ಉಕ್ರೇನ್ ಯುದ್ಧದ ಶಾಂತಿಯುತ ಪರಿಹಾರಕ್ಕೆ ಕೊಡುಗೆ ನೀಡಲು ಭಾರತ ಸಿದ್ಧ; ಪುಟಿನ್​ಗೆ ಪ್ರಧಾನಿ ಮೋದಿ ಸಂದೇಶ

ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬಕ್ಕೆ ಪುಟಿನ್, ಟ್ರಂಪ್, ಮೆಲೊನಿ, ನೆತನ್ಯಾಹು ಸೇರಿದಂತೆ ಹಲವು ದೇಶಗಳ ನಾಯಕರು ಶುಭಾಶಯ ಕೋರಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಗೆ ಫೋನ್ ಮಾಡಿ ಶುಭಾಶಯ ಕೋರಿದ್ದಾರೆ. ಈ ವೇಳೆ ಅವರು ರಷ್ಯಾ-ಉಕ್ರೇನ್ ಯುದ್ಧದ ಶಾಂತಿಯುತ ಪರಿಹಾರದ ಬಗ್ಗೆ ಮಾತನಾಡಿದ್ದಾರೆ.

ಉಕ್ರೇನ್ ಯುದ್ಧದ ಶಾಂತಿಯುತ ಪರಿಹಾರಕ್ಕೆ ಕೊಡುಗೆ ನೀಡಲು ಭಾರತ ಸಿದ್ಧ; ಪುಟಿನ್​ಗೆ ಪ್ರಧಾನಿ ಮೋದಿ ಸಂದೇಶ
Narendra Modi with putin

Updated on: Sep 17, 2025 | 7:32 PM

ನವದೆಹಲಿ, ಸೆಪ್ಟೆಂಬರ್ 17: ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತ ಸಾಧ್ಯವಿರುವ ಎಲ್ಲಾ ಕೊಡುಗೆಗಳನ್ನು ನೀಡಲು ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ (PM Modi) ಹೇಳಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಕ್ಕಾಗಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ (Putin) ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು ಎರಡೂ ದೇಶಗಳ ಸಂಬಂಧಗಳನ್ನು ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಅವರು ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.

ಇಂದು (ಬುಧವಾರ) ತಮ್ಮ 75ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ದೂರವಾಣಿ ಕರೆ ಮತ್ತು ಶುಭಾಶಯಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. “ನನ್ನ ಸ್ನೇಹಿತರಾದ ರಷ್ಯಾ ಅಧ್ಯಕ್ಷ ಪುಟಿನ್, ನನ್ನ 75ನೇ ಹುಟ್ಟುಹಬ್ಬದಂದು ನಿಮ್ಮ ಫೋನ್ ಕರೆ ಮತ್ತು ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು. ನಮ್ಮ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತ ಸಾಧ್ಯವಿರುವ ಎಲ್ಲಾ ಕೊಡುಗೆಗಳನ್ನು ನೀಡಲು ಸಿದ್ಧವಾಗಿದೆ” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: ಇಸ್ರೇಲ್‌ನಿಂದ ಅಮೆರಿಕದವರೆಗೆ; ಸ್ನೇಹಿತ ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಲಕ್ಸನ್, ಮೆಲೋನಿ, ನೆತನ್ಯಾಹು ಮುಂತಾದ ಜಾಗತಿಕ ನಾಯಕರು

ಇಂದು (ಸೆಪ್ಟೆಂಬರ್ 17) ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ತುಂಬಿತು. ಈ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇಟಲಿಯ ಪ್ರಧಾನಿ ಮೆಲೋನಿ ಸೇರಿದಂತೆ ಇತರ ಜಾಗತಿಕ ನಾಯಕರು ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us