ಸಿಎಎ ಜಾರಿಗೆ ಕೇಂದ್ರ ಸರ್ಕಾರ ಇಂದು ರಾತ್ರಿ ಅಧಿಸೂಚನೆ ಹೊರಡಿಸುವ ಸಾಧ್ಯತೆ

|

Updated on: Mar 11, 2024 | 5:17 PM

Citizenship Amendment Act rules: ಕೇಂದ್ರ ಸರ್ಕಾರ ಇಂದು ಸಿಎಎ ನಿಯಮಗಳನ್ನು ತಿಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ. ಈ ಹಿಂದೆಯೇ ಕೇಂದ್ರ ಗೃಹ ಸಚಿವ ಅಮಿತ್​​ ಶಾ ಸಿಎಎಯನ್ನು ಜಾರಿಗೊಳಿಸುವುದು ಖಂಡಿತ ಎಂದು ಹೇಳಿದರು. ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿಗೆ ತರಲಾಗುವುದು ಎಂದು ಹೇಳಿದರು.

ಸಿಎಎ ಜಾರಿಗೆ ಕೇಂದ್ರ ಸರ್ಕಾರ ಇಂದು ರಾತ್ರಿ ಅಧಿಸೂಚನೆ ಹೊರಡಿಸುವ ಸಾಧ್ಯತೆ
ಅಮಿತ್​ ಶಾ
Follow us on

ದೆಹಲಿ, ಮಾ.11: ಕೇಂದ್ರ ಸರ್ಕಾರ ಇಂದು ಪೌರತ್ವ ತಿದ್ದುಪಡಿ ಕಾಯ್ದೆ (CAA) ನಿಯಮಗಳನ್ನು ತಿಳಿಸುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. ಕೇಂದ್ರ ಗೃಹಸಚಿವ ಅಮಿತ್​​ ಶಾ ( Amit Shah) ಈ ಹಿಂದೆ ಲೋಕಸಭೆ ಚುನಾವಣೆಗೂ ಮುನ್ನ ಸಿಎಎಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು. ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ, ಅದರಲ್ಲೂ ಅಲ್ಪಸಂಖ್ಯಾತರಿಗೆ ಯಾವ ಸಮಸ್ಯೆಯು ಆಗುವುದಿಲ್ಲ. ಈ ಕಾಯ್ದೆ ಪೌರತ್ವ ನೀಡುವುದೆ, ಹೊರತು ಕಿತ್ತುಕೊಳ್ಳುವುದಲ್ಲ. ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳನ್ನು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಮುಸ್ಲಿಂ ಸಹೋದರರ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದರು. ಇಂದು ಸಿಎಎ ಬಗ್ಗೆ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆಗಳು ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿದೆ. ಈ ಕಾಯ್ದೆಯಲ್ಲಿ ಯಾವೆಲ್ಲ ನಿಯಮಗಳು ಇದೆ ಎಂಬುದನ್ನು ಇಂದು ರಾತ್ರಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಪ್ರಧಾನಿ ಮೋದಿ ಅವರು ಇಂದು ಸಂಜೆ ದೇಶವನ್ನುದ್ದೇಶಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಸಿಎಎ ಬಗ್ಗೆ ಉಲ್ಲೇಖಿಸುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ.

ಈ ಕಾಯ್ದೆಯಿಂದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹಿಂದೂ, ಸಿಖ್, ಜೈನ ಬೌದ್ಧ, ಕ್ರಿಶ್ಚಿಯನ್ ಮತ್ತು ಪಾರ್ಸಿ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ಪಡೆಯಲು ಕಾನೂನು ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಬಂದಿರುವ ಈ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಉದ್ದೇಶವನ್ನು ಈ ಕಾನೂನು ಹೊಂದಿದೆ ಎಂದು ಶಾ ಹೇಳಿದ್ದರು.

ಇನ್ನು ಈ ಕಾನೂನು 2019ರಲ್ಲಿ  ಜಾರಿಗೆ ಬಂದ ನಂತರ, ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಕಳೆದ ತಿಂಗಳು, ಸಿಎಎ ಕಾನೂನನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದರು. ಇದು ಚುನಾವಣೆಗೂ ಮುನ್ನ ಜಾರಿಯಾಗಲಿದೆ. ಇದು ದೇಶದ ಕಾನೂನು, ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಈ ಕಾನೂನಿಗೆ ಈಗಾಗಲೇ ಅಡಿಪಾಯ ಹಾಕಲಾಗಿದೆ ಎಂದಿದ್ದರು.

ಇದನ್ನೂ ಓದಿ: 2024ರ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ: ಅಮಿತ್ ಶಾ

ಸಿಎಎ ದೇಶದ ಕಾಯಿದೆ, ಚುನಾವಣೆಯ ಮೊದಲು ಅದನ್ನು ಜಾರಿಗೊಳಿಸಲಾಗುವುದು. ಅದರ ಸುತ್ತ ಯಾವುದೇ ಗೊಂದಲ ಇರಬಾರದು. ಈ ಕಾನೂನಿನ ಬಗ್ಗೆ ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. CAA ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಹಾಗೂ ಈ ಕಾನೂನಿನಲ್ಲಿ ಇದಕ್ಕೆ ಅವಕಾಶವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ಒದಗಿಸುವ ಕಾಯಿದೆ ಎಂದು ಅಮಿತ್ ಶಾ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 4:55 pm, Mon, 11 March 24