AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ಕೇರಳ ಸ್ಟೋರಿಯನ್ನು ವಿರೋಧಿಸುವುದು ಭಯೋತ್ಪಾದನೆಯನ್ನು ಬೆಂಬಲಿಸಿದಂತೆ: ಮಮತಾ ಬ್ಯಾನರ್ಜಿ ವಿರುದ್ಧ ಸಚಿವೆ ಸ್ಮೃತಿ ಇರಾನಿ ಗುಡುಗು

The Kerala Story: ದಿ ಕೇರಳ ಸ್ಟೋರಿ (The Kerala Story) ಸಿನಿಮಾ ವಿರುದ್ಧ ದೇಶಾದ್ಯಂತ ಪರ ವಿರೋಧಗಳು ವ್ಯಕ್ತವಾಗುತ್ತಿವೆ. ಕೆಲವು ರಾಜ್ಯಗಳಲ್ಲಿ ಈ ಸಿನಿಮಾ ಸ್ಕ್ರೀನಿಂಗ್ ಬ್ಯಾನ್​ ಮಾಡಿದ್ದರೆ ಉತ್ತರ ಪ್ರದೇಶದಂತಹ ರಾಜ್ಯಗಳು ತೆರಿಗೆ ಮುಕ್ತ ಮಾಡಿ ಸಿನಿಮಾ ನೋಡಲು ಅವಕಾಶ ನೀಡಿವೆ.

ದಿ ಕೇರಳ ಸ್ಟೋರಿಯನ್ನು ವಿರೋಧಿಸುವುದು ಭಯೋತ್ಪಾದನೆಯನ್ನು ಬೆಂಬಲಿಸಿದಂತೆ: ಮಮತಾ ಬ್ಯಾನರ್ಜಿ ವಿರುದ್ಧ ಸಚಿವೆ ಸ್ಮೃತಿ ಇರಾನಿ ಗುಡುಗು
ಕೇಂದ್ರ ಸಚಿವೆ ಸ್ಮೃತಿ ಇರಾನಿImage Credit source: Jagaran.com
ನಯನಾ ರಾಜೀವ್
|

Updated on: May 10, 2023 | 8:16 AM

Share

ದಿ ಕೇರಳ ಸ್ಟೋರಿ (The Kerala Story) ಸಿನಿಮಾ ವಿರುದ್ಧ ದೇಶಾದ್ಯಂತ ಪರ ವಿರೋಧಗಳು ವ್ಯಕ್ತವಾಗುತ್ತಿವೆ. ಕೆಲವು ರಾಜ್ಯಗಳಲ್ಲಿ ಈ ಸಿನಿಮಾ ಸ್ಕ್ರೀನಿಂಗ್ ಬ್ಯಾನ್​ ಮಾಡಿದ್ದರೆ ಉತ್ತರ ಪ್ರದೇಶದಂತಹ ರಾಜ್ಯಗಳು ತೆರಿಗೆ ಮುಕ್ತ ಮಾಡಿ ಸಿನಿಮಾ ನೋಡಲು ಅವಕಾಶ ನೀಡಿವೆ.ಇದೀಗ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದು, ದಿ ಕೇರಳ ಸ್ಟೋರಿ ಸಿನಿಮಾ ನೋಡಲು ಅವಕಾಶ ನೀಡದವರು ಭಯೋತ್ಪಾದನೆಗೆ ಬೆಂಬಲ ನೀಡಿದಂತೆ ಎಂದು ಗುಡುಗಿದ್ದಾರೆ.

ಈ ಚಿತ್ರಕ್ಕೆ ವಿರೋಧವಾಗಿ ನಿಂತಿರುವ ಪ್ರತಿಯೊಂದು ರಾಜಕೀಯ ಪಕ್ಷಗಳು, ಭಯೋತ್ಪಾದಕರ ಸಂಘಟನೆಯೊಂದಿಗೆ ನಿಂತಿವೆ. ಸೋಮವಾರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅದರ ಪ್ರದರ್ಶನವನ್ನು ತಕ್ಷಣವೇ ನಿಷೇಧಿಸುವಂತೆ ಆದೇಶಿಸಿದರು. ತಮಿಳುನಾಡಿನಲ್ಲಿ ಕೂಡ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ.

ಮತ್ತಷ್ಟು ಓದಿ: The Kerala Story: ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು: ಎನ್​ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ

ವಾಸ್ತವವಾಗಿ, ಚಿತ್ರದ ಟ್ರೇಲರ್ ಬಿಡುಗಡೆಯಾದಾಗ, ಕೇರಳದ ಸುಮಾರು 32 ಸಾವಿರ ಮಹಿಳೆಯರನ್ನು ಇಸ್ಲಾಮಿಕ್ ಮೂಲಭೂತವಾದಿಗಳಿಂದ ಮತಾಂತರಿಸಲಾಗಿದೆ ಮತ್ತು ಜಿಹಾದ್‌ಗೆ ಬಳಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ನಂತರ ಟ್ರೇಲರ್ ವಿವಾದದ ನಂತರ, 32 ಸಾವಿರ ಮಹಿಳೆಯರನ್ನು ಕೇವಲ ಮೂರು ಮಹಿಳೆಯರಿಗೆ ಬದಲಾಯಿಸಲಾಯಿತು.

ಆದರೆ ಈಗ ಚಿತ್ರ ತೆರೆಗೆ ಬಂದಿದ್ದು, ಎಲ್ಲರೂ ವಿಭಿನ್ನ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಹಲವು ರಾಜ್ಯಗಳಲ್ಲಿ ಈ ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಚಿತ್ರವನ್ನು ಸುದೀಪ್ತೋ ಸೇನ್ ನಿರ್ದೇಶಿಸಿದ್ದಾರೆ ಮತ್ತು ಅದಾ ಶರ್ಮಾ, ಯೋಗಿತಾ ಬಿಹಾನಿ, ಸಿದ್ಧಿ ಇದ್ನಾನಿ ಮತ್ತು ಸೋನಿಯಾ ಬಲಾನಿ ಅಭಿನಯಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ