ಅತ್ಯಾಚಾರವೆಸಗಿ ಬಲವಂತದಿಂದ ಮದುವೆಯಾಗಿ ಬಾಣಲೆ, ಸಿಗರೇಟ್​ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಗಂಡ

ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಬಲವಂತವಾಗಿ ಮದುವೆಯಾದ ನಂತರ ಗಂಡ ಆಕೆಯನ್ನು ಬಿಸಿ ಬಾಣಲೆ, ಸಿಗರೇಟ್ ತುಂಡುಗಳಿಂದ ಸುಟ್ಟ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. 27 ವರ್ಷದ ಮಹಿಳೆಯನ್ನು 2021ರಲ್ಲಿ ಫೇಸ್‌ಬುಕ್‌ನಲ್ಲಿ ಮೊದಲು ಭೇಟಿಯಾದ ವ್ಯಕ್ತಿ ನಂತರ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ. ಬಳಿಕ ಆಕೆಯನ್ನು ಬಲವಂತವಾಗಿ ಮದುವೆಯನ್ನೂ ಆಗಿದ್ದ.

ಅತ್ಯಾಚಾರವೆಸಗಿ ಬಲವಂತದಿಂದ ಮದುವೆಯಾಗಿ ಬಾಣಲೆ, ಸಿಗರೇಟ್​ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಗಂಡ
Woman Harassment
Follow us
ಸುಷ್ಮಾ ಚಕ್ರೆ
|

Updated on: Jan 14, 2025 | 6:46 PM

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಬ್ಲ್ಯಾಕ್‌ಮೇಲ್ ಮಾಡಿ, ಮದುವೆಯನ್ನೂ ಮಾಡಿಕೊಂಡು ಚಿತ್ರಹಿಂಸೆ ನೀಡಿದ್ದಾನೆ. ಆರೋಪಿಯು ಸಾಮಾಜಿಕ ಮಾಧ್ಯಮದಲ್ಲಿ ಮೊದಲು ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ. ನಂತರ ಬಲವಂತದಿಂದ ಮದುವೆಯಾಗಿ ಆಕೆಯ ದೇಹವನ್ನು ಬಿಸಿ ಬಾಣಲೆ ಮತ್ತು ಸಿಗರೇಟ್ ತುಂಡುಗಳನ್ನು ಸುಟ್ಟುಹಾಕಿದ್ದಾನೆ.

ಆರೋಪಿಯ ತಾಯಿ ಸೇರಿದಂತೆ ಇತರ ಐವರು ಕುಟುಂಬಸ್ಥರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಆತನ ವಿರುದ್ಧ ದೂರು ದಾಖಲಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಉಲ್ಹಾಸ್‌ನಗರದಲ್ಲಿ ವಾಸಿಸುತ್ತಿದ್ದ ಆರೋಪಿ 2021ರಲ್ಲಿ ಫೇಸ್‌ಬುಕ್‌ನಲ್ಲಿ ಆ ಮಹಿಳೆ ಸ್ನೇಹ ಬೆಳೆಸಿದ್ದ. ನಂತರ ಆ ವ್ಯಕ್ತಿ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ

ತನ್ನ ದುರಂತ ಅನುಭವವನ್ನು ಆ ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ. ತನ್ನ ಗಂಡ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಷ್ಟೇ ಅಲ್ಲದೆ ಅದನ್ನು ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು 27 ವರ್ಷದ ಮಹಿಳೆ ಆರೋಪಿಸಿದ್ದಾರೆ. ನಂತರ ಆ ವ್ಯಕ್ತಿ ಆ ವಿಡಿಯೋ ತೋರಿಸಿ ಬೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ.

ನಂತರ ಆ ವ್ಯಕ್ತಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿ, ಬಲವಂತದಿಂದ ಮಧ್ಯಪ್ರದೇಶದ ಗ್ವಾಲಿಯರ್‌ಗೆ ಕರೆದೊಯ್ದಿದ್ದಾನೆ. ಅಲ್ಲಿಯೂ ದೌರ್ಜನ್ಯ ನಿಲ್ಲಲಿಲ್ಲ. ಆರೋಪಿ ತನ್ನ ತಾಯಿಯೊಂದಿಗೆ ಸೇರಿ ಸಂತ್ರಸ್ತೆಯ ಕೂದಲು ಮತ್ತು ಹುಬ್ಬುಗಳನ್ನು ಕತ್ತರಿಸಿ, ಯಾವಾಗಲೂ ಮನೆಯೊಳಗೆ ಬಂಧಿಸಿಟ್ಟಿದ್ದಾನೆ. ಬಳಿಕ ಆತ ಆಕೆಯನ್ನು ಸಿಗರೇಟ್ ತುಂಡುಗಳಿಂದ ಸುಟ್ಟುಹಾಕಿದ್ದಾನೆ ಮತ್ತು ಬಿಸಿ ಬಾಣಲೆಯಿಂದ ಸುಟ್ಟಿದ್ದಾನೆ. ಇದರಿಂದಾಗಿ ಆಕೆಯ ದೇಹದ ಮೇಲೆ ವಿವಿಧ ಗಾಯಗಳಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ