ತಮಿಳುನಾಡು ಹಾಗೂ ಕೇರಳದಲ್ಲಿ ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ

ತಮಿಳುನಾಡು ಹಾಗೂ ಕೇರಳದಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2-3 ದಿನಗಳಲ್ಲಿ ತಮಿಳುನಾಡು, ಕೇರಳ, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿರುಗಾಳಿಯ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ತಮಿಳುನಾಡು ಹಾಗೂ ಕೇರಳದಲ್ಲಿ ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ
ಮಳೆ
Image Credit source: India Today

Updated on: Dec 10, 2023 | 12:16 PM

ತಮಿಳುನಾಡು ಹಾಗೂ ಕೇರಳದಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2-3 ದಿನಗಳಲ್ಲಿ ತಮಿಳುನಾಡು, ಕೇರಳ, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿರುಗಾಳಿಯ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮಿಚಾಂಗ್ ಚಂಡಮಾರುತ ಈಗಾಗಲೇ ತಮಿಳುನಾಡಿನಲ್ಲಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮುಂದಿನ 3 ದಿನಗಳ ಕಾಲ ಮತ್ತೆ ಮಳೆಯಾಗಲಿದ್ದು, ಜನರು ಭಯಗೊಂಡಿದ್ದಾರೆ. ತಮಿಳುನಾಡು ಮತ್ತು ಕೇರಳದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ತಮಿಳುನಾಡಿನ ತಿರುನಲ್ವೇಲಿ

ಮತ್ತು ಕೂನೂರಿನಲ್ಲಿ 2 ಸೆಂ.ಮೀ ಮಳೆ ದಾಖಲಾಗಿದ್ದರೆ, ಕೇರಳದ ವಡವತ್ತೂರಿನಲ್ಲಿ 3 ಸೆಂ.ಮೀ ಮಳೆಯಾಗಿದೆ. ಡಿಸೆಂಬರ್ 4 ರಂದು ಭಾರೀ ಮಳೆ ಸುರಿದಾಗಿನಿಂದ ಚೆನ್ನೈನಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿತ್ತು.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಚೆನ್ನೈನಲ್ಲಿ ಪ್ರತಿ ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ನೆರವು ಘೋಷಿಸಿದರು ತಕ್ಷಣದ ಪರಿಹಾರವಾಗಿ 6,000 ಸಾವಿರ ರೂ. ಮೊತ್ತವನ್ನು ನೀಡಲಾಯಿತು.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಒಣಹವೆ, ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ

ಪರಿಹಾರ ಮೊತ್ತ ಹೆಚ್ಚಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಪ್ರತಿ ಸಂತ್ರಸ್ತ ಕುಟುಂಬಕ್ಕೆ 10,000 ರೂ.ಗೆ ಸಹಾಯವನ್ನು ಹೆಚ್ಚಿಸಲು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ, ಹೆಚ್ಚುವರಿ ಬೆಂಬಲದ ಅಗತ್ಯವನ್ನು ಎತ್ತಿ ತೋರಿಸಿದ್ದಾರೆ.ರಾಜ್ಯ ಸರ್ಕಾರವು ಪರಿಹಾರ ನಿಧಿಗೆ ಒಂದು ಪೈಸೆಯನ್ನೂ ನೀಡಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ