ದೆಹಲಿ ಅಗ್ನಿ ದುರಂತ ಅತ್ಯಂತ ಭಯಾನಕ -ಪಿಎಂ ಮೋದಿ

|

Updated on: Dec 08, 2019 | 11:17 AM

ದೆಹಲಿ: ಬೆಳ್ಳಂ ಬೆಳಗ್ಗೆಯೇ ರಾಷ್ಟ್ರ ರಾಜಧಾನಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ.  ಅಗ್ನಿ ದುರಂತ ಅತ್ಯಂತ ಭಯಾನಕವಾಗಿದೆ ಎಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. The fire in Delhi’s Anaj Mandi on Rani Jhansi Road is extremely horrific. My thoughts are with those who lost their loved ones. Wishing the injured a quick recovery. Authorities […]

ದೆಹಲಿ ಅಗ್ನಿ ದುರಂತ ಅತ್ಯಂತ ಭಯಾನಕ -ಪಿಎಂ ಮೋದಿ
Follow us on

ದೆಹಲಿ: ಬೆಳ್ಳಂ ಬೆಳಗ್ಗೆಯೇ ರಾಷ್ಟ್ರ ರಾಜಧಾನಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ.  ಅಗ್ನಿ ದುರಂತ ಅತ್ಯಂತ ಭಯಾನಕವಾಗಿದೆ ಎಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

ರಾಹುಲ್ ಗಾಂಧಿ ಸಾಂತ್ವಾನ:
ದೆಹಲಿಯ ಅಗ್ನಿ ಅನಾಹುತಕ್ಕೆ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಅಂತಾ ಟ್ವೀಟ್ ಮಾಡಿದ್ದಾರೆ. ಇನ್ನು ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್:
ದುರಂತದಲ್ಲಿ ಅಮೂಲ್ಯವಾದ ಜೀವಗಳನ್ನು ಕಳೆದುಕೊಂಡಿದ್ದೇವೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಅಂತಾ ಪ್ರಾರ್ಥಿಸುತ್ತೇನೆ. ಜತೆಗೆ ಪರಿಸ್ಥಿತಿ ನಿಭಾಯಿಸಲು ಬೇಕಾದ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

Published On - 11:14 am, Sun, 8 December 19