ಆಹಾರೋದ್ಯಮಕ್ಕೆ ಉತ್ಪಾದನಾ ಪೋತ್ಸಾಹ ಧನ ನೀಡಲು ಒಪ್ಪಿಗೆ ಸೂಚಿಸಿದ ಸಚಿವ ಪ್ರಕಾಶ್ ಜಾವಡೇಕರ್
ಆಹಾರ ಸಂಸ್ಕರಣಾ ಉದ್ಯಮಕ್ಕೆ ಉತ್ಪಾದನೆ ಆಧರಿತ ಪೋತ್ಸಾಹ ಧನ ನೀಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ.
ದೆಹಲಿ: ಆಹಾರ ಸಂಸ್ಕರಣಾ ಉದ್ಯಮಕ್ಕೆ ಉತ್ಪಾದನೆ ಆಧರಿತ ಪೋತ್ಸಾಹ ಧನ ನೀಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ದೆಹಲಿಯಲ್ಲಿ ಸಭೆ ಬಳಿಕ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ 10,900 ಕೋಟಿ ರೂಪಾಯಿ ಸಬ್ಸಿಡಿ ನೀಡಿಕೆಗೆ ಅನುಮೋದನೆ ನೀಡಲಾಗಿದೆ. ಇದು ರೈತರಿಗೆ ಸಲ್ಲಿಸಿದ ಗೌರವ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಹೇಳಿದರು. ಪ್ರತಿ ವರ್ಷ 1 ಲಕ್ಷ ಕೋಟಿ ಆಹಾರ ಸಂಸ್ಕರಣ ಉತ್ಪನ್ನ ರಫ್ತು ಮಾಡಲಾಗುವುದು. ವಿದೇಶಗಳಲ್ಲಿ ಭಾರತೀಯ ಮೂಲದ ಜನರಿದ್ದಾರೆ. ವಿದೇಶಗಳಲ್ಲಿರುವ ಭಾರತೀಯರು ಖರೀದಿಸಿದರೂ ಆಹಾರ ಉತ್ಪನ್ನಗಳಿಗೆ ವಿದೇಶಗಳಲ್ಲಿ ಬೇಡಿಕೆ ಹೆಚ್ಚಾಗುತ್ತದೆ ಎಂದು ಮಾತನಾಡಿದರು.
ಇದನ್ನೂ ಓದಿ: ಇನ್ಮುಂದೆ ಒಟಿಟಿಗೂ ಬರಲಿದೆ ಕಟ್ಟುಪಾಡು: ಕೇಂದ್ರದ ಮಹತ್ವದ ಘೋಷಣೆ
ನೂತನ ಕೃಷಿ ಕಾಯ್ದೆ ಬೆಂಬಲಿಸಿ ಬಿಜೆಪಿ ಸೇರ್ಪಡೆಯಾದ ಕಮಲ್ ಹಾಸನ್ ಪಕ್ಷದ ಪ್ರಧಾನ ಕಾರ್ಯದರ್ಶಿ