AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ಕಾಶ್ಮೀರ್ ಫೈಲ್ಸ್ ಸೆನ್ಸಾರ್ ಮಾಡುವುದು ಸ್ವಾತಂತ್ರ್ಯದ ಮೇಲಿನ ದಾಳಿ: ನ್ಯೂಜಿಲೆಂಡ್​ನ ಮಾಜಿ ಉಪ ಪ್ರಧಾನಿ

ಮುಸ್ಲಿಂ ಸಮುದಾಯದ ಸದಸ್ಯರು ಚಿತ್ರದ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ ಮುಖ್ಯ ಸೆನ್ಸಾರ್ ಚಿತ್ರದ ವರ್ಗೀಕರಣವನ್ನು ಪರಿಶೀಲಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

ದಿ ಕಾಶ್ಮೀರ್ ಫೈಲ್ಸ್ ಸೆನ್ಸಾರ್ ಮಾಡುವುದು ಸ್ವಾತಂತ್ರ್ಯದ ಮೇಲಿನ ದಾಳಿ: ನ್ಯೂಜಿಲೆಂಡ್​ನ ಮಾಜಿ ಉಪ ಪ್ರಧಾನಿ
ದಿ ಕಾಶ್ಮೀರ್ ಫೈಲ್ಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Mar 20, 2022 | 10:05 PM

Share

ದೆಹಲಿ: ಭಾರೀ ಚರ್ಚೆಗೆ ಗ್ರಾಸವಾಗಿರುವ ಬಾಲಿವುಡ್ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್‘ (The Kashmir Files) ಬಿಡುಗಡೆಯನ್ನು ನ್ಯೂಜಿಲೆಂಡ್‌ನಲ್ಲಿ (New Zealand) ತಡೆಹಿಡಿಯಲಾಗಿದೆ. ಈ ಹಿಂದೆ ಚಲನಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದ ದೇಶದ ಸೆನ್ಸಾರ್ ಮಂಡಳಿಯು ಕೆಲವು ಸಮುದಾಯದ ಗುಂಪುಗಳನ್ನು ಸಂಪರ್ಕಿಸಿದ ನಂತರ ತನ್ನ ನಿರ್ಧಾರವನ್ನು ಪರಿಶೀಲಿಸಲು ನಿರ್ಧರಿಸಿದೆ. ದೇಶದ ಸೆನ್ಸಾರ್ ಮಂಡಳಿಯು ‘ದಿ ಕಾಶ್ಮೀರ್ ಫೈಲ್ಸ್’ಗೆ 16 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ವೀಕ್ಷಿಸಲು ಅವಕಾಶ ನೀಡುವ ಪ್ರಮಾಣಪತ್ರವನ್ನು ನೀಡಿತ್ತು. ಆದರೆ ಮಂಡಳಿಯು ತನ್ನ ನಿರ್ಧಾರವನ್ನು ಪರಿಶೀಲಿಸಲು ನಿರ್ಧರಿಸಿದೆ ಮತ್ತು ಚಿತ್ರದ ಪ್ರದರ್ಶನವನ್ನು ತಡೆಹಿಡಿಯಲು ನಿರ್ಧರಿಸಿದೆ. 1990 ರ ದಶಕದಲ್ಲಿ ಕಣಿವೆಯಿಂದ ಕಾಶ್ಮೀರಿ ಪಂಡಿತರ (Kashmiri Pandits)ವಲಸೆಯನ್ನು ಕೇಂದ್ರೀಕರಿಸಿದ ಈ ಚಲನಚಿತ್ರವು ಮಾರ್ಚ್ 11 ರಂದು ಬಿಡುಗಡೆಯಾದಾಗಿನಿಂದ ವಿವಾದದ ಸುಳಿಯಲ್ಲಿ ಸಿಲುಕಿದೆ. ಮುಸ್ಲಿಂ ಸಮುದಾಯದ ಸದಸ್ಯರು ಚಿತ್ರದ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ ಮುಖ್ಯ ಸೆನ್ಸಾರ್ ಚಿತ್ರದ ವರ್ಗೀಕರಣವನ್ನು ಪರಿಶೀಲಿಸುತ್ತಿದೆ ಎಂದು ವರದಿಗಳು ತಿಳಿಸಿವೆ.  ನ್ಯೂಜಿಲೆಂಡ್‌ನ ಮಾಜಿ ಉಪಪ್ರಧಾನಿ ವಿನ್‌ಸ್ಟನ್ ಪೀಟರ್ಸ್ ಚಲನಚಿತ್ರ ಮಂಡಳಿಯ ವಿರುದ್ಧ ವಾಗ್ದಾಳಿ ನಡೆಸಿದ್ದು ಚಿತ್ರವನ್ನು ಸೆನ್ಸಾರ್ ಮಾಡುವುದು ನ್ಯೂಜಿಲೆಂಡ್‌ನವರ ಸ್ವಾತಂತ್ರ್ಯದ ಮೇಲಿನ ದಾಳಿಯಾಗಿದೆ ಎಂದು ಹೇಳಿದ್ದಾರೆ.  “ಈ ಚಿತ್ರವನ್ನು ಸೆನ್ಸಾರ್ ಮಾಡುವುದು ನ್ಯೂಜಿಲೆಂಡ್‌ನಲ್ಲಿ ಮಾರ್ಚ್ 15 ರ ದೌರ್ಜನ್ಯದ ಮಾಹಿತಿಗಳು ಅಥವಾ ಚಿತ್ರಗಳನ್ನು ಸೆನ್ಸಾರ್ ಮಾಡುವುದಕ್ಕೆ ಸಮನಾಗಿರುತ್ತದೆ ಅಥವಾ ಅದಕ್ಕಾಗಿ 9/11 ಮೇಲಿನ ದಾಳಿಯ ಎಲ್ಲಾ ಚಿತ್ರಗಳನ್ನು ಸಾರ್ವಜನಿಕರಿಗೆ ಸಿಗದಂತೆ ತೆಗೆದುಹಾಕಿದಂತೆ ಎಂದು ಪೀಟರ್ಸ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಭಯೋತ್ಪಾದನೆಯು ಅದರ ಎಲ್ಲಾ ರೂಪಗಳಲ್ಲಿರುತ್ತದೆ, ಅದರ ಮೂಲ ಏನೇ ಇರಲಿ, ಅದನ್ನು ಬಹಿರಂಗಪಡಿಸಬೇಕು ಮತ್ತು ವಿರೋಧಿಸಬೇಕು. ಆಯ್ದ ಸೆನ್ಸಾರ್‌ಶಿಪ್‌ನ ಈ ಪ್ರಯತ್ನವು ನ್ಯೂಜಿಲೆಂಡ್‌ನವರು ಮತ್ತು ಪ್ರಪಂಚದಾದ್ಯಂತದ ಜನರ ಸ್ವಾತಂತ್ರ್ಯದ ಮೇಲೆ ಮತ್ತೊಂದು ದಾಳಿಗೆ ಕಾರಣವಾಗುತ್ತದೆ” ಎಂದು ಅವರು ಹೇಳಿದರು.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಮುಂತಾದವರು ನಟಿಸಿದ್ದಾರೆ.

ದೇಶದಾದ್ಯಂತ ಹಲವಾರು ರಾಜ್ಯಗಳ ಸರ್ಕಾರದ ಬೆಂಬಲ ಮತ್ತು ತೆರಿಗೆ ವಿನಾಯಿತಿ ಪಡೆದಿರುವ ಈ ಸಿನಿಮಾ ಬಾಕ್ಸ್ ಆಫೀಸಲ್ಲಿ ಯಶಸ್ಸನ್ನು ಗಳಿಸಿದೆ. ಇದಲ್ಲದೆ, ಚಿತ್ರದ ಸೂಕ್ಷ್ಮ ರಾಜಕೀಯ ಸ್ವರೂಪ ಮತ್ತು ಉದ್ದೇಶಪೂರ್ವಕವಾಗಿ ಸತ್ಯಗಳನ್ನು ತಪ್ಪಾಗಿ ನಿರೂಪಿಸಲಾಗಿದೆ ಎಂಬ ಆರೋಪವೂ ಈ ಚಿತ್ರದ ಮೇಲಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಚಲನಚಿತ್ರ ಮಂದಿರಗಳ ಒಳಗೆ ಮತ್ತು ಹೊರಗಿನ ಜನರ ವಿಡಿಯೊಗಳು ಹರಿದಾಡುತ್ತಿದ್ದು ಅಲ್ಲಿ ಜನರು ಮುಸ್ಲಿಮರಿಗೆ ನಿಂದನೀಯ ಭಾಷೆಯನ್ನು ಬಳಸುವುದನ್ನು ಕಾಣಬಹುದು.

ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​’ಗಿಂತಲೂ ಹೆಚ್ಚು IMDb ರೇಟಿಂಗ್​ ಪಡೆದ ‘ಜೇಮ್ಸ್​’; 10ಕ್ಕೆ 9.9 ನೀಡಿದ ಪ್ರೇಕ್ಷಕರು

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್