AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ದಳಪತಿ ಕಿಂಗ್ ಮೇಕರ್ ಅಲ್ಲ, ಕಿಂಗ್; ತಮಿಳುನಾಡಿಗೆ ವಿಜಯ್ ಮುಂದಿನ ಸಿಎಂ?

Tamil Nadu assembly election results 2026: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದ ಖ್ಯಾತ ನಟ 'ದಳಪತಿ' ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಅಭೂತಪೂರ್ವ ಮುನ್ನಡೆ ಸಾಧಿಸುವ ಮೂಲಕ ಇಡೀ ದೇಶದ ಗಮನ ಸೆಳೆದಿದೆ. ದಶಕಗಳಿಂದ ರಾಜ್ಯವನ್ನಾಳುತ್ತಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಶಾಕ್ ನೀಡಿರುವ ವಿಜಯ್, ಮೊದಲ ಪ್ರಯತ್ನದಲ್ಲೇ 'ಕಿಂಗ್ ಮೇಕರ್' ಬದಲು ನೇರವಾಗಿ 'ಕಿಂಗ್' ಆಗುವತ್ತ ಹೆಜ್ಜೆ ಹಾಕಿದ್ದಾರೆ.

Tamil Nadu: ದಳಪತಿ ಕಿಂಗ್ ಮೇಕರ್ ಅಲ್ಲ, ಕಿಂಗ್; ತಮಿಳುನಾಡಿಗೆ ವಿಜಯ್ ಮುಂದಿನ ಸಿಎಂ?
ದಳಪತಿ ವಿಜಯ್Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 04, 2026 | 12:17 PM

Share

ಚೆನ್ನೈ, ಮೇ 4: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu assembly elections) ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ನಿರೀಕ್ಷೆ ಮೀರಿದ ಅಚ್ಚರಿ ಗೆಲುವು ದಾಖಲಿಸಿದೆ. 234 ವಿಧಾನಸಭಾ ಕ್ಷೇತ್ರಗಳ ಪೈಕಿ ವಿಜಯ್ ಅವರ TVK ಪಕ್ಷವು ಅಚ್ಚರಿಯ ರೀತಿಯಲ್ಲಿ ಮುನ್ನಡೆ ಸಾಧಿಸಿದೆ. ಪ್ರಸ್ತುತ ಟ್ರೆಂಡ್‌ಗಳ ಪ್ರಕಾರ, ವಿಜಯ್ ಅವರ ಪಕ್ಷವು ಬಹುಮತಕ್ಕೆ ಬೇಕಾದ 118 ಸ್ಥಾನಗಳ ಗಡಿ ದಾಟುತ್ತಿದೆ. ಇದು ತಮಿಳುನಾಡು ರಾಜಕಾರಣದಲ್ಲಿ ಹೊಸ ಯುಗದ ಆರಂಭ ಎಂದೇ ವಿಶ್ಲೇಷಿಸಲಾಗುತ್ತಿದೆ. ಆಡಳಿತಾರೂಢ ಡಿಎಂಕೆ ಪಕ್ಷ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಎಐಎಡಿಎಂಕೆ ನೇತೃತ್ವದ ಎನ್​ಡಿಎ ಮೈತ್ರಿಕೂಟ ಎರಡನೇ ಸ್ಥಾನ ಪಡೆಯುತ್ತಿದೆ. ಕಾಲಿವುಡ್​ನ ಸೂಪರ್ ಸ್ಟಾರ್ ದಳಪತಿ ವಿಜಯ್ ಅವರು ಮುಖ್ಯಮಂತ್ರಿ ಆಗುವ ಸಾಧ್ಯತೆ ದಟ್ಟವಾಗಿದೆ.

ತಾವೇ ಸ್ಪರ್ಧಿಸಿದ್ದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚ್ಚಿ ಈಸ್ಟ್ ಎರಡರಲ್ಲೂ ವಿಜಯ್ ಭಾರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಮೈತ್ರಿಕೂಟವು ತೀವ್ರ ಹಿನ್ನಡೆ ಅನುಭವಿಸಿದ್ದು, ಅನಿರೀಕ್ಷಿತವಾಗಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಮೈತ್ರಿಕೂಟವು ಸದ್ಯಕ್ಕೆ ಎರಡನೇ ಅತಿದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ. ಡಿಎಂಕೆ ಸರ್ಕಾರದ ಸುಮಾರು 31 ಸಚಿವರು ತಮ್ಮ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿರುವುದು ಆಡಳಿತ ವಿರೋಧಿ ಅಲೆಯ ತೀವ್ರತೆಯನ್ನು ತೋರಿಸುತ್ತಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಅಧಿಕಾರ ಸ್ಥಾಪನೆಯತ್ತ ಬಿಜೆಪಿ; ನಿಚ್ಚಳ ಬಹುಮತ ಬಹುತೇಕ ನಿಶ್ಚಿತ

ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶ (ಮಧ್ಯಾಹ್ನ 12ರ ಟ್ರೆಂಡ್)

ಒಟ್ಟು ಸ್ಥಾನಗಳು: 234

ಬಹುಮತಕ್ಕೆ ಬೇಕಾಗಿರುವುದು: 118

  • ತಮಿಳಗ ವೆಟ್ರಿ ಕಳಗಂ (ಟಿವಿಕೆ): 112
  • ಎಐಎಡಿಎಂಕೆ ಮೈತ್ರಿಕೂಟ: 68
  • ಡಿಎಂಕೆ ಮೈತ್ರಿಕೂಟ: 56

ಕಿಂಗ್ ಮೇಕರ್ ಅಲ್ಲ, ನೇರ ಕಿಂಗ್!

ಚುನಾವಣಾ ಪೂರ್ವದಲ್ಲಿ ವಿಜಯ್ ಅವರ ಪಕ್ಷವು ಕೇವಲ ‘ಕಿಂಗ್ ಮೇಕರ್’ ಆಗಬಹುದು ಎಂದು ಊಹಿಸಲಾಗಿತ್ತು. ಆದರೆ, ಈಗಿನ ಟ್ರೆಂಡ್‌ಗಳು ವಿಜಯ್ ಅವರೇ ನೇರವಾಗಿ ಮುಖ್ಯಮಂತ್ರಿ ಪೀಠ ಅಲಂಕರಿಸುವುದನ್ನು ಖಚಿತಪಡಿಸುತ್ತಿವೆ. ವಿಜಯ್ ಅವರ ಅಪಾರ ಅಭಿಮಾನಿ ಬಳಗ ಮತ್ತು ಯುವ ಮತದಾರರು ಬದಲಾವಣೆಯನ್ನು ಬಯಸಿ ದೊಡ್ಡ ಮಟ್ಟದಲ್ಲಿ ಮತ ಚಲಾಯಿಸಿದ್ದಾರೆ. ಡಿಎಂಕೆ ಮತ್ತು ಎಐಎಡಿಎಂಕೆ ಎರಡನ್ನೂ ‘ಭ್ರಷ್ಟ ಶಕ್ತಿಗಳು’ ಎಂದು ಕರೆದಿದ್ದ ವಿಜಯ್ ಅವರ ಮಾತುಗಳು ಜನಸಾಮಾನ್ಯರಿಗೆ ತಲುಪಿದೆ. ಯಾವುದೇ ದೊಡ್ಡ ಮೈತ್ರಿಕೂಟದ ಜೊತೆ ಸೇರದೆ ಒಂಟಿಯಾಗಿ ಸ್ಪರ್ಧಿಸುವ ವಿಜಯ್ ಅವರ ನಿರ್ಧಾರಕ್ಕೆ ಮತದಾರರು ಜೈ ಎಂದಿದ್ದಾರೆ.

ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾವಣೆ

ಎಂ.ಜಿ.ಆರ್ ಮತ್ತು ಜಯಲಲಿತಾ ಅವರ ನಂತರ ಸಿನಿಮಾ ರಂಗದಿಂದ ಬಂದು ಇಷ್ಟು ದೊಡ್ಡ ಮಟ್ಟದ ಯಶಸ್ಸು ಕಂಡ ನಟ ಎಂಬ ಹೆಗ್ಗಳಿಕೆಗೆ ವಿಜಯ್ ಪಾತ್ರರಾಗಿದ್ದಾರೆ. ಹಿರಿಯ ಸ್ಟಾರ್ ಹಾಗೂ ಜನಪ್ರಿಯ ನಟನೆನಿಸಿದ ಕಮಲಹಾಸನ್ ಅವರು ಕೆಲವಾರು ವರ್ಷಗಳಿಂದ ರಾಜಕೀಯ ಮಾಡುತ್ತಿದ್ದಾರಾದರೂ ಅವರಿಗೆ ಸಿಕ್ಕ ಯಶಸ್ಸು ಸೀಮಿತ. ಕ್ಯಾಪ್ಟನ್ ವಿಜಯಕಾಂತ್ ಅವರಿಗೂ ಸಿಕ್ಕ ಯಶಸ್ಸು ಅಷ್ಟಕಷ್ಟೇ. ಸೂಪರ್ ಸ್ಟಾರ್ ರಜನೀಕಾಂತ್ ಅವರೂ ರಾಜಕೀಯಕ್ಕೆ ಅಡಿ ಇಡುವ ಆಲೋಚನೆಯಲ್ಲಿ ಇದ್ದರಾದರೂ ಅದು ಸಾಧ್ಯವಾಗಲಿಲ್ಲ. ಹೀಗಾಗಿ, ದಳಪತಿ ವಿಜಯ್ ಅವರ ಆರಂಭದ ಹೆಜ್ಜೆಯಲ್ಲೇ ಸಿಕ್ಕ ಯಶಸ್ಸು ಸೋಜಿಗ.

ಇದನ್ನೂ ಓದಿ: ತ್ರಿಷಾ ಹುಟ್ಟುಹಬ್ಬದಂದೇ ವಿಜಯ್‌ಗೆ ರಾಜಕೀಯ ಪಟ್ಟ? ತಮಿಳುನಾಡಿನಲ್ಲಿ ‘ಟಿವಿಕೆ’ ಅಬ್ಬರ

ತಮಿಳುನಾಡಿನಲ್ಲಿ ಮುಂದಿನ ಐದು ವರ್ಷ ವಿಜಯ್ ಅವರ ಹವಾ ಜೋರಾಗಿರಲಿದೆ. ಡಿಎಂಕೆ ಕಚೇರಿಯಲ್ಲಿ ಹಾಕಲಾಗಿದ್ದ ವಿಜಯೋತ್ಸವದ ಟೆಂಟ್‌ಗಳನ್ನು ಕಾರ್ಯಕರ್ತರು ಹಿನ್ನಡೆಯ ಆತಂಕದಿಂದ ತೆರವುಗೊಳಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಸಂಜೆ ವೇಳೆಗೆ ಅಂತಿಮ ಫಲಿತಾಂಶ ಹೊರಬೀಳಲಿದ್ದು, ‘ದಳಪತಿ’ ತಮಿಳುನಾಡಿನ ಹೊಸ ‘ಸಿಎಂ’ ಆಗಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ನಿಶ್ಚಿತವಾಗಿದೆ.

ಟಿವಿಕೆ ಪಕ್ಷ ಸ್ವಂತವಾಗಿ 118 ಸ್ಥಾನಗಳನ್ನು ಮುಟ್ಟಿದರೆ ವಿಜಯ್ ಸಿಎಂ ಆಗುವುದರಲ್ಲಿ ಅನುಮಾನ ಇಲ್ಲ. ಬಹುಮತ ಕೊರತೆ ಬಂದರೂ ಎಐಎಡಿಎಂಕೆ ಬೆಂಬಲದೊಂದಿಗೆ ಅವರು ಸರ್ಕಾರ ರಚನೆ ಮಾಡಿ ಸಿಎಂ ಆಗುವ ಸಾಧ್ಯತೆ ಇದ್ದೇ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ