕಡೆ ತಕ್ಷಣ ಕ್ರಮ ತೆಗೆದುಕೊಳ್ಳಿ. ಮೈಕ್ರೋ ಕಂಟೇನ್‌ಮೆಂಟ್‌ ಜೋನ್‌ಗಳ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಕೊವಿಡ್ ನಿಯಂತ್ರಣಕ್ಕೆ ಪ್ರಧಾನಿ ಮೋದಿಯಿಂದ 4T ಸೂತ್ರ ನೀಡಲಾಗಿದ್ದು, ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್‌ಮೆಂಟ್, ಟೀಕಾ ಈ ಸೂತ್ರಗಳನ್ನು ಅಳವಡಿಸಿಕೊಳ್ಳಲು ಸೂಚಿಸಲಾಗಿದೆ. ಕೋವಿಡ್ ಪರೀಕ್ಷೆ, ಪತ್ತೆ ಹಚ್ಚುವುದು, ಚಿಕಿತ್ಸೆ, ಲಸಿಕೆಯನ್ನು ನೀಡುವ ಮೂಲಕ ಕೋವಿಡ್ ಹರಡುವಿಕೆಯ ಪ್ರಮಾಣವನ್ನು ನಿಯಂತ್ರಣ ಮಾಡಲು ಸಾಧ್ಯವಿದೆ ಎಂದು ಮೋದಿ ಹೇಳಿದ್ದಾರೆ.

ಇನ್ನು, ಕರ್ನಾಟಕದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆಯ ಕುರಿತು ಚರ್ಚೆ ನಡೆಸಲು ತಮ್ಮ ಬೆಂಬಲಿಗರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ ಯಡಿಯೂರಪ್ಪ ಅವರು ರಾಷ್ಟ್ರ ರಾಜಧಾನಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದ್ದು. ಭೇಟಿ ವೇಳೆ ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಶಾಸಕ ಮುನಿರತ್ನ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತು ಪ್ರಧಾನಮಂತ್ರಿಗಳೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ತಮ್ಮ ಮಕ್ಕಳಾದ ಬಿ.ವೈ. ವಿಜಯೇಂದ್ರ, ಬಿ.ವೈ ರಾಘವೇಂದ್ರ ಸೇರಿದಂತೆ ಇನ್ನಿತರ ಆಪ್ತರ ಜೊತೆ ಸಿಎಂ ಯಡಿಯೂರಪ್ಪ ದೆಹಲಿಗೆ ವಿಮಾನದ ಮೂಲಕ ತೆರಳಲಿದ್ದಾರೆ. ಪ್ರಧಾನಮಂತ್ರಿ ಮೋದಿಯವರನ್ನು ಭೇಟಿಯಾದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಸಿಎಂ ಯಡಿಯೂರಪ್ಪ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: PM Modi Varanasi Visit: ಕಾಶಿ ಮೆಡಿಕಲ್​ ಹಬ್​ ಆಗಿ ಬದಲಾಗುತ್ತಿದೆ..ಯೋಗಿ ಜೀ ಅವರಿಂದ ಉತ್ತರಪ್ರದೇಶ ಅಭಿವೃದ್ಧಿಯಾಗುತ್ತಿದೆ: ಪ್ರಧಾನಿ ಮೋದಿ

ಇದನ್ನೂ ಓದಿ: ಹೆಚ್​​ಎಲ್​ಆರ್​ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1 ಗಂಟೆಗೆ ದೆಹಲಿ ಕಡೆಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಪ್ರಯಾಣ

(Test -Track -Treat and Vaccinate Prime Minister Narendra Modi Suggests 6 States Chief Ministers in Meeting)