Jammu and Kashmir: ಭಾರತ ಒಳನುಸುಳಲು ಸಂಚು ರೂಪಿಸಿದ್ದ ಇಬ್ಬರು ಭಯೋತ್ಪಾದಕರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತದ ಒಳನುಸುಳಲು ಪ್ರಯತ್ನಿಸಿದ ಭಯೋತ್ಪಾದಕರನ್ನು ಭಾರತೀಯ ಸೇನೆಯು ವಿಫಲಗೊಳಿಸಿದೆ.

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೂಲಕ ಭಾರತದ ಒಳನುಸುಳಲು ಪ್ರಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆಯು ಹತ್ಯೆಗೈದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಮುಂಜಾನೆ, ಪೂಂಚ್ ಸೆಕ್ಟರ್‌ನಲ್ಲಿ ಕೆಲವು ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ನಂತರ ಪಡೆಗಳು ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ (ಎಲ್‌ಒಸಿ) ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಸೇನೆಯ ಪ್ರಕಾರ, ಸೋಮವಾರ ಬೆಳಿಗ್ಗೆ ಪ್ರಾರಂಭವಾದ ಶೋಧ ಕಾರ್ಯಾಚರಣೆ ಸಂಜೆಯವರೆಗೆ ನಡೆದಿದೆ. ಈಗಲೂ ಈ ಕಾರ್ಯಚರಣೆ ನಡೆಯುತ್ತಿದೆ.
ಇದನ್ನೂ ಓದಿ: ಪೂಂಚ್ನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಸೈನಿಕರು
ಎಲ್‌ಒಸಿಯಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿ ಪೂಂಚ್ ಸೆಕ್ಟರ್‌ನಲ್ಲಿ ಎಲ್‌ಒಸಿ ಉದ್ದಕ್ಕೂ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ