Thane: ವೇಗವಾಗಿ ಬಂದ ಆಟೋ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವು, ಮೂವರಿಗೆ ಗಾಯ

ಮಹಾರಾಷ್ಟ್ರದ ಥಾಣೆಯ ಭಿವಂಡಿಯಲ್ಲಿ ಆಟೋ ರಿಕ್ಷಾ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾರ್ಚ್ 8ರಂದು ಮಧ್ಯಾಹ್ನ ಸಂಭವಿಸಿದೆ ಎಂದು ಹೇಳಲಾಗಿದೆ.

Follow us
ಅಕ್ಷಯ್​ ಪಲ್ಲಮಜಲು​​
|

Updated on: Mar 09, 2024 | 10:11 AM

ಭಿವಂಡಿ: ವೇಗವಾಗಿ ಬಂದ ಆಟೋ ರಿಕ್ಷಾ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಈ ಘಟನೆ ಮಹಾರಾಷ್ಟ್ರದ ಥಾಣೆಯ ಭಿವಂಡಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾರ್ಚ್ 8ರಂದು ಮಧ್ಯಾಹ್ನ ಸಂಭವಿಸಿದೆ ಎಂದು ಹೇಳಲಾಗಿದೆ.

ಸಿಸಿಟಿವಿ ದೃಶ್ಯದಲ್ಲಿ ಮಧ್ಯಾಹ್ನದ ವೇಳೆ ವೇಗವಾಗಿ ಬಂದ ಆಟೋ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವುದನ್ನು ನೋಡಬಹುದು. ಇನ್ನು ಆಟೋ ಡಿವೈಡರ್‌ಗೆ ಡಿಕ್ಕಿ ಹೊಡೆಯುವ ಮೊದಲು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ಹೊಡೆದಿದೆ, ಆದರೆ ಸ್ಕೂಟರ್ ಚಾಲಕ ಸದ್ಯದಲ್ಲೇ ಪಾರಾಗಿದ್ದಾನೆ. ಇನ್ನು ಮೃತರನ್ನು ಸತೀಶ್ ಜಾಧವ್ (45) ಮತ್ತು ಕಿಶೋರ್ ಪಾಟೀಲ್ (44) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಶಿವರಾತ್ರಿ ಹಬ್ಬ ಆಚರಣೆ ವೇಳೆ ವಿದ್ಯುತ್ ಸ್ಪರ್ಶಿಸಿ 17 ಮಕ್ಕಳ ಸ್ಥಿತಿ ಚಿಂತಾಜನಕ

ಮೂವರು ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಪಘಾತದ ಕುರಿತು ಭಿವಂಡಿ ತಾಲೂಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಿಕ್ಷಾ ಚಾಲಕ ಮುಂಬೈ ನಾಸಿಕ್ ಹೆದ್ದಾರಿಯಲ್ಲಿ ಪಾದ್ಘಾ ಪ್ರದೇಶದಿಂದ ಭಿವಂಡಿ ಕಡೆಗೆ ಬರುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ರಸ್ತೆ ದಾಟಿದ್ದಾನೆ. ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿದ ಕಾರಣ ರಿಕ್ಷಾ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್​​​ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ