AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ನಮ್ಮೊಂದಿಗೆ ಮಾತುಕತೆ ನಡೆಸಿದರೆ ಮಾತ್ರ ನಾವು ಮನೆಗೆ ಹೋಗುತ್ತೇವೆ: ರಾಕೇಶ್ ಟಿಕಾಯತ್

Kisan Mahapanchayat ಮಹಾಪಂಚಾಯತ್‌ನಲ್ಲಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ಕೃಷಿ ಕಾನೂನುಗಳನ್ನು ರದ್ದುಪಡಿಸಿದ ನಂತರವೂ ಇನ್ನೂ ಹಲವು ಸಮಸ್ಯೆಗಳು ಇತ್ಯರ್ಥವಾಗಬೇಕಿದೆ. ರೈತರಿಗಾಗಿ ರಾಷ್ಟ್ರವ್ಯಾಪಿ ಚಳವಳಿ ಶಾಂತಿಯುತವಾಗಿ ಮುಂದುವರಿಯಲಿದೆ ಎಂದರು.

ಸರ್ಕಾರ ನಮ್ಮೊಂದಿಗೆ ಮಾತುಕತೆ ನಡೆಸಿದರೆ ಮಾತ್ರ ನಾವು ಮನೆಗೆ ಹೋಗುತ್ತೇವೆ: ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 22, 2021 | 5:08 PM

Share

ಲಖನೌ: ಮೂರು ಕೃಷಿ ಕಾನೂನುಗಳ(farm laws) ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿರುವ ರೈತ ಸಂಘಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ (SKM) ಸೋಮವಾರ ಲಖನೌನಲ್ಲಿ ಕಿಸಾನ್ ಮಹಾಪಂಚಾಯತ್‌ (Kisan Mahapanchayat) ನಡೆಸಿದೆ. ಶುಕ್ರವಾರದಂದು ಕೇಂದ್ರವು ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಘೋಷಿಸುವ ಮೊದಲು ಮಹಾಪಂಚಾಯತ್ ಅನ್ನು ಯೋಜಿಸಲಾಗಿತ್ತು. ಭಾನುವಾರ ನಡೆದ ಸಭೆಯಲ್ಲಿ ರೈತರು ಯೋಜಿತ ರೀತಿಯಲ್ಲಿ ಮಹಾಪಂಚಾಯತ್ ಮುಂದುವರಿಸಲು ನಿರ್ಧರಿಸಿದರು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಜಮಾಯಿಸಿದ್ದು, ಇತರ ವಿಷಯಗಳ ಜೊತೆಗೆ ಕನಿಷ್ಠ ಬೆಂಬಲ ಬೆಲೆಯ (MSP) ಕಾನೂನು ಖಾತರಿಗಾಗಿ ತಮ್ಮ ಬೇಡಿಕೆಯೊಡ್ಡಿದ್ದಾರೆ. ಮಹಾಪಂಚಾಯತ್‌ನಲ್ಲಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ (Rakesh Tikait) ಕೃಷಿ ಕಾನೂನುಗಳನ್ನು ರದ್ದುಪಡಿಸಿದ ನಂತರವೂ ಇನ್ನೂ ಹಲವು ಸಮಸ್ಯೆಗಳು ಇತ್ಯರ್ಥವಾಗಬೇಕಿದೆ. ರೈತರಿಗಾಗಿ ರಾಷ್ಟ್ರವ್ಯಾಪಿ ಚಳವಳಿ ಶಾಂತಿಯುತವಾಗಿ ಮುಂದುವರಿಯಲಿದೆ ಎಂದರು.

“ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವುದಾಗಿ ಘೋಷಿಸಿದ ನಂತರ, ಸರ್ಕಾರವು ರೈತರೊಂದಿಗೆ ಮಾತನಾಡಲು ಬಯಸುವುದಿಲ್ಲ ಎಂದು ತೋರುತ್ತದೆ. ಸರ್ಕಾರವು ಕಾನೂನುಗಳನ್ನು ನಿಜವಾದ ಅರ್ಥದಲ್ಲಿ ಹಿಮ್ಮೆಟ್ಟಿಸಿದೆ ಎಂದು ಸ್ಪಷ್ಟಪಡಿಸಬೇಕು. ನಮ್ಮೊಂದಿಗೆ ಮಾತನಾಡಬೇಕು, ಹಾಗಾದರೆ ಮಾತ್ರ ನಾವು ನಮ್ಮ ಹಳ್ಳಿಗಳಿಗೆ ಮರಳಬಹುದು ಎಂದು ಎಂದು ರಾಕೇಶ್ ಟಿಕಾಯತ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ರೈತರ ಇತರೆ ಬೇಡಿಕೆಗಳು ಭಾನುವಾರ ಎಸ್‌ಕೆಎಂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದು, ರೈತರ ಆರು ಬಾಕಿ ಇರುವ ಬೇಡಿಕೆಗಳನ್ನು ಪರಿಹರಿಸಲು ಮಾತುಕತೆಯನ್ನು ಪುನರಾರಂಭಿಸುವಂತೆ ವಿನಂತಿಸಿದೆ. ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿಯ ಜೊತೆಗೆ, ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ರೈತರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯುವಂತೆಯೂ ಅವರು ಒತ್ತಾಯಿಸಿದ್ದಾರೆ. “ಎಂಎಸ್‌ಪಿ, ಬೀಜಗಳು, ಡೈರಿ ಮತ್ತು ಮಾಲಿನ್ಯದ ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ” ಎಂದು ರಾಕೇಶ್ ಟಿಕಾಯತ್ ಹೇಳಿದರು.

ರಾಷ್ಟ್ರೀಯ ಕಿಸಾನ್ ಮಂಚ್‌ನ ಅಧ್ಯಕ್ಷ ಶೇಖರ್ ದೀಕ್ಷಿತ್, “ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿಯವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಮಾಡಿದ್ದಾರೆ, ಅಲ್ಲಿ ಬಿಜೆಪಿ ತನ್ನ ಕೈಯಿಂದ ಅಧಿಕಾರವನ್ನು ಕಳೆದುಕೊಳ್ಳುತ್ತಿದೆ” ಎಂದು ಹೇಳಿದರು.

ಶುಕ್ರವಾರ ಪ್ರಧಾನಿ ಮೋದಿಯವರ ಘೋಷಣೆಯಿಂದ, ರೈತ ಮುಖಂಡರು ಮೂರು ಕಾನೂನುಗಳನ್ನು ಔಪಚಾರಿಕವಾಗಿ ರದ್ದುಗೊಳಿಸುವವರೆಗೆ ಪ್ರತಿಭಟನಾಕಾರರು ಕದಲುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಸೋಮವಾರ ರೈತರನ್ನು ಉದ್ದೇಶಿಸಿ ಮಾತನಾಡಿದ ರಾಕೇಶ್ ಟಿಕಾಯತ್, “ಪ್ರಧಾನಿ ಮೋದಿ ಕ್ಷಮೆಯಾಚಿಸಿದ್ದಾರೆ, ಅದರ ಅಗತ್ಯವಿಲ್ಲ, ಅವರು ನಮ್ಮ ಸಮಸ್ಯೆಗಳನ್ನು ಗಂಭೀರವಾಗಿ ಪರಿಹರಿಸುವ ಅವಶ್ಯಕತೆಯಿದೆ” ಎಂದು ಹೇಳಿದರು. ನೂರಾರು ಪ್ರತಿಭಟನಾಕಾರರು ನವೆಂಬರ್ 2020 ರಿಂದ ದೆಹಲಿಯ ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ:  ಕೃಷಿ ಕಾನೂನು ಹಿಂತೆಗೆದುಕೊಳ್ಳುವ ಮಸೂದೆಗಳನ್ನು ಕೇಂದ್ರ ಬುಧವಾರ ಅನುಮೋದಿಸುವ ಸಾಧ್ಯತೆ: ವರದಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್