AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣದೊಂದು ವಿವಾದ, ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪತಿ, ಆಕೆ ಸ್ಥಳದಲ್ಲೇ ಸಾವು

ಥಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯ ನಡತೆ ಬಗ್ಗೆ ಅನುಮಾನಗೊಂಡು ಗಂಡ ಕೋಪದಲ್ಲಿ ಟಿವಿಯಿಂದ ಹೊಡೆದು ಆಕೆಯನ್ನು ಕೊಲೆ ಮಾಡಿದ್ದಾನೆ. ಶನಿವಾರ ತಡರಾತ್ರಿ ನಡೆದ ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಆರೋಪಿ ಪತಿಯನ್ನು ಕಲ್ಯಾಣ್ ಪೊಲೀಸರು ಬಂಧಿಸಿದ್ದಾರೆ. ದೇಶದಲ್ಲಿ ಹೆಚ್ಚುತ್ತಿರುವ ಕೌಟುಂಬಿಕ ದೌರ್ಜನ್ಯದ ಭೀಕರ ಮುಖ ಇದು.

ಸಣ್ಣದೊಂದು ವಿವಾದ, ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪತಿ, ಆಕೆ ಸ್ಥಳದಲ್ಲೇ ಸಾವು
ಸಾವುImage Credit source: Shutterstock
ನಯನಾ ರಾಜೀವ್
|

Updated on: May 25, 2026 | 7:11 AM

Share

ಥಾಣೆ, ಮೇ 25: ಗಂಡ-ಹೆಂಡತಿ ನಡುವಿನ ಸಣ್ಣದೊಂದು ವಿವಾದ ಕೊಲೆ(Murder)ಯಲ್ಲಿ ಅಂತ್ಯಗೊಂಡಿದೆ. ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪರಿಣಾಮ ಆಕೆ ಕೂಡಲೇ ಸಾವನ್ನಪ್ಪಿದ್ದಾಳೆ. ಕೊಲೆ ಆರೋಪದ ಮೇಲೆ ಪತಿಯನ್ನು ಬಂಧಿಸಲಾಗಿದೆ. ಆತನಿಗೆ 21 ವರ್ಷ ವಯಸ್ಸು, ಆಕೆಗಿನ್ನು 20 ವರ್ಷ ವಯಸ್ಸಾಗಿತ್ತು.

ಥಾಣೆ ಜಿಲ್ಲೆಯ ಕಲ್ಯಾಣ್ ತಾಲೂಕಿನ ಬಲ್ಯಾನಿ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಕಲ್ಯಾಣ್ ತಾಲೂಕು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮುಖೇಶ್ ಧಾಗೆ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಸತೀಶ್ ಕಲುರಾಮ್ ವಾಘೆ ಅಲಿಯಾಸ್ ಗುಡ್ಡು (21) ಎಂದು ಗುರುತಿಸಲಾಗಿದೆ. ಈತ ತನ್ನ 20 ವರ್ಷದ ಪತ್ನಿ ಸಾರಿಕಾಳ ನಡತೆಯ ಮೇಲೆ ಸದಾ ಅನುಮಾನ ವ್ಯಕ್ತಪಡಿಸುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದಂಪತಿ ಆಗಾಗ ಜಗಳವಾಡುತ್ತಿದ್ದರು.

ಶನಿವಾರ ತಡರಾತ್ರಿಯೂ ಇಬ್ಬರ ನಡುವೆ ಭಾರಿ ಜಗಳ ನಡೆದಿದೆ. ಈ ವೇಳೆ ತೀವ್ರ ಕೋಪಗೊಂಡ ಆರೋಪಿ ಸತೀಶ್, ಮನೆಯಲ್ಲಿದ್ದ ಟೆಲಿವಿಷನ್ ಸೆಟ್ ಅನ್ನು ಪತ್ನಿ ಸಾರಿಕಾಳ ತಲೆಯ ಮೇಲೆ ಬಲವಾಗಿ ಒಡೆದಿದ್ದಾನೆ. ಅಷ್ಟಕ್ಕೇ ನಿಲ್ಲಿಸದೆ, ನೀರಿನ ಪಾತ್ರೆಯಿಂದಲೂ ಆಕೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಾರಿಕಾ ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಮತ್ತಷ್ಟು ಓದಿ: ಜೈಲಿನೊಳಗೊಂದು ಲವ್ ಸ್ಟೋರಿ! ಕೊಲೆ ಅಪರಾಧಿಯನ್ನು ಮದುವೆಯಾದ ಜೈಲು ಅಧಿಕಾರಿ

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕಲ್ಯಾಣ್ ತಾಲೂಕು ಪೊಲೀಸರು, ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆ ನಡೆದು ಕೆಲವೇ ಗಂಟೆಗಳಲ್ಲಿ ಆರೋಪಿ ಪತಿ ಸತೀಶ್ ವಾಘೆನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಸೆಕ್ಷನ್ 103(1) ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್