Delhi High Court: ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇಮಕಾತಿ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕರಿಸಿ ₹1 ಲಕ್ಷ ದಂಡ ವಿಧಿಸಿದ ದೆಹಲಿ ಹೈಕೋರ್ಟ್

| Updated By: ಅಕ್ಷಯ್​ ಪಲ್ಲಮಜಲು​​

Updated on: Nov 11, 2022 | 1:14 PM

ಸಿಜೆಐ ಆಗಿ ಡಿ.ವೈ.ಚಂದ್ರಚೂಡ್ ನೇಮಕ ಪ್ರಶ್ನಿಸಿ ಪಿಐಎಲ್​ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೆ 1 ಲಕ್ಷ ರೂ. ದಂಡ ವಿಧಿಸಿದೆ. PIL​ ಸಲ್ಲಿಸಿದ್ದವರಿಗೆ 1 ಲಕ್ಷ ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್ ಹೇಳಿದೆ.

Delhi High Court: ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇಮಕಾತಿ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕರಿಸಿ ₹1 ಲಕ್ಷ ದಂಡ ವಿಧಿಸಿದ ದೆಹಲಿ ಹೈಕೋರ್ಟ್
Delhi High Court Justice DY Chandrachud
Follow us on

ದೆಹಲಿ: ಸಿಜೆಐ ಆಗಿ ಡಿ.ವೈ.ಚಂದ್ರಚೂಡ್ ನೇಮಕ ಪ್ರಶ್ನಿಸಿ ಪಿಐಎಲ್​ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೆ 1 ಲಕ್ಷ ರೂ. ದಂಡ ವಿಧಿಸಿದೆ. PIL​ ಸಲ್ಲಿಸಿದ್ದವರಿಗೆ 1 ಲಕ್ಷ ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್ ಹೇಳಿದೆ. ಪಬ್ಲಿಸಿಟಿ ಪಡೆಯಲು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ. ಅರ್ಜಿಯಲ್ಲಿ ಯಾವುದೇ ಸೂಕ್ತ ವಿಚಾರ ಇಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಅರ್ಜಿದಾರ ಸಂಜೀವ್ ಕುಮಾರ್ ತಿವಾರಿಗೆ ದಂಡ ವಿಧಿಸಿದ ಹೈಕೋರ್ಟ್ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ಪೀಠವು ಅರ್ಜಿದಾರರ ಮೇಲೆ 1 ಲಕ್ಷ ರೂ. ದಂಡವನ್ನು ವಿಧಿಸಿದೆ. ಈ ಅರ್ಜಿಯು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲ ಆದರೆ ಪ್ರಜಾಶಕ್ತ ಆಧಾರಿತ ಅರ್ಜಿಯಾಗಿದೆ ಎಂದು ಗಮನಿಸಿತು.

ಗ್ರಾಮ ಉದಯ್ ಫೌಂಡೇಶನ್ ಎಂಬ ಸಂಸ್ಥೆಯ ಅಧ್ಯಕ್ಷ ಸಂಜೀವ್ ಕುಮಾರ್ ತಿವಾರಿ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ಪ್ರಸ್ತುತ ಅರ್ಜಿಯನ್ನು ಪ್ರಚಾರ ಪಡೆಯಲು ಮಾತ್ರ ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಕಳೆದ ವಾರವಷ್ಟೇ, ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಸಿಜೆಐ ಆಗಿ ನೇಮಕ ಮಾಡುವುದರ ವಿರುದ್ಧ ಇದೇ ರೀತಿಯ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

ಇದನ್ನು ಓದಿ: ಸುಪ್ರೀಂಕೋರ್ಟ್​ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಲಿರುವ ನ್ಯಾ. ಡಿವೈ ಚಂದ್ರಚೂಡ್ ವ್ಯಕ್ತಿಚಿತ್ರ

ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನವೆಂಬರ್ 9, ಬುಧವಾರದಂದು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಿದರು. ನವೆಂಬರ್ 8, ಮಂಗಳವಾರ ಕಚೇರಿಯಿಂದ ನಿವೃತ್ತರಾದ ಮಾಜಿ ಸಿಜೆಐ ಯುಯು ಲಲಿತ್ ಅವರಿಂದ ನ್ಯಾಯಮೂರ್ತಿ ಚಂದ್ರಚೂಡ್ ಅಧಿಕಾರ ವಹಿಸಿಕೊಂಡರು.

 

 

 

Published On - 1:14 pm, Fri, 11 November 22