ಪರೀಕ್ಷೆಯಲ್ಲಿ ಗೈಡ್​ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್

|

Updated on: Jul 07, 2024 | 10:26 AM

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನಿಟ್ಟುಕೊಂಡು ಸಾಮೂಹಿಕ ನಕಲು ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೇವಲ ಮಕ್ಕಳಲ್ಲ ಶಿಕ್ಷಕರೂ ಅವರಿಗೆ ನೆರವಾಗುತ್ತಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ.

ಪರೀಕ್ಷೆಯಲ್ಲಿ ಗೈಡ್​ ಇಟ್ಟುಕೊಂಡು ಸಾಮೂಹಿಕ ನಕಲು ಮಾಡಿದ ವಿದ್ಯಾರ್ಥಿಗಳು, ವಿಡಿಯೋ ವೈರಲ್
ಪರೀಕ್ಷೆ
Follow us on

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗೈಡ್​ ಇಟ್ಟುಕೊಂಡು ಸಾಮೂಹಿಕ ನಕಲು(Mass Cheating) ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ಬಯಲಾಗಿದೆ. ಜುಲೈ 5 ರಂದು ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಎಸ್ ಡಿಎಂ ವಿಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಅವರು ತನಿಖೆಗಾಗಿ ಸ್ಥಳಕ್ಕೆ ಬಂದರು ಆದರೆ ಅಲ್ಲಿ ಎಲ್ಲವೂ ಸಾಮಾನ್ಯವಾಗಿತ್ತು. ಇದಾದ ಬಳಿಕ ವಿಡಿಯೋವೊಂದು ಹೊರಬಿದ್ದಿದ್ದು, ನಂತರ ವಿಷಯ ಬೆಳಕಿಗೆ ಬಂದಿದೆ.

ಪರೀಕ್ಷಾ ಪತ್ರಿಕೆಗಳಲ್ಲಿನ ಅಕ್ರಮಗಳು ಮತ್ತು ಸೋರಿಕೆಗಳ ಬಗ್ಗೆ ದೇಶದಲ್ಲಿ ಕೋಲಾಹಲವಿದೆ, ಈ ನಡುವೆ ಈ ಘಟನೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ತರಗತಿ ಕೊಠಡಿಯಲ್ಲಿ ಪರೀಕ್ಷೆ ನಡೆಯುವಾಗ ಹಲವು ಮಕ್ಕಳು ಗುಂಪು ಕಟ್ಟಿಕೊಂಡು ಬಹಿರಂಗವಾಗಿ ನಕಲು ಮಾಡುತ್ತಿದ್ದರು. ಅಲ್ಲಿ ಶಿಕ್ಷಕರೂ ಇದ್ದರು. ಆದರೆ ನಕಲು ನಿಲ್ಲಿಸುವ ಬದಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಿಎ ಮತ್ತು ಬಿಎಸ್ಸಿ ಪರೀಕ್ಷೆಗಳು ಅಲ್ಲಿ ನಡೆಯುತ್ತಿತ್ತು, ಈ ಪರೀಕ್ಷೆಗಳ ಕೇಂದ್ರವನ್ನು ದಾಮೋಹ್ ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳು ಅದೇ ಶಾಲೆಯ ತರಗತಿ ಕೊಠಡಿಯಲ್ಲಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಓದಿ: ಯಾದಗಿರಿ: ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ವಿದ್ಯಾರ್ಥಿಗಳು ಗೈಡ್​ ಹಾಗೂ ಪುಸ್ತಕಗಳನ್ನು ತೆರೆದು ನಕಲು ಮಾಡುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಎಸ್‌ಡಿಎಂ ಭಿಂಡ್ ಕಲೆಕ್ಟರ್ ಸಂದೀಪ್ ಶ್ರೀವಾಸ್ತವ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರದ ಅಧ್ಯಕ್ಷರು ಹಾಗೂ ಪ್ರಾಂಶುಪಾಲರ ಶಾಮೀಲಾಗಿರುವುದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆಯೂ ಮಾತನಾಡಿದರು. ಇದೀಗ ಆಲಂಪುರದ ಹೈಯರ್ ಸೆಕೆಂಡರಿ ಶಾಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಲಾಗಿದೆ.

ದುರ್ಗಾಪ್ರಸಾದ್ ಸರಾಫ್, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸ್ವಯಂ ಪ್ರಭಾ ಕಾಲೇಜಿನ ವಿದ್ಯಾರ್ಥಿಗಳೂ ದಾಮೋಹ್ ಕೇಂದ್ರದಲ್ಲಿ ನಕಲು ಮಾಡುತ್ತಿದ್ದು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ